Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ; ಸರ್ಕಾರಗಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ

ದೇಶದ ಪ್ರತಿಯೊಬ್ಬ ನಾಗರಿಕನೂಕೂಡ ಉತ್ತಮ ಜೀವನ ನಡೆಸಬೇಕು, ಎಲ್ಲ ವರ್ಗದವನ್ನೂ ಒಳಗೊಂಡು ಬೆಳವಣಿಗೆಯಾಗಬೇಕು ಎಂಬುದು ಕೇಂದ್ರ ಸರ್ಕಾರದ ಸದಾಶಯ ಎಂದು ಪಿಎಂಒ ಮಾಹಿತಿ ನೀಡಿದೆ.

PM Modi: ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ; ಸರ್ಕಾರಗಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ
ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Jan 22, 2022 | 11:40 AM

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ಯೋಜನೆಗಳು ಆಯಾ ಜಿಲ್ಲೆಗಳ ವ್ಯಾಪ್ತಿಯ ಪ್ರದೇಶದಲ್ಲಿ ಎಷ್ಟರಮಟ್ಟಿಗೆ ಜಾರಿಯಾಗಿವೆ ಎಂಬುದನ್ನು ನೇರವಾಗಿ  ಜಿಲ್ಲಾಧಿಕಾರಿಗಳ ಜತೆಯೇ ಮಾತನಾಡಿ, ಅವರು ತಿಳಿದುಕೊಳ್ಳಲಿದ್ದಾರೆ ಎಂದು ಪಿಎಂಒ ತಿಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರಸರ್ಕಾರವು ದೇಶಾದ್ಯಂತ ಅಭಿವೃದ್ಧಿ ಮತ್ತು ವಿವಿಧ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ದೇಶದ ಪ್ರತಿಯೊಬ್ಬ ನಾಗರಿಕನೂಕೂಡ ಉತ್ತಮ ಜೀವನ ನಡೆಸಬೇಕು, ಎಲ್ಲ ವರ್ಗದವನ್ನೂ ಒಳಗೊಂಡು ಬೆಳವಣಿಗೆಯಾಗಬೇಕು ಎಂಬುದು ಕೇಂದ್ರ ಸರ್ಕಾರದ ಸದಾಶಯ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಶ್ರಮಿಸುತ್ತಿದ್ದಾರೆ ಎಂದು ಪಿಎಂಒ ತಿಳಿಸಿದೆ.  ಹಾಗೇ, ಸರ್ಕಾರದ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಯೊಂದಿಗೆ, ಅವರು ಎದುರಿಸುತ್ತಿರುವ ಸವಾಲುಗಳನ್ನು ತಿಳಿದು, ಪರಿಸ್ಥಿತಿ ಪರಿಶೀಲನೆ ಮಾಡಲು ಪ್ರಸ್ತುತ ಸಂವಾದವು ಸಹಾಯ ಮಾಡಲಿದೆ. ಹಾಗೇ, ಜಿಲ್ಲೆಗಳಲ್ಲಿನ, ವಿವಿಧ ಇಲಾಖೆಗಳ ವಿವಿಧ ಯೋಜನೆಗಳನ್ನು ಸಾಧಿಸುವ ಗುರಿಯೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದೂ ಪಿಎಂಒ ಹೇಳಿದೆ.   ಪ್ರಗತಿ ಮತ್ತು ಅಭಿವೃದ್ಧಿಯಲ್ಲಿನ ಅಸಮಾನತೆ ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಹಾಗೇ, ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ತಳಮಟ್ಟದ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವ ಕೊಡುತ್ತಾರೆ ಎಂದೂ ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?

Published On - 9:46 am, Sat, 22 January 22