₹11100 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ; ಡಿ.30 ರಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ

ನೂತನವಾಗಿ ನಿರ್ಮಿಸಲಾಗಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಡಿಸೆಂಬರ್ 30ರಂದು ಮಧ್ಯಾಹ್ನ 12.15ಕ್ಕೆ ಉದ್ಘಾಟಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ, ಪಿಎಂ ಮೋದಿ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ₹ 15,700 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

₹11100 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ; ಡಿ.30 ರಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Dec 28, 2023 | 7:14 PM

ದೆಹಲಿ ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿಸೆಂಬರ್ 30, ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ಅಯೋಧ್ಯೆ ವಿಮಾನ ನಿಲ್ದಾಣ (Ayodhya Airport) ಮತ್ತು ಅಯೋಧ್ಯೆ ಧಾಮ್ ಜಂಕ್ಷನ್ ರೈಲು ನಿಲ್ದಾಣ(Ayodhya Dham Junction Railway Station) ಸೇರಿದಂತೆ ₹ 11,100 ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿಯವರು ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಫ್ಲ್ಯಾಗ್ ಆಫ್ ಮಾಡಲಿದ್ದಾರೆ. ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ವಾರಗಳ ಮೊದಲು, ಪ್ರಧಾನಿ ಮೋದಿ ಅವರು ದೇವಾಲಯದ ನಗರದಲ್ಲಿ ನಾಲ್ಕು ಹೊಸ ರಸ್ತೆಗಳನ್ನು ಉದ್ಘಾಟಿಸಲಿದ್ದಾರೆ.

ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಸರ್ಕಾರದ ಹೇಳಿಕೆಯ ಪ್ರಕಾರ ಮೋದಿ ಅವರು ಬೆಳಿಗ್ಗೆ 11.15 ಕ್ಕೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದು, ಹೊಸ ಅಮೃತ್ ಭಾರತ್ ರೈಲುಗಳು ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ನೂತನವಾಗಿ ನಿರ್ಮಿಸಲಾಗಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಮಧ್ಯಾಹ್ನ 12.15ಕ್ಕೆ ಉದ್ಘಾಟಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ, ಪಿಎಂ ಮೋದಿ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ₹ 15,700 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಈ ಯೋಜನೆಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ₹11100 ಕೋಟಿ ಮೌಲ್ಯದ ಯೋಜನೆಗಳು ಮತ್ತು ಇತರ ಯುಪಿ ನಗರಗಳಿಗೆ ₹4600 ಕೋಟಿ ಮೌಲ್ಯದ ಯೋಜನೆಗಳು ಸೇರಿವೆ. ಅಯೋಧ್ಯೆಯಲ್ಲಿ ಆಧುನಿಕ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು, ಸಂಪರ್ಕವನ್ನು ಸುಧಾರಿಸುವುದು ಮತ್ತು ನಗರದ ಶ್ರೀಮಂತ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಅದರ ನಾಗರಿಕ ಸೌಲಭ್ಯಗಳನ್ನು ನವೀಕರಿಸಲಾಗುತ್ತಿದೆ. ಈ, ಹೊಸ ವಿಮಾನ ನಿಲ್ದಾಣ, ನವೀಕರಣಗೊಂಡ ರೈಲು ನಿಲ್ದಾಣ, ನಗರದಲ್ಲಿ ಹೊಸ ನಗರ ರಸ್ತೆಗಳು ಮತ್ತು ಇತರ ನಾಗರಿಕ ಮೂಲಸೌಕರ್ಯಗಳನ್ನು ಉದ್ಘಾಟನೆ ಮಾಡಲಾಗುತ್ತಿದೆ.ಇದಲ್ಲದೆ, ಅಯೋಧ್ಯೆ ಮತ್ತು ಸುತ್ತಮುತ್ತಲಿನ ನಾಗರಿಕ ಸೌಲಭ್ಯಗಳ ಸೌಂದರ್ಯೀಕರಣ ಮತ್ತು ಪುನರುಜ್ಜೀವನಕ್ಕೆ ಕೊಡುಗೆ ನೀಡುವ ಹಲವಾರು ಹೊಸ ಯೋಜನೆಗಳ ಅಡಿಗಲ್ಲುಗಳನ್ನು ಹಾಕಲಾಗುವುದು ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೇಳಿಕೆ ಪ್ರಕಾರ, ಅಯೋಧ್ಯೆ ವಿಮಾನ ನಿಲ್ದಾಣದ 1 ನೇ ಹಂತವನ್ನು ₹1450 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 6500 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್ ಕಟ್ಟಡವು ವರ್ಷಕ್ಕೆ 10 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್​​ಗೆ 2 ಕೋಟಿ ಚಂದಾದಾರರು

ಟರ್ಮಿನಲ್ ಕಟ್ಟಡದ ಮುಂಭಾಗವು ಅಯೋಧ್ಯೆಯ ಮುಂಬರುವ ಶ್ರೀರಾಮ ಮಂದಿರದ ದೇವಾಲಯದ ವಾಸ್ತುಶಿಲ್ಪವನ್ನು ಚಿತ್ರಿಸುತ್ತದೆ. ಟರ್ಮಿನಲ್ ಕಟ್ಟಡದ ಒಳಭಾಗವು ಭಗವಾನ್ ಶ್ರೀರಾಮನ ಜೀವನವನ್ನು ಚಿತ್ರಿಸುವ ಸ್ಥಳೀಯ ಕಲೆ, ವರ್ಣಚಿತ್ರಗಳು ಮತ್ತು ಭಿತ್ತಿಚಿತ್ರಗಳಿಂದ ಅಲಂಕರಿಸಲ್ಪಟ್ಟಿದೆ. ಅಯೋಧ್ಯೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಎಲ್‌ಇಡಿ ಲೈಟಿಂಗ್, ಮಳೆ ನೀರು ಕೊಯ್ಲು, ಕಾರಂಜಿಗಳೊಂದಿಗೆ ಭೂದೃಶ್ಯ, ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ, ಸೌರ ವಿದ್ಯುತ್ ಸ್ಥಾವರ ಮತ್ತು ಗ್ರಿಹಾ – 5 ಸ್ಟಾರ್ ರೇಟಿಂಗ್‌ಗಳನ್ನು ಪೂರೈಸಲು ಅಂತಹ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ. ₹240 ಕೋಟಿ ವೆಚ್ಚದಲ್ಲಿ ಅಯೋಧ್ಯೆ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾರ್ಯ ನಡೆದಿದೆ. ಇದು ಈಗ ಮೂರು ಅಂತಸ್ತಿನ ನಿಲ್ದಾಣವಾಗಿದ್ದು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಕ್ಲೋಕ್ ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು, ವೇಟಿಂಗ್ ಹಾಲ್‌ಗಳು ಮುಂತಾದ ಆಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.

ಸುಂದರವಾದ ಮತ್ತು ಆಕರ್ಷಕ ವಿನ್ಯಾಸದ ಆಸನಗಳು, ಉತ್ತಮ ಲಗೇಜ್ ರ್ಯಾಕ್, ಸೂಕ್ತವಾದ ಮೊಬೈಲ್ ಹೋಲ್ಡರ್‌ನೊಂದಿಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಎಲ್‌ಇಡಿ ಲೈಟ್‌ಗಳು, ಸಿಸಿಟಿವಿ, ಸಾರ್ವಜನಿಕ ಮಾಹಿತಿ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ಹೊಂದಿದೆ. ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‌ಪ್ರೆಸ್ ಎರಡು ರೈಲುಗಳಿಗೆ ಚಾಲನೆ ನೀಡಲಾಗುತ್ತದೆ.

ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್; ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್; ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್; ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್; ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಹೀಗೆ ಆರು ಹೊಸ ವಂದೇ ಭಾರತ್ ರೈಲುಗಳಿಗೂ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್