PM Narendra Modi: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕೃತ 11 ಬಾಲಕರೊಂದಿಗೆ ಪ್ರಧಾನಿ ಮೋದಿ ಸಂವಾದ

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪಡೆದವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜ.24) ಸಾಯಂಕಾಲ 4ಗಂಟೆಗೆ ನವದೆಹಲಿಯಲ್ಲಿರುವ ಸ್ವ ನಿವಾಸದಲ್ಲಿ ಸಂವಾದ ನಡೆಸಲಿದ್ದಾರೆ.

PM Narendra Modi: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕೃತ 11 ಬಾಲಕರೊಂದಿಗೆ ಪ್ರಧಾನಿ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ
Image Credit source: NDTV

Updated on: Jan 24, 2023 | 7:58 AM

ನವದೆಹಲಿ: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ (Pradhan Mantri Rashtriya Bal Puraskar) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಜ.24) ಸಾಯಂಕಾಲ 4ಗಂಟೆಗೆ ನವದೆಹಲಿಯಲ್ಲಿರುವ ಸ್ವ ನಿವಾಸದಲ್ಲಿ ಸಂವಾದ ನಡೆಸಲಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಭಾರತ ಸರ್ಕಾರವು 6 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಾಲಕರಿಗೆ ನೀಡುತ್ತದೆ. ಸಂಸ್ಕೃತಿ, ಶೌರ್ಯ, ಆವಿಷ್ಕಾರ, ಪಾಂಡಿತ್ಯ, ಸಮಾಜ ಸೇವೆ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮನ್ನಣೆಗೆ ಪಾತ್ರವಾದ 5 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊಡಲಾಗುತ್ತದೆ. ಪುರಸ್ಕೃತರಿಗೆ ಪದಕ, 1 ಲಕ್ಷ ರೂ. ನಗದು ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ.

ಇದನ್ನೂ ಓದಿ: ಅಂಡಮಾನ್, ನಿಕೋಬಾರ್​ನ 21 ದ್ವೀಪಗಳಿಗೆ ಪರಮವೀರ ಚಕ್ರ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ

11 ಬಾಲಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

ಕೇಂದ್ರಾಡಳಿತ ಪ್ರದೇಶದ ಮತ್ತು 11 ರಾಜ್ಯಗಳ 6 ಬಾಲಕರು, 5 ಬಾಲಕಿಯರಿಗೆ ನಿನ್ನೆ (ಜ.23) ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು ಸಂಸ್ಕೃತಿ, ಶೌರ್ಯ, ಆವಿಷ್ಕಾರ, ಪಾಂಡಿತ್ಯ, ಸಮಾಜ ಸೇವೆ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮನ್ನಣೆಗೆ ಪಾತ್ರವಾದ 5 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊಡಲಾಗುತ್ತದೆ. ಈ ವರ್ಷ ಸಾಂಸ್ಕೃತಿಕ ವಿಭಾಗದಲ್ಲಿ 4, ಸಮಾಜ ಸೇವೆ ಮತ್ತು ಶೌರ್ಯಕ್ಕೆ ತಲಾ ಒಬ್ಬರು, ಆವಿಷ್ಕಾರದಲ್ಲಿ 2 ಹಾಗೂ ಕ್ರೀಡೆಯಲ್ಲಿ 3 ಮಕ್ಕಳು ಪುರಸ್ಕಾರ ಪಡೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Tue, 24 January 23