AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ಮೋದಿ ಚಾಲನೆ; ಇದರ ವಿಶೇಷತೆ ಒಂದೆರಡಲ್ಲ!

ಭಾರತೀಯ ರೈಲ್ವೆ ವಲಯದಲ್ಲಿ ಪರಿಸರಸ್ನೇಹಿ ತಂತ್ರಜ್ಞಾನದ ಹೊಸ ಕ್ರಾಂತಿಗೆ ನಾಳೆ ಅಧಿಕೃತ ಚಾಲನೆ ಸಿಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಯಾಣದ ಜಿಂದ್‌ನಿಂದ ಭಾರತದ ಮೊಟ್ಟಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಉದ್ಘಾಟಿಸಲಿದ್ದಾರೆ. ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲಿ ವಿನ್ಯಾಸಗೊಳಿಸಲಾದ ಈ ರೈಲಿನ ಮೂಲಕ ಭಾರತವು ಜರ್ಮನಿ, ಜಪಾನ್, ಚೀನಾ ಮತ್ತು ಅಮೆರಿಕದಂತಹ ಅತ್ಯಾಧುನಿಕ ರೈಲ್ವೆ ತಂತ್ರಜ್ಞಾನ ಹೊಂದಿರುವ ಜಾಗತಿಕ ದೇಶಗಳ ಸಾಲಿಗೆ ಸೇರಲಿದೆ. ಈ ರೈಲುಗಳು ಡೀಸೆಲ್ ರೈಲುಗಳಿಗಿಂತ ಅತ್ಯಂತ ಶಬ್ದರಹಿತವಾಗಿ ಹಾಗೂ ಶೂನ್ಯ ಮಾಲಿನ್ಯದೊಂದಿಗೆ ಚಲಿಸಲಿವೆ.

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ಮೋದಿ ಚಾಲನೆ; ಇದರ ವಿಶೇಷತೆ ಒಂದೆರಡಲ್ಲ!
Hydrogen Powered TrainImage Credit source: PTI
ಸುಷ್ಮಾ ಚಕ್ರೆ
|

Updated on:Jul 16, 2026 | 9:46 PM

Share

ಮುಖ್ಯಾಂಶಗಳು

  • ಭಾರತದ ಮೊಟ್ಟಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಚಾಲನೆ
  • ಇದು ವಿಶ್ವದ ಅತಿ ದೊಡ್ಡ ಹೈಡ್ರೋಜನ್ ರೈಲುಗಳಲ್ಲಿ ಒಂದು
  • ಹರಿಯಾಣದಲ್ಲಿ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ

ಚಂಡೀಗಢ, ಜುಲೈ 16: ಭಾರತೀಯ ರೈಲ್ವೆ ಇತಿಹಾಸದಲ್ಲಿ ನಾಳೆ (ಜುಲೈ 17) ಮತ್ತೊಂದು ಸುವರ್ಣ ಅಧ್ಯಾಯ ಸೃಷ್ಟಿಯಾಗಲಿದೆ. ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಲ್ಲಿ ತಯಾರಾಗಿರುವ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ (Hydrogen-powered train) ನಾಳೆ ಹರಿಯಾಣದ ಜಿಂದ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಹಸಿರು ನಿಶಾನೆ ತೋರಿಸಲಿದ್ದಾರೆ. ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲಿ (ICF) ವಿನ್ಯಾಸಗೊಳಿಸಲಾದ ಈ ರೈಲಿನ ಉದ್ಘಾಟನೆಯೊಂದಿಗೆ, ಪರಿಸರಸ್ನೇಹಿ ರೈಲು ಸಾರಿಗೆಗಾಗಿ ಹೈಡ್ರೋಜನ್ ತಂತ್ರಜ್ಞಾನ ಬಳಸುತ್ತಿರುವ ಜರ್ಮನಿ, ಜಪಾನ್, ಚೀನಾ ಮತ್ತು ಅಮೆರಿಕದಂತಹ ವಿಶ್ವದ ಆಯ್ದ ದೇಶಗಳ ಸಾಲಿಗೆ ಭಾರತವೂ ಸೇರಲಿದೆ. ಈ ಪ್ರತಿ ರೈಲಿಗೆ ಸುಮಾರು 80 ಕೋಟಿ ವೆಚ್ಚವಾಗಲಿದೆ.

ಈ ರೈಲಿನ ವಿಶೇಷತೆಯೇನು?:

ಪರಿಸರ ಮಾಲಿನ್ಯ ಮುಕ್ತ ಮತ್ತು ಇಂಧನ ದಕ್ಷತೆಯ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆಯ ಈ ಪ್ರಾಯೋಗಿಕ ಯೋಜನೆ ದೇಶದ ಮೂಲಸೌಕರ್ಯ ರಂಗದಲ್ಲಿ ದೊಡ್ಡ ಮೈಲಿಗಲ್ಲಾಗಿದೆ. ಸಾಂಪ್ರದಾಯಿಕ ಡೀಸೆಲ್ ರೈಲುಗಳಿಗಿಂತ ಈ ಹೈಡ್ರೋಜನ್ ರೈಲುಗಳು ಅತ್ಯಂತ ಶಬ್ದರಹಿತವಾಗಿ ಚಲಿಸಲಿವೆ. ಘಟಕದಲ್ಲಿ ಹೈಡ್ರೋಜನ್ ಸೋರಿಕೆ ಪತ್ತೆಹಚ್ಚುವ ಯಂತ್ರಗಳು ಮತ್ತು ಜ್ವಾಲೆ ಪತ್ತೆಹಚ್ಚುವ ಸೆನ್ಸರ್‌ಗಳನ್ನು ಅಳವಡಿಸಲಾಗಿದ್ದು, ಧೂಳು ಕುಳಿತುಕೊಳ್ಳದಂತೆ ಇವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತದೆ. ಇಲ್ಲಿ ನಿಯೋಜಿಸಲಾದ ಸಿಬ್ಬಂದಿ ಮತ್ತು ರೈಲು ಚಾಲಕರಿಗೆ ಕಟ್ಟುನಿಟ್ಟಾದ ವಿಶೇಷ ತರಬೇತಿ ನೀಡಿ ಸಾಮರ್ಥ್ಯ ಪ್ರಮಾಣಪತ್ರಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಜಾಗತಿಕವಾಗಿ ಚಲಿಸುವ ಬಹುತೇಕ ಹೈಡ್ರೋಜನ್ ರೈಲುಗಳು ಕೇವಲ 2ರಿಂದ 4 ಬೋಗಿಗಳನ್ನು ಹೊಂದಿದ್ದು, ಸಣ್ಣ ಪ್ರಾದೇಶಿಕ ಮಾರ್ಗಗಳಲ್ಲಿ ಮಾತ್ರ ಸಂಚರಿಸುತ್ತವೆ. ಆದರೆ, ಭಾರತದ ಈ ಹೊಸ ರೈಲು 10 ಬೋಗಿಗಳನ್ನು ಹೊಂದಿದ್ದು, ವಿಶ್ವದ ಅತಿ ದೊಡ್ಡ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲುಗಳಲ್ಲಿ ಒಂದಾಗಿದೆ. ಈ ಯೋಜನೆಯ ಅಂಗವಾಗಿ ದೇಶದ ಅತಿ ದೊಡ್ಡ ರೈಲ್ವೆ ಹೈಡ್ರೋಜನ್ ಸಂಗ್ರಹಣೆ ಮತ್ತು ಇಂಧನ ಮರುಪೂರಣ ಘಟಕವನ್ನು ಹರಿಯಾಣದ ಜಿಂದ್‌ನಲ್ಲಿ ಸ್ಥಾಪಿಸಲಾಗಿದೆ. ಈ 10 ಬೋಗಿಗಳ ರೈಲು ಗಂಟೆಗೆ 75 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ. ಆದರೆ, ಇದನ್ನು ಗರಿಷ್ಠ 110 ಕಿಲೋಮೀಟರ್ ವೇಗದಲ್ಲಿಯೂ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಬೋಗಿಗಳ ವಿನೂತನ ವಿನ್ಯಾಸ:

ಈ ರೈಲಿನಲ್ಲಿ ಎರಡು ಹೈಡ್ರೋಜನ್ ಡ್ರೈವಿಂಗ್ ಪವರ್ ಕಾರ್‌ಗಳು (DPCs) ಮತ್ತು 8 ಟ್ರೈಲರ್ ಕೋಚ್‌ಗಳು (TCs) ಇರಲಿದ್ದು, ಏಕಕಾಲಕ್ಕೆ ಸುಮಾರು 2,600 ಪ್ರಯಾಣಿಕರು ಇದರಲ್ಲಿ ಪ್ರಯಾಣಿಸಬಹುದು. ಪ್ರತಿ ಪವರ್ ಕಾರ್‌ನಲ್ಲಿ ಇಂಧನ ಕೋಶಗಳು, ಲಿಥಿಯಂ ಐರನ್ ಫಾಸ್ಫೇಟ್ (LFP) ಬ್ಯಾಟರಿಗಳು ಮತ್ತು ಹೈಡ್ರೋಜನ್ ಸಂಗ್ರಹಣಾ ಸಿಲಿಂಡರ್‌ಗಳನ್ನು ಅಳವಡಿಸಲಾಗಿದೆ. ಈ ರೈಲು 89 ಕಿಲೋಮೀಟರ್ ಉದ್ದದ ಜಿಂದ್-ಸೋನಿಪತ್ ಪ್ರತ್ಯೇಕ ರೈಲು ಮಾರ್ಗದಲ್ಲಿ ಸಂಚರಿಸಲಿದೆ.

ರೈಲಿನ ವೇಳಾಪಟ್ಟಿ:

ಈ ರೈಲು ತನ್ನ ನಿಯಮಿತ ಸೇವೆಯ ಅವಧಿಯಲ್ಲಿ ಜಿಂದ್ ರೈಲು ನಿಲ್ದಾಣದಿಂದ ಬೆಳಿಗ್ಗೆ 7.40ಕ್ಕೆ ಹೊರಟು, ಬೆಳಿಗ್ಗೆ 9.40ಕ್ಕೆ ಸೋನಿಪತ್ ತಲುಪಲಿದೆ. ಈ ರೈಲು ತನ್ನ ಪ್ರಯಾಣದ ಅವಧಿಯಲ್ಲಿ ಜಿಂದ್ ಸಿಟಿ, ಪಾಂಡು ಪಿಂಡಾರಾ, ಲಲಿತ್ ಖೇರಾ, ಭಾಂಬೇವಾ, ಇಶಾಪುರ್ ಖೇರಿ, ಬುಟಾನಾ, ಖಾಂದ್ರೈ, ಗೋಹಾನಾ, ರಾಭ್ರಾ, ಲಾತ್, ಮೋಹಾನಾ ಹರಿಯಾಣ ಮತ್ತು ಬರ್ವಾಸ್ನಿ ಸೇರಿದಂತೆ ಒಟ್ಟು 12 ನಿಲ್ದಾಣಗಳನ್ನು ಕವರ್ ಮಾಡಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Thu, 16 July 26

Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​