ಅಸ್ಸಾಂನಲ್ಲಿ ಇಂದು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ
ಮಧ್ಯಾಹ್ನ 01:45 ರ ಸುಮಾರಿಗೆ ಪ್ರಧಾನಮಂತ್ರಿಯವರು ಅಸ್ಸಾಂ ವೈದ್ಯಕೀಯ ಕಾಲೇಜ್, ದಿಬ್ರುಗಢವನ್ನು ತಲುಪುತ್ತಾರೆ. ಅಲ್ಲಿ ದಿಬ್ರುಗಢ್ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ, ಅವರು ದಿಬ್ರುಗಢ್‌ನ ಖನಿಕರ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಅಸ್ಸಾಂಗೆ (Assam) ಭೇಟಿ ನೀಡಲಿದ್ದು, ಅಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ದಿಫುದಲ್ಲಿ ‘ಶಾಂತಿ, ಏಕತೆ ಮತ್ತು ಅಭಿವೃದ್ಧಿ ರ್ಯಾಲಿ’ಯನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಕಾರ, ಕಾರ್ಯಕ್ರಮದ ಸಮಯದಲ್ಲಿ, ಪಿಎಂ ಮೋದಿ ಅವರು ಶಿಕ್ಷಣ ಕ್ಷೇತ್ರದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಪಶುವೈದ್ಯಕೀಯ ಕಾಲೇಜು (ದಿಫು), ಪದವಿ ಕಾಲೇಜು (ಪಶ್ಚಿಮ ಕರ್ಬಿ ಆಂಗ್ಲಾಂಗ್) ಮತ್ತು ಕೃಷಿ ಕಾಲೇಜು (ಕೊಲೊಂಗಾ, ಪಶ್ಚಿಮ ಕರ್ಬಿ ಆಂಗ್ಲಾಂಗ್) ಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ₹ 500 ಕೋಟಿಗೂ ಹೆಚ್ಚು ಮೌಲ್ಯದ ಈ ಯೋಜನೆಗಳು ಈ ಪ್ರದೇಶದಲ್ಲಿ ಕೌಶಲ್ಯ ಮತ್ತು ಉದ್ಯೋಗಕ್ಕೆ ಹೊಸ ಅವಕಾಶಗಳನ್ನು ತರಲಿವೆ. ಕಾರ್ಯಕ್ರಮದಲ್ಲಿ ಪ್ರಧಾನಿಯವರು 2,950ಕ್ಕೂ ಹೆಚ್ಚು ಅಮೃತ ಸರೋವರ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಜ್ಯವು ಈ ಅಮೃತ ಸರೋವರಗಳನ್ನು ಸುಮಾರು ₹ 1,150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿದೆ. “ಭಾರತ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಆರು ಕರ್ಬಿ ಉಗ್ರಗಾಮಿ ಸಂಘಟನೆಗಳೊಂದಿಗೆ ಇತ್ತೀಚಿಗೆ ಒಪ್ಪಂದಕ್ಕೆ ಸಹಿ ಮಾಡಿರುವುದು ಪ್ರಧಾನಿಯವರ ಶಾಂತಿ ಮತ್ತು ಪ್ರದೇಶದ ಅಭಿವೃದ್ಧಿಗೆ ಅಚಲವಾದ ಬದ್ಧತೆಯ ಉದಾಹರಣೆಯಾಗಿದೆ. ಈ ಒಪ್ಪಂದವು ಶಾಂತಿಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ‘ಶಾಂತಿ, ಏಕತೆ ಮತ್ತು ಅಭಿವೃದ್ಧಿ ರ್ಯಾಲಿ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣವು ಇಡೀ ಪ್ರದೇಶದಲ್ಲಿ ಶಾಂತಿ ಉಪಕ್ರಮಗಳಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
I will be in Assam tomorrow, 28th April for key programmes in Diphu and Dibrugarh which are aimed at enhancing the development trajectory of this wonderful state. https://t.co/moItgfnUfA
— Narendra Modi (@narendramodi) April 27, 2022
ಮಧ್ಯಾಹ್ನ 01:45 ರ ಸುಮಾರಿಗೆ ಪ್ರಧಾನಮಂತ್ರಿಯವರು ಅಸ್ಸಾಂ ವೈದ್ಯಕೀಯ ಕಾಲೇಜ್, ದಿಬ್ರುಗಢವನ್ನು ತಲುಪುತ್ತಾರೆ. ಅಲ್ಲಿ ದಿಬ್ರುಗಢ್ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ, ಅವರು ದಿಬ್ರುಗಢ್‌ನ ಖನಿಕರ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಅವರು ಆರು ಕ್ಯಾನ್ಸರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ದಿಬ್ರುಗಢದಲ್ಲಿ, ಅಸ್ಸಾಂ ಕ್ಯಾನ್ಸರ್ ಕೇರ್ ಫೌಂಡೇಶನ್, ಅಸ್ಸಾಂ ಸರ್ಕಾರ ಮತ್ತು ಟಾಟಾ ಟ್ರಸ್ಟ್‌ಗಳ ಜಂಟಿ ಉದ್ಯಮವಾಗಿದ್ದು, ರಾಜ್ಯದಾದ್ಯಂತ ಹರಡಿರುವ 17 ಕ್ಯಾನ್ಸರ್ ಕೇರ್ ಆಸ್ಪತ್ರೆಗಳೊಂದಿಗೆ ದಕ್ಷಿಣ ಏಷ್ಯಾದ ಅತಿದೊಡ್ಡ ಕೈಗೆಟುಕುವ ಕ್ಯಾನ್ಸರ್ ಆರೈಕೆ ಜಾಲವನ್ನು ನಿರ್ಮಿಸುವ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದೆ.
“ಯೋಜನೆಯ 1 ನೇ ಹಂತದ ಅಡಿಯಲ್ಲಿ, 10 ಆಸ್ಪತ್ರೆಗಳ ಪೈಕಿ ಏಳು ಆಸ್ಪತ್ರೆಗಳ ನಿರ್ಮಾಣ ಪೂರ್ಣಗೊಂಡಿದೆ ಮತ್ತು ಮೂರು ಆಸ್ಪತ್ರೆಗಳು ವಿವಿಧ ನಿರ್ಮಾಣ ಹಂತದಲ್ಲಿವೆ. ಯೋಜನೆಯ 2 ನೇ ಹಂತವು ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯೋಜನೆಯ 1 ನೇ ಹಂತದ ಅಡಿಯಲ್ಲಿ ಪೂರ್ಣಗೊಂಡ ಏಳು ಕ್ಯಾನ್ಸರ್ ಆಸ್ಪತ್ರೆಗಳನ್ನು ಪ್ರಧಾನ ಮಂತ್ರಿ ಉದ್ಘಾಟಿಸಲಿದ್ದಾರೆ. ಈ ಕ್ಯಾನ್ಸರ್ ಆಸ್ಪತ್ರೆಗಳನ್ನು ದಿಬ್ರುಗಢ್, ಕೊಕ್ರಜಾರ್, ಬಾರ್ಪೇಟಾ, ದರ್ರಾಂಗ್, ತೇಜ್‌ಪುರ, ಲಖಿಂಪುರ ಮತ್ತು ಜೋರ್ಹತ್‌ನಲ್ಲಿ ನಿರ್ಮಿಸಲಾಗಿದೆ. ಧುಬ್ರಿ, ನಲ್ಬರಿ, ಗೋಲ್‌ಪಾರಾ, ನಾಗಾಂವ್, ಶಿವಸಾಗರ್, ತಿನ್‌ಸುಕಿಯಾ ಮತ್ತು ಗೋಲಾಘಾಟ್‌ನಲ್ಲಿ ಯೋಜನೆಯ 2 ನೇ ಹಂತದ ಅಡಿಯಲ್ಲಿ ನಿರ್ಮಿಸಲಾಗುವ ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೂ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ.
ಇದನ್ನೂ ಓದಿ: ಮೇ 2-4 ರವರೆಗೆ ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್ಗೆ ಪ್ರವಾಸ ಕೈಗೊಳ್ಳಲಿದ್ದಾರೆ ಮೋದಿ
Published On - 9:16 am, Thu, 28 April 22