ನವದೆಹಲಿ: ಹೈದರಾಬಾದ್ ಘಟಕದ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC)ನ 47 ಬಿಜೆಪಿ ಕಾರ್ಪೊರೇಟರ್‌ಗಳು, ಅಧಿಕಾರಿಗಳು ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವ ಈ 8 ವರ್ಷಗಳ ಅವಧಿಯಲ್ಲಿ ಇಂತಹ ಅನೌಪಚಾರಿಕ ಸಂವಾದ ನಡೆಸುತ್ತಿರುವುದು ಇದೇ ಮೊದಲು.
ಈ ಬಗ್ಗೆ ಸೋಮವಾರ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿ ನಾಯಕ ಮತ್ತು ವಕ್ತಾರ ಪ್ರಕಾಶ್ ರೆಡ್ಡಿ, ನಮ್ಮ ಕಾರ್ಪೊರೇಟರ್‌ಗಳು ಮತ್ತು ಪದಾಧಿಕಾರಿಗಳಿಗೆ ಮಂಗಳವಾರ ಪ್ರಧಾನಿಯನ್ನು ಭೇಟಿ ಮಾಡಲು ತಿಳಿಸಲಾಗಿದೆ. ಅವರು ಇತ್ತೀಚೆಗೆ ಹೈದರಾಬಾದ್‌ನ ISBಗೆ ಭೇಟಿ ನೀಡಿದ ಸಂದರ್ಭದಲ್ಲಿ ನಮ್ಮೆಲ್ಲರನ್ನು ಆಹ್ವಾನಿಸಿದ್ದರು. ಇಲ್ಲಿ ಭಾರೀ ಮಳೆಯಿಂದಾಗಿ ನಮಗೆ ಆಗ ಅವನಿಗೆ ಸಾಧ್ಯವಾಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ನಮ್ಮನ್ನು ಭೇಟಿಯಾಗಲು ಮತ್ತೊಮ್ಮೆ ಆಹ್ವಾನಿಸಿದ್ದಾರೆ. ಹೀಗಾಗಿ, ನಾವೆಲ್ಲರೂ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೆಹಲಿ ತಲುಪುತ್ತೇವೆ. ಪ್ರಧಾನಿ ಮೋದಿ ಟೀ ಮೀಟಿಂಗ್ ನಡೆಸಲಿದ್ದಾರೆ. ಇದು ಸೌಜನ್ಯದ ಭೇಟಿ ಮಾತ್ರ. ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಧಾನಿ ಮೋದಿ ನಮಗೆ ಪ್ರೇರಣೆ ನೀಡಲಿದ್ದಾರೆ. ಆ ಸ್ಪೂರ್ತಿಯನ್ನು ಇಟ್ಟುಕೊಂಡು ನಾವು ಪ್ರಧಾನಿಯನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: PM Narendra Modi: ಜನ ಸಮರ್ಥ ಪೋರ್ಟಲ್ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ; ಹೊಸ ನಾಣ್ಯಗಳ ಬಿಡುಗಡೆ
ಮುಶೀರಾಬಾದ್‌ನ ಜಿಎಚ್‌ಎಂಸಿ ಕಾರ್ಪೊರೇಟರ್ ಸುಪ್ರಿಯಾ ಗೌಡ್ ಕೂಡ ಎಎನ್‌ಐಗೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಜಿಎಚ್‌ಎಂಸಿಯ ಕಾರ್ಪೊರೇಟರ್‌ಗಳು, ಹೈದರಾಬಾದ್ ಘಟಕದ ಪದಾಧಿಕಾರಿಗಳು ಮತ್ತು ಇತರ ಹಿರಿಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಲು ಆಹ್ವಾನಿಸಿರುವುದು ನನಗೆ ಖುಷಿ ತಂದಿದೆ. ಇತ್ತೀಚೆಗೆ, ಅವರನ್ನು ಭೇಟಿಯಾಗಲು ನಮಗೆ ಕರೆ ಬಂದಿತು. ನಮ್ಮ ಪಾಲಿಕೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಎತ್ತಿ ತೋರಿಸುತ್ತೇವೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:09 am, Tue, 7 June 22