ಪ್ರಧಾನಿ ಮೋದಿಯಿಂದ ಮಹಾರಾಷ್ಟ್ರ, ಗೋವಾ ಪ್ರವಾಸ: ಬೃಹತ್ ಯೋಜನೆಗಳು, ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ, ಇಲ್ಲಿದೆ ಸಂಪೂರ್ಣ ವಿವರ

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಗುರುವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ‘ನಮೋ ಶೇತ್ಕರಿ ಮಹಾಸಮ್ಮಾನ್ ನಿಧಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ ಸುಮಾರು 7,500 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಮೋದಿಯವರು ಗೋವಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿಯಿಂದ ಮಹಾರಾಷ್ಟ್ರ, ಗೋವಾ ಪ್ರವಾಸ: ಬೃಹತ್ ಯೋಜನೆಗಳು, ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ, ಇಲ್ಲಿದೆ ಸಂಪೂರ್ಣ ವಿವರ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Oct 26, 2023 | 11:05 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಗುರುವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ‘ನಮೋ ಶೇತ್ಕರಿ ಮಹಾಸಮ್ಮಾನ್ ನಿಧಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ ಸುಮಾರು 7,500 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿಯವರು ಗೋವಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶಿರಡಿ ತಲುಪಲಿದ್ದು, ಅಲ್ಲಿ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದು, ದೇವಸ್ಥಾನದಲ್ಲಿ ನೂತನ ದರ್ಶನ ಸರತಿ ಸಾಲು ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ನಿಲ್ವಾಂಡೆ ಅಣೆಕಟ್ಟಿನ ಜಲಪೂಜೆಯನ್ನು ನೆರವೇರಿಸಲಿದ್ದಾರೆ ಮತ್ತು ಅಣೆಕಟ್ಟಿನ ಕಾಲುವೆ ಜಾಲವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಶಿರಡಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಅವರು ಆರೋಗ್ಯ, ರೈಲು, ರಸ್ತೆ ಮತ್ತು ತೈಲ ಮತ್ತು ಅನಿಲದಂತಹ ಕ್ಷೇತ್ರಗಳಲ್ಲಿ ಸುಮಾರು 7500 ಕೋಟಿ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಕೆಲವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಇನ್ನು ಕೆಲವು ಶಂಕುಸ್ಥಾಪನೆಗಳನ್ನು ನೆರವೇರಿಸಲಿದ್ದಾರೆ. 2018 ರ ಅಕ್ಟೋಬರ್‌ನಲ್ಲಿ ಶಿರಡಿಯಲ್ಲಿ ದರ್ಶನ್ ಕತಾರ್ ಸಂಕೀರ್ಣದ ಶಂಕುಸ್ಥಾಪನೆಯನ್ನು ಪ್ರಧಾನಿ ಮಾಡಿದ್ದರು.

ಮತ್ತಷ್ಟು ಓದಿ: 6 ತಿಂಗಳಲ್ಲಿ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನಿ ಮೋದಿ ನಿರ್ದೇಶನ

ಪ್ರಧಾನಿಯವರು ರಾಷ್ಟ್ರಕ್ಕೆ ಸಮರ್ಪಿಸಲಿರುವ ನಿಲ್ವಾಂಡೆ ಅಣೆಕಟ್ಟಿನ ಎಡದಂಡೆಯ ಕಾಲುವೆ ಜಾಲ (85 ಕಿಮೀ) 7 ತೆಹಸಿಲ್‌ಗಳ (ಅಹ್ಮದ್‌ನಗರ ಜಿಲ್ಲೆಯ 6 ಮತ್ತು ನಾಸಿಕ್ ಜಿಲ್ಲೆಯ 1) 182 ಹಳ್ಳಿಗಳಿಗೆ ನೀರಿನ ಪೈಪ್ ವಿತರಣಾ ಜಾಲವನ್ನು ಒದಗಿಸುವ ಮೂಲಕ ಪ್ರಯೋಜನವನ್ನು ನೀಡುತ್ತದೆ. ನಿಲ್ವಾಂಡೆ ಅಣೆಕಟ್ಟಿನ ಕಲ್ಪನೆಯು ಮೊದಲು 1970 ರಲ್ಲಿ ಬಂದಿತು. ಸುಮಾರು 5177 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ.

ಮಹಾರಾಷ್ಟ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 86 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ವರ್ಷಕ್ಕೆ 6,000  ರೂ ಹೆಚ್ಚುವರಿ ಮೊತ್ತವನ್ನು ಒದಗಿಸುವ ಮೂಲಕ ಪ್ರಯೋಜನ ಪಡೆಯುತ್ತಾರೆ.

ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಆಯುಷ್ ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಮತ್ತು ಇನ್ನೂ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಪ್ರಧಾನಮಂತ್ರಿಯವರು ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕ್ರೀಡಾಕೂಟವು ಅಕ್ಟೋಬರ್ 26 ರಿಂದ ನವೆಂಬರ್ 9 ರವರೆಗೆ ನಡೆಯಲಿದೆ ಮತ್ತು 10,000 ಕ್ಕೂ ಹೆಚ್ಚು ಕ್ರೀಡಾಪಟುಗಳು 28 ಸ್ಥಳಗಳಲ್ಲಿ 43 ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:03 am, Thu, 26 October 23