Swachh Bharat Mission Urban 2.0: ನಗರಗಳಲ್ಲಿ ಸ್ವಚ್ಛ ಭಾರತ ಮಿಷನ್ 2.0 ಗೆ ಶುಕ್ರವಾರ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

PM Narendra Modi: ದೇಶದ ಎಲ್ಲ ನಗರಗಳನ್ನೂ ಕಸಮುಕ್ತಗೊಳಿಸುವ ಮತ್ತು ನೀರಿನ ಮೂಲಗಳ ಸುರಕ್ಷಿತವಾಗಿರಿಸುವ ಉದ್ದೇಶದ ಮೇರೆಗೆ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

Swachh Bharat Mission Urban 2.0: ನಗರಗಳಲ್ಲಿ ಸ್ವಚ್ಛ ಭಾರತ ಮಿಷನ್ 2.0 ಗೆ ಶುಕ್ರವಾರ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: guruganesh bhat

Updated on:Sep 30, 2021 | 10:35 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಅಕ್ಟೋಬರ್ 1) ಬೆಳಗ್ಗೆ 11 ಗಂಟೆಗೆ ನಗರ ವಿಭಾಗದ ಸ್ವಚ್ಛ ಭಾರತ ಮಿಷನ್  2.0 ಮತ್ತು ಅಮೃತ್ 2.0 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದೇಶದ ಎಲ್ಲ ನಗರಗಳನ್ನೂ ಕಸಮುಕ್ತಗೊಳಿಸುವ ಮತ್ತು ನೀರಿನ ಮೂಲಗಳ ಸುರಕ್ಷಿತವಾಗಿರಿಸುವ ಉದ್ದೇಶದ ಮೇರೆಗೆ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

2009ರಲ್ಲಿ ಜಾರಿಗೆ ಬಂದಿದ್ದ ನಿರ್ಮಲ ಭಾರತ ಯೋಜನೆಯು ಅಷ್ಟು ಪರಿಣಾಮಕಾರಿಯಾಗಿ ಜಾರಿಗೊಳ್ಳದ ಕಾರಣ 2014ರ ಅಕ್ಟೋಬರ್ 2 ಗಾಂಧೀ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸ್ವಚ್ಛ ಭಾರತ ಯೋಜನೆಯನ್ನು ದೇಶದಾದ್ಯಂತ ಅನುಷ್ಠಾನಕ್ಕೆ ತಂದಿತು. 2019ಕ್ಕೆ ಸ್ವಚ್ಛ ಭಾರತ್ ಮಿಶನ್ ಮೊದಲನೇ ಹಂತ ಮುಕ್ತಾಯಗೊಂಡಿದ್ದು 2020-2021ರಿಂದ 2024-2025ರವರೆಗೆ ಸ್ವಚ್ಛ ಭಾರತ್ ಯೋಜನೆಯ 2ನೇ ಹಂತ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಸ್ವಚ್ಛ ಭಾರತ್ ಯೋಜನೆಯನ್ನು ಗ್ರಾಮೀಣ ಮತ್ತು ನಗರಗಳೆಂಬ ಎರಡು ವಿಭಾಗ ಮಾಡಲಾಗಿದೆ. ಕುಡಿಯುವ ನೀರಿನ ಸ್ವಚ್ಛತೆ,  ಘನ ತ್ಯಾಜ್ಯ  ನಿರ್ವಹಣೆಯೇ ಮೊದಲಾದ ಹಲವು ಕಾರ್ಯಗಳನ್ನು ಈ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸ್ವಚ್ಛ ಭಾರತ ಯೋಜನೆಯಡಿ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಅತ್ಯಂತ ಮಹತ್ವ ನೀಡಲಾಗಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ವಚ್ಛತಾ ಕಾರ್ಯಕ್ಕಿಳಿದಿದ್ದರು.

ಇದನ್ನೂ ಓದಿ:

Digital Health Mission 2021: ಆರೋಗ್ಯ ಕ್ಷೇತ್ರ ಸುಧಾರಣೆಯ ಅತ್ಯಂತ ಮಹತ್ವದ ಘಟ್ಟ ಈ ಡಿಜಿಟಲ್​ ಹೆಲ್ತ್​ ಮಿಷನ್​: ಪ್ರಧಾನಿ ಮೋದಿ

ಜೆಟ್​ಲಾಗ್​​ ಹಿಡಿತದಿಂದ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿದ್ದು ಹೇಗೆ? ಚುರುಕಿನ ಕೆಲಸವೇ ಪ್ರಯಾಣದ ಆಯಾಸಕ್ಕೂ ಮದ್ದು

Published On - 10:20 pm, Thu, 30 September 21

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ