PM Pvtg Mission: ಇಂದು ಆದಿವಾಸಿಗಳ ಸಬಲೀಕರಣಕ್ಕಾಗಿ ರೂಪುಗೊಂಡಿರುವ ಪಿವಿಟಿಜಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಆದಿವಾಸಿಗಳ ಅಭ್ಯುದಯಕ್ಕಾಗಿ 24,000 ಕೋಟಿ ರೂ.ಗಳ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಆದಿವಾಸಿಗಳನ್ನು ಸಬಲೀಕರಣಗೊಳಿಸಲು ಪ್ರಮುಖ ಹೆಜ್ಜೆ ಇರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಪಿವಿಟಿಜಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

PM Pvtg Mission: ಇಂದು ಆದಿವಾಸಿಗಳ ಸಬಲೀಕರಣಕ್ಕಾಗಿ ರೂಪುಗೊಂಡಿರುವ ಪಿವಿಟಿಜಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ನರೇಂದ್ರ ಮೋದಿImage Credit source: The Hindu
Follow us
ನಯನಾ ರಾಜೀವ್
|

Updated on:Nov 15, 2023 | 8:08 AM

ಆದಿವಾಸಿಗಳ ಅಭ್ಯುದಯಕ್ಕಾಗಿ 24,000 ಕೋಟಿ ರೂ.ಗಳ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಆದಿವಾಸಿಗಳನ್ನು ಸಬಲೀಕರಣಗೊಳಿಸಲು ಪ್ರಮುಖ ಹೆಜ್ಜೆ ಇರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಪಿವಿಟಿಜಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಮೋದಿ ಸರ್ಕಾರವು 24,000 ಕೋಟಿ ರೂಪಾಯಿಗಳ ಯೋಜನೆಯನ್ನು ಪ್ರಾರಂಭಿಸುತ್ತದೆ. ಸ್ವಾತಂತ್ರ್ಯಾ ನಂತರ ದೇಶದಲ್ಲಿ ಈ ರೀತಿಯ ಮೊದಲ ಯೋಜನೆ ಇದಾಗಿದೆ. ಇದನ್ನು PM PVTG (ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು) ಅಭಿವೃದ್ಧಿ ಮಿಷನ್ ಎಂದು ಹೆಸರಿಸಲಾಗಿದೆ.

ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳ (PVTG) ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಇದರ ಉದ್ದೇಶವಾಗಿದೆ. ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂತಹ 75 ಬುಡಕಟ್ಟುಗಳಿವೆ. ಅವರು 200 ಜಿಲ್ಲೆಗಳಲ್ಲಿ 22,544 ಹಳ್ಳಿಗಳಲ್ಲಿ ವಾಸಿಸುತ್ತಿದ್ದಾರೆ ಮತ್ತು 28 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದಾರೆ.

ಈ ಬುಡಕಟ್ಟುಗಳು ಹೆಚ್ಚಾಗಿ ದಟ್ಟವಾದ ಕಾಡುಗಳಲ್ಲಿ ವಾಸಿಸುತ್ತವೆ, ಅವರನ್ನು ತಲುಪುವುದು ಸುಲಭವಲ್ಲ, ಹೀಗಾಗಿ ಅವರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.

ಮತ್ತಷ್ಟು ಓದಿ: ಮೂರ್ಖರ ಸರದಾರ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಸರ್ಕಾರದ ಮೂಲಗಳ ಪ್ರಕಾರ, ಮಿಷನ್ ಅಡಿಯಲ್ಲಿ ರಸ್ತೆ ಮತ್ತು ಟೆಲಿಕಾಂ ಸಂಪರ್ಕ, ವಿದ್ಯುತ್, ವಸತಿ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶ ಸೌಲಭ್ಯಗಳನ್ನು ಈ ಬುಡಕಟ್ಟು ಪ್ರದೇಶಗಳಲ್ಲಿ ಒದಗಿಸಲಾಗುವುದು. ಅಲ್ಲದೆ, ಅವರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸಲಾಗುವುದು. ಒಂಬತ್ತು ಸಚಿವಾಲಯಗಳ 11 ಯೋಜನೆಗಳ ಮೂಲಕ ಈ ಮಿಷನ್ ಅನ್ನು ಕಾರ್ಯಗತಗೊಳಿಸಲಾಗುತ್ತದೆ. ಯೋಜನೆಯ ಕೆಲವು ಷರತ್ತುಗಳನ್ನು ಸಹ ಸಡಿಲಗೊಳಿಸಲಾಗುವುದು.

ನವೆಂಬರ್ 15 ರಂದು ಬೆಳಗ್ಗೆ ಮೋದಿಯವರು ಮೊದಲು ರಾಜಧಾನಿಯ ಜೈಲ್ ಚೌಕ್‌ನಲ್ಲಿರುವ ಬಿರ್ಸಾ ಮುಂಡಾ ಮೆಮೋರಿಯಲ್ ಗಾರ್ಡನ್ ಕಮ್ ಫ್ರೀಡಂ ಫೈಟರ್ಸ್ ಮ್ಯೂಸಿಯಂ’ಗೆ ತೆರಳಲಿದ್ದಾರೆ. ಇದಾದ ಬಳಿಕ ರಾಂಚಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಖುಂಟಿಗೆ ತೆರಳಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:07 am, Wed, 15 November 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್