ಪಾಟ್ನಾದಲ್ಲಿ ಪ್ರಧಾನಿ ಮೋದಿಯಿಂದ ಖೇಲೋ ಇಂಡಿಯಾ ಯೂತ್ ಗೇಮ್ಸ್ 2025 ಉದ್ಘಾಟನೆ; ಸಿಎಂ ನಿತೀಶ್ ಕುಮಾರ್
ಬಿಹಾರದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ಅನ್ನು ಆರಂಭಿಸಲಾಗುವುದು. ನಮ್ಮ ದೇಶದಲ್ಲಿ ಆಡುವ ಎಲ್ಲಾ ಕ್ರೀಡೆಗಳಿಗೆ ಬಲವಾದ ಚೌಕಟ್ಟನ್ನು ನಿರ್ಮಿಸುವ ಮೂಲಕ ಭಾರತದಲ್ಲಿ ಕ್ರೀಡಾ ಸಂಸ್ಕೃತಿಯನ್ನು ತಳಮಟ್ಟದಿಂದ ಪುನರುಜ್ಜೀವನಗೊಳಿಸಲು ಮತ್ತು ಭಾರತವನ್ನು ಶ್ರೇಷ್ಠ ಕ್ರೀಡಾ ರಾಷ್ಟ್ರವಾಗಿ ಸ್ಥಾಪಿಸಲು ಖೇಲೋ ಇಂಡಿಯಾ ಕಾರ್ಯಕ್ರಮವನ್ನು ಪರಿಚಯಿಸಲಾಗಿದೆ. ದೇಶದ ಕ್ರೀಡಾ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಭಾರತ ಸರ್ಕಾರವು 2017ರಲ್ಲಿ ಖೇಲೋ ಇಂಡಿಯಾವನ್ನು ಪ್ರಾರಂಭಿಸಿತು.

ಪಾಟ್ನಾ, ಏಪ್ರಿಲ್ 14: “ಖೇಲೋ ಇಂಡಿಯಾ ಯೂತ್ ಗೇಮ್ಸ್, 2025” (Khelo India Youth Games 2025) ಅನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮುಂದಿನ ತಿಂಗಳು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ತಿಳಿಸಿದ್ದಾರೆ. ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ನಿತೀಶ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕ್ರಮದ ಲೋಗೋ ಮತ್ತು ಅದರ ಮ್ಯಾಸ್ಕಾಟ್ “ಶುಭಾಂಕರ್” ಅನ್ನು ರಿಮೋಟ್ ಕಂಟ್ರೋಲ್ ಮೂಲಕ ಅನಾವರಣಗೊಳಿಸಲಾಯಿತು.
ಮೇ 4ರಂದು ಪ್ರಧಾನಿ ಮೋದಿ ಖೇಲೋ ಇಂಡಿಯಾ ಯುವ ಕ್ರೀಡಾಕೂಟವನ್ನು ಪಾಟ್ನಾದಲ್ಲಿ ಉದ್ಘಾಟಿಸಲಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಮೇ 4ರಂದು ಖೇಲೋ ಇಂಡಿಯಾ ಯುವ ಕ್ರೀಡಾಕೂಟ 2025 ಅನ್ನು ಪಾಟ್ನಾದಲ್ಲಿ ಉದ್ಘಾಟಿಸಲಿದ್ದಾರೆ ಎಂಬುದು ನಮಗೆ ಸಂತೋಷದ ವಿಷಯ. ಈ ಕಾರ್ಯಕ್ರಮವು ಬಿಹಾರ ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಬಲಪಡಿಸಲು ನಮಗೆ ಅವಕಾಶವನ್ನು ಒದಗಿಸಿದೆ” ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ: ಮೋದಿ
ಮುಖ್ಯಮಂತ್ರಿ ಕಚೇರಿಯ ಪ್ರಕಾರ, ದೇಶಾದ್ಯಂತದ 8,500 ಕ್ರೀಡಾಪಟುಗಳು ಮತ್ತು 1,500 ತಾಂತ್ರಿಕ ಸಿಬ್ಬಂದಿ ಬಿಹಾರದ 5 ಜಿಲ್ಲೆಗಳಾದ ಪಾಟ್ನಾ, ಗಯಾ, ನಳಂದ, ಭಾಗಲ್ಪುರ ಮತ್ತು ಬೇಗುಸರಾಯ್‌ಗಳಲ್ಲಿ ಮೇ 15ರವರೆಗೆ ನಡೆಯಲಿರುವ “ಖೇಲೋ ಇಂಡಿಯಾ ಯುವ ಕ್ರೀಡಾಕೂಟ 2025″ರಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ‘ಖೇಲೋ ಇಂಡಿಯಾ ಯೂತ್ ಗೇಮ್ಸ್‘: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿವ ಉದಯನಿಧಿ ಸ್ಟಾಲಿನ್
ಖೇಲೋ ಇಂಡಿಯಾ ಯುವ ಕ್ರೀಡಾಕೂಟ:
ಭಾರತ ದೇಶದ ಕ್ರೀಡಾ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಭಾರತ ಸರ್ಕಾರವು 2017ರಲ್ಲಿ ಖೇಲೋ ಇಂಡಿಯಾವನ್ನು ಪ್ರಾರಂಭಿಸಿತು. ಈ ಆಂದೋಲನದ ಭಾಗವಾಗಿ, ಖೇಲೋ ಇಂಡಿಯಾ ಯೂತ್ ಗೇಮ್ಸ್ (KIYG), ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ (KIUG), ಮತ್ತು ಖೇಲೋ ಇಂಡಿಯಾ ವಿಂಟರ್ ಗೇಮ್ಸ್ (KIWG)ಗಳನ್ನು ವಾರ್ಷಿಕ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಾಗಿ ಪರಿಚಯಿಸಲಾಯಿತು. ಈ ಸ್ಪರ್ಧೆಗಳು ಯುವ ಕ್ರೀಡಾಪಟುಗಳು ತಮ್ಮ ರಾಜ್ಯಗಳು ಮತ್ತು ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸಲು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಪದಕಗಳಿಗಾಗಿ ಸ್ಪರ್ಧಿಸಲು ಒಂದು ವೇದಿಕೆಯನ್ನು ಒದಗಿಸುತ್ತವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ