ಸಿಂಗಾಪುರದ ಸಚಿವರಿಂದ ಇಂದು ಅರುಣ್ ಜೇಟ್ಲಿ ಸ್ಮಾರಕ ಉಪನ್ಯಾಸ: ಪ್ರಧಾನಿ ನರೇಂದ್ರ ಮೋದಿ ಭಾಗಿ

ಸಿಂಗಾಪುರದ ಹಿರಿಯ ಸಚಿವ ಷಣ್ಮುಗನಾಥಮ್ ‘ಸರ್ವರ ಸಹಭಾಗಿತ್ವದಿಂದ ಅಭಿವೃದ್ಧಿ, ಅಭಿವೃದ್ಧಿಯಿಂದ ಸರ್ವ ಸಹಭಾಗಿತ್ವ’ ಎನ್ನುವ ವಿಷಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಸಿಂಗಾಪುರದ ಸಚಿವರಿಂದ ಇಂದು ಅರುಣ್ ಜೇಟ್ಲಿ ಸ್ಮಾರಕ ಉಪನ್ಯಾಸ: ಪ್ರಧಾನಿ ನರೇಂದ್ರ ಮೋದಿ ಭಾಗಿ
ಅರುಣ್ ಜೇಟ್ಲಿ ಅವರ ಚಿತ್ರಪಟಕ್ಕೆ ನಮಿಸುತ್ತಿರುವ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 08, 2022 | 7:46 AM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜುಲೈ 8, ಶುಕ್ರವಾರ) ದೆಹಲಿಯಲ್ಲಿ ನಡೆಯಲಿರುವ ‘ಅರುಣ್ ಜೇಟ್ಲಿ ಸ್ಮಾರಕ ಉಪನ್ಯಾಸ’ (Arun Jaitley Memorial Lecture – AJML) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿರುವ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ಪ್ರಾಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಂಗಾಪುರದ ಹಿರಿಯ ಸಚಿವ ಷಣ್ಮುಗನಾಥಮ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ‘ಸರ್ವರ ಸಹಭಾಗಿತ್ವದಿಂದ ಅಭಿವೃದ್ಧಿ, ಅಭಿವೃದ್ಧಿಯಿಂದ ಸರ್ವ ಸಹಭಾಗಿತ್ವ’ ಎನ್ನುವ ವಿಷಯದ ಬಗ್ಗೆ ಅವರು ಮಾತನಾಡಿದ್ದಾರೆ. ಭಾಷಣದ ನಂತರ ನಡೆಯಲಿರುವ ಚರ್ಚೆಯಲ್ಲಿ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ವೇದಿಕೆಯ (Organisation for Economic Co-operation and Development – OECD) ಪ್ರಧಾನ ಕಾರ್ಯದರ್ಶಿ ಮಥಾಯಿಸ್ ಕೊರ್​ಮನ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅರವಿಂದ್ ಪನಗರಿಯಾ ಪಾಲ್ಗೊಳ್ಳಲಿದ್ದಾರೆ.

ಕೇಂದ್ರದ ಹಣಕಾಸು ಸಚಿವರಾಗಿದ್ದ ದಿವಂಗತ ಅರುಣ್ ಜೇಟ್ಲಿ ಹಲವು ಹುದ್ದೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ತಮ್ಮ ಛಾಪು ಮೂಡಿಸಿದ್ದರು. ದೇಶಕ್ಕೆ ಅವರ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನಿ ಕಚೇರಿಯ ಪತ್ರಿಕಾ ಹೇಳಿಕೆಯು ತಿಳಿಸಿದೆ. ಜುಲೈ 8ರಿಂದ 10ರವರೆಗೆ ನಡೆಯಲಿರುವ ‘ಕೌಟಿಲ್ಯ ಎಕನಾಮಿಕ್ ಕಾನ್​ಕ್ಲೇವ್​’ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರತಿನಿಧಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ.

ವಿವಿಧ ದೇಶಗಳಿಂದ ಬರಲಿರುವ ಹಲವು ಅರ್ಥಶಾಸ್ತ್ರಜ್ಞರು ಸಹ ಪ್ರಧಾನಿಯೊಂದಿಗೆ ಚರ್ಚಿಸಲಿದ್ದಾರೆ. ಈ ಪೈಕಿ ಜಾನ್ ಹಾಪ್​ಕಿನ್ಸ್​ ವಿಶ್ವವಿದ್ಯಾಲಯದ ನಿಕೊಲಸ್ ಸ್ಟರ್ನ್​, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್​ನ ರಾಬರ್ಟ್ ಲಾರೆನ್ಸ್, ಹಾರ್ವಾರ್ಡ್ ಕೆನಡಿ ಸಂಸ್ಥೆಯ ಜಾನ್ ಲಿಪ್​ಸ್ಕಿ, ವಿಶ್ವ ಹಣಕಾಸು ಸಂಸ್ಥೆಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ವಿಶ್ವ ಬ್ಯಾಂಕ್​ನ ನಿರ್ದೇಶಕ ಜುನೈದ್ ಅಹಮದ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಇನ್​ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋತ್ ಸಂಸ್ಥೆಯು ಹಣಕಾಸು ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಿದೆ.

Published On - 7:44 am, Fri, 8 July 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್