ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಪ್ರಧಾನಮಂತ್ರಿಯವರು ಗುವಾಹಟಿಯ ಏಮ್ಸ್‌ನ್ನು  ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇಲ್ಲಿ ಅವರು 3,400 ಕೋಟಿ. ರೂ.ಗಿಂತ ಹೆಚ್ಚಿನ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿ
Follow us
|

Updated on:Apr 12, 2023 | 2:55 PM

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಏಪ್ರಿಲ್ 14 ರಂದು ಅಸ್ಸಾಂಗೆ (Assam) ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರಧಾನಮಂತ್ರಿಯವರು ಏಮ್ಸ್ ಗುವಾಹಟಿ ತಲುಪಿ ಅಲ್ಲಿ ಹೊಸದಾಗಿ ನಿರ್ಮಿಸಿರುವ ಕ್ಯಾಂಪಸ್ ಅನ್ನು ಪರಿಶೀಲಿಸಲಿದ್ದಾರೆ. ನಂತರ ಸಾರ್ವಜನಿಕ ಸಮಾರಂಭದಲ್ಲಿ, ಅವರು AIIMS ಗುವಾಹಟಿ ಮತ್ತು ಇತರ ಮೂರು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ಅಸ್ಸಾಂ ಅಡ್ವಾನ್ಸ್ಡ್ ಹೆಲ್ತ್ ಕೇರ್ ಇನ್ನೋವೇಶನ್ ಇನ್ಸ್ಟಿಟ್ಯೂಟ್​​ಗೆ (AAHII)  ಅಡಿಪಾಯ ಹಾಕುವುದು, ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಕಾರ್ಡ್‌ಗಳನ್ನು ವಿತರಿಸುವ ಮೂಲಕ ‘ಆಪ್ಕೇ ದ್ವಾರ ಆಯುಷ್ಮಾನ್’ ಅಭಿಯಾನಕ್ಕೂ ಮೋದಿ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2:15 ರ ಸುಮಾರಿಗೆ, ಗುವಾಹಟಿಯ ಶ್ರೀಮಂತ ಶಂಕರದೇವ್ ಕಲಾಕ್ಷೇತ್ರದಲ್ಲಿ ಗುವಾಹಟಿ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಗಳ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ, ಸಾರ್ವಜನಿಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲು ಪ್ರಧಾನಮಂತ್ರಿಯವರು ಗುವಾಹಟಿಯ ಸರುಸಜೈ ಕ್ರೀಡಾಂಗಣ ತಲುಪಲಿದ್ದಾರೆ. ಅಲ್ಲಿ ಪ್ರಧಾನಮಂತ್ರಿಯವರು ಶಿಲಾನ್ಯಾಸವನ್ನು ಮಾಡಲಿದ್ದು ನಾಮ್ರೂಪ್‌ನಲ್ಲಿ 500 ಟಿಪಿಡಿ ಮೆಂಥಾಲ್ ಪ್ಲಾಂಟ್‌ನ ಕಾರ್ಯಾರಂಭ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ. ಪಲಾಶಬರಿ ಮತ್ತು ಸುಲ್ಕುಚಿಯನ್ನು ಸಂಪರ್ಕಿಸುವ ಬ್ರಹ್ಮಪುತ್ರ ನದಿಯ ಸೇತುವೆಯ ಶಂಕುಸ್ಥಾಪನೆ, ರಂಗ್ ಘರ್, ಶಿವಸಾಗರದ ಸುಂದರೀಕರಣಕ್ಕೆ ಶಂಕುಸ್ಥಾಪನೆ, ಮತ್ತು ಐದು ರೈಲ್ವೆ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

ಪ್ರಧಾನಮಂತ್ರಿಯವರು ಗುವಾಹಟಿಯ ಏಮ್ಸ್‌ನ್ನು  ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇಲ್ಲಿ ಅವರು 3,400 ಕೋಟಿ. ರೂ.ಗಿಂತ ಹೆಚ್ಚಿನ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ,  ಗುವಾಹಟಿಯ ಏಮ್ಸ್‌ನ ಕಾರ್ಯಾಚರಣೆಯು ಅಸ್ಸಾಂ ರಾಜ್ಯ ಮತ್ತು ಇಡೀ ಈಶಾನ್ಯ ಪ್ರದೇಶಕ್ಕೆ ಮಹತ್ವದ ಸಂದರ್ಭವನ್ನು ಗುರುತಿಸುತ್ತದೆ. ಈ ಆಸ್ಪತ್ರೆಗೆ ಮೋದಿಯವರೇ ಮೇ 2017 ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. 1120 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿರುವ AIIMS ಗುವಾಹಟಿಯು 30 ಆಯುಷ್ ಹಾಸಿಗೆಗಳು ಸೇರಿದಂತೆ 750 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿರುವ ಅತ್ಯಾಧುನಿಕ ಆಸ್ಪತ್ರೆಯಾಗಿದೆ.  ಆಸ್ಪತ್ರೆಯು ಈಶಾನ್ಯ ಭಾಗದ ಜನರಿಗೆ ವಿಶ್ವದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಿದೆ.

ಪ್ರಧಾನಮಂತ್ರಿಯವರು ನಲ್ಬರಿ ವೈದ್ಯಕೀಯ ಕಾಲೇಜು, ನಾಗಾನ್ ವೈದ್ಯಕೀಯ ಕಾಲೇಜುಮತ್ತು ಕೊಕ್ರಜಾರ್ ವೈದ್ಯಕೀಯ ಕಾಲೇಜು- ಹೀಗೆ ಮೂರು ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದನ್ನು ಕ್ರಮವಾಗಿ ಸುಮಾರು ರೂ. 615 ಕೋಟಿ, ರೂ. 600 ಕೋಟಿ ಮತ್ತು ರೂ. 535 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರತಿ ವೈದ್ಯಕೀಯ ಕಾಲೇಜು ತುರ್ತು ಸೇವೆಗಳು,ಐಸಿಯು ಸೌಲಭ್ಯಗಳು, ಒಟಿ ಮತ್ತು ರೋಗನಿರ್ಣಯದ ಸೌಲಭ್ಯಗಳು ಇತ್ಯಾದಿ ಸೇರಿದಂತೆ OPD/ IPD ಸೇವೆಗಳೊಂದಿಗೆ 500 ಹಾಸಿಗೆಗಳ ಬೋಧನಾ ಆಸ್ಪತ್ರೆಗಳನ್ನು ಹೊಂದಿದೆ. ಪ್ರತಿ ವೈದ್ಯಕೀಯ ಕಾಲೇಜು 100 MBBS ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೊಂದಿರುತ್ತದೆ.

‘ಆಪ್ಕೇ ದ್ವಾರ ಆಯುಷ್ಮಾನ್’ ಅಭಿಯಾನಕ್ಕೂ ಮೋದಿ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಯವರು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಕಾರ್ಡ್‌ಗಳನ್ನು ಮೂರು ಪ್ರತಿನಿಧಿ ಫಲಾನುಭವಿಗಳಿಗೆ ವಿತರಿಸಲಿದ್ದಾರೆ. ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸುಮಾರು 1.1 ಕೋಟಿ AB-PMJAY ಕಾರ್ಡ್‌ಗಳನ್ನು ವಿತರಿಸಲಾಗುವುದು.

ಇದನ್ನೂ ಓದಿ:Mann Ki Baat 100th Episode: ಜನಸಾಮಾನ್ಯರಿಗಾಗಿ ಮನ್ ಕಿ ಬಾತ್; 100 ನೇ ಸಂಚಿಕೆ ಮುಟ್ಟಲಿರುವ ಮೋದಿ ಶೋ

ಅಸ್ಸಾಂ ಅಡ್ವಾನ್ಸ್ಡ್ ಹೆಲ್ತ್ ಕೇರ್ ಇನ್ನೋವೇಶನ್ ಇನ್ಸ್ಟಿಟ್ಯೂಟ್ (AAHII) ನ ಅಡಿಪಾಯವು ಆರೋಗ್ಯಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ‘ಆತ್ಮನಿರ್ಭರ್ ಭಾರತ್’ ಮತ್ತು ‘ಮೇಕ್ ಇನ್ ಇಂಡಿಯಾ’ದ ಪ್ರಧಾನ ಮಂತ್ರಿಗಳ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಒಂದು ಹೆಜ್ಜೆಯಾಗಿದೆ. AAHIIಯನ್ನು ರೂ 546 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದು ವೈದ್ಯಕೀಯ ಮತ್ತು ಆರೋಗ್ಯ ರಕ್ಷಣೆಯಲ್ಲಿ ಅತ್ಯಾಧುನಿಕ ಆವಿಷ್ಕಾರಗಳು ಮತ್ತು ಆರ್ ಆಂಡ್ ಡಿ, ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಹೊಸ ತಂತ್ರಜ್ಞಾನಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.

ಗುವಾಹಟಿ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಗಳನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ. ಇಲ್ಲಿ ಅಸ್ಸಾಂ ಪೊಲೀಸರು ವಿನ್ಯಾಸಗೊಳಿಸಿದ ಮೊಬೈಲ್ ಅಪ್ಲಿಕೇಶನ್ ‘ಅಸ್ಸಾಂ ಕಾಪ್’ ಅನ್ನು ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ.ಮೋದಿ ಪಲಾಶಬರಿ ಮತ್ತು ಸುಲ್ಕುಚಿಯನ್ನು ಸಂಪರ್ಕಿಸುವ ಬ್ರಹ್ಮಪುತ್ರ ನದಿಯ ಸೇತುವೆಯ ಶಂಕುಸ್ಥಾಪನೆಯನ್ನು ಮಾಡಲಿದ್ದಾರೆ. ಅವರು ದಿಬ್ರುಗಢ್‌ನ ನಾಮ್ರೂಪ್‌ನಲ್ಲಿ 500 ಟಿಪಿಡಿ ಮೆಥೆನಾಲ್ ಸ್ಥಾವರವನ್ನು ಪ್ರಾರಂಭಿಸಲಿದ್ದಾರೆ. ಅವರು ಈ ಪ್ರದೇಶದ ವಿವಿಧ ವಿಭಾಗಗಳ ದ್ವಿಗುಣ ಮತ್ತು ವಿದ್ಯುದ್ದೀಕರಣ ಸೇರಿದಂತೆ ಐದು ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಮಂತ್ರಿಯವರು ಶಿವಸಾಗರದಲ್ಲಿ ರಂಗ್ ಘರ್ ಅನ್ನು ಸುಂದರಗೊಳಿಸುವ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಅಸ್ಸಾಮಿನ ಬಿಹು ನೃತ್ಯವನ್ನು ಅಸ್ಸಾಮಿನ ಸಾಂಸ್ಕೃತಿಕ ಗುರುತು ಮತ್ತು ಜೀವನದ ಗುರುತಾಗಿ ಜಾಗತಿಕವಾಗಿ ಪ್ರದರ್ಶಿಸುವ ಸಲುವಾಗಿ ಆಯೋಜಿಸಲಾದ ಮೆಗಾ ಬಿಹು ನೃತ್ಯಕ್ಕೂ ಪ್ರಧಾನಿ ಸಾಕ್ಷಿಯಾಗಲಿದ್ದಾರೆ. ಈ ಕಾರ್ಯಕ್ರಮವು ಒಂದೇ ಸ್ಥಳದಲ್ಲಿ 10,000 ಕ್ಕೂ ಹೆಚ್ಚು ಪ್ರದರ್ಶಕರು/ಬಿಹು ಕಲಾವಿದರನ್ನು ಒಳಗೊಂಡಿರುತ್ತದೆ, ಇದರಲ್ಲಿ ರಾಜ್ಯದ 31 ಜಿಲ್ಲೆಗಳ ಕಲಾವಿದರು ಭಾಗವಹಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 12 April 23