AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಹೈದರಾಬಾದ್​ನ ಕಾರ್ಪೊರೇಟರ್‌ಗಳು, ಬಿಜೆಪಿ ನಾಯಕರೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವ ಈ 8 ವರ್ಷಗಳ ಅವಧಿಯಲ್ಲಿ ಇಂತಹ ಅನೌಪಚಾರಿಕ ಸಂವಾದ ನಡೆಸುತ್ತಿರುವುದು ಇದೇ ಮೊದಲು.

PM Narendra Modi: ಹೈದರಾಬಾದ್​ನ ಕಾರ್ಪೊರೇಟರ್‌ಗಳು, ಬಿಜೆಪಿ ನಾಯಕರೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 07, 2022 | 8:11 AM

Share

ನವದೆಹಲಿ: ಹೈದರಾಬಾದ್ ಘಟಕದ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC)ನ 47 ಬಿಜೆಪಿ ಕಾರ್ಪೊರೇಟರ್‌ಗಳು, ಅಧಿಕಾರಿಗಳು ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವ ಈ 8 ವರ್ಷಗಳ ಅವಧಿಯಲ್ಲಿ ಇಂತಹ ಅನೌಪಚಾರಿಕ ಸಂವಾದ ನಡೆಸುತ್ತಿರುವುದು ಇದೇ ಮೊದಲು.

ಈ ಬಗ್ಗೆ ಸೋಮವಾರ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿ ನಾಯಕ ಮತ್ತು ವಕ್ತಾರ ಪ್ರಕಾಶ್ ರೆಡ್ಡಿ, ನಮ್ಮ ಕಾರ್ಪೊರೇಟರ್‌ಗಳು ಮತ್ತು ಪದಾಧಿಕಾರಿಗಳಿಗೆ ಮಂಗಳವಾರ ಪ್ರಧಾನಿಯನ್ನು ಭೇಟಿ ಮಾಡಲು ತಿಳಿಸಲಾಗಿದೆ. ಅವರು ಇತ್ತೀಚೆಗೆ ಹೈದರಾಬಾದ್‌ನ ISBಗೆ ಭೇಟಿ ನೀಡಿದ ಸಂದರ್ಭದಲ್ಲಿ ನಮ್ಮೆಲ್ಲರನ್ನು ಆಹ್ವಾನಿಸಿದ್ದರು. ಇಲ್ಲಿ ಭಾರೀ ಮಳೆಯಿಂದಾಗಿ ನಮಗೆ ಆಗ ಅವನಿಗೆ ಸಾಧ್ಯವಾಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ನಮ್ಮನ್ನು ಭೇಟಿಯಾಗಲು ಮತ್ತೊಮ್ಮೆ ಆಹ್ವಾನಿಸಿದ್ದಾರೆ. ಹೀಗಾಗಿ, ನಾವೆಲ್ಲರೂ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೆಹಲಿ ತಲುಪುತ್ತೇವೆ. ಪ್ರಧಾನಿ ಮೋದಿ ಟೀ ಮೀಟಿಂಗ್‌ ನಡೆಸಲಿದ್ದಾರೆ. ಇದು ಸೌಜನ್ಯದ ಭೇಟಿ ಮಾತ್ರ. ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಧಾನಿ ಮೋದಿ ನಮಗೆ ಪ್ರೇರಣೆ ನೀಡಲಿದ್ದಾರೆ. ಆ ಸ್ಪೂರ್ತಿಯನ್ನು ಇಟ್ಟುಕೊಂಡು ನಾವು ಪ್ರಧಾನಿಯನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಜನ ಸಮರ್ಥ ಪೋರ್ಟಲ್​ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ; ಹೊಸ ನಾಣ್ಯಗಳ ಬಿಡುಗಡೆ

ಇದನ್ನೂ ಓದಿ
Image
Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ: ಕುವೈತ್​​ನ ಸೂಪರ್ ಮಾರ್ಕೆಟ್​​ಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬಹಿಷ್ಕಾರ
Image
ಅಭಿವೃದ್ಧಿಹೊಂದದ ರಾಜ್ಯಗಳ ಭಾಷೆ ಹಿಂದಿ, ರಾಜ್ಯದಲ್ಲಿ ಹಿಂದಿಗೆ ಅನುಮತಿ ನೀಡಿದರೆ ನಾವು ಗುಲಾಮ ಶೂದ್ರರಾಗುತ್ತೇವೆ: ತಮಿಳುನಾಡು ಸಂಸದ

ಮುಶೀರಾಬಾದ್‌ನ ಜಿಎಚ್‌ಎಂಸಿ ಕಾರ್ಪೊರೇಟರ್ ಸುಪ್ರಿಯಾ ಗೌಡ್ ಕೂಡ ಎಎನ್‌ಐಗೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಜಿಎಚ್‌ಎಂಸಿಯ ಕಾರ್ಪೊರೇಟರ್‌ಗಳು, ಹೈದರಾಬಾದ್ ಘಟಕದ ಪದಾಧಿಕಾರಿಗಳು ಮತ್ತು ಇತರ ಹಿರಿಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಲು ಆಹ್ವಾನಿಸಿರುವುದು ನನಗೆ ಖುಷಿ ತಂದಿದೆ. ಇತ್ತೀಚೆಗೆ, ಅವರನ್ನು ಭೇಟಿಯಾಗಲು ನಮಗೆ ಕರೆ ಬಂದಿತು. ನಮ್ಮ ಪಾಲಿಕೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಎತ್ತಿ ತೋರಿಸುತ್ತೇವೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Tue, 7 June 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?