AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಭೂತಾನ್​​ಗೆ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ಮತ್ತು 12ರಂದು 2 ದಿನದ ಭೇಟಿ ನೀಡಲಿದ್ದಾರೆ. ಈ ವೇಳೆ ದ್ವಿಪಕ್ಷೀಯ ವಿನಿಮಯ ಮತ್ತು 1,020 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆಯ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಭಾರತ ಮತ್ತು ಭೂತಾನ್ ನಡುವಿನ ಸ್ನೇಹ ಮತ್ತು ಸಹಕಾರದ ವಿಶೇಷ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಭೂತಾನ್​​ಗೆ ಭೇಟಿ
Pm Narendra Modi
ಸುಷ್ಮಾ ಚಕ್ರೆ
|

Updated on: Nov 08, 2025 | 9:51 PM

Share

ನವದೆಹಲಿ, ನವೆಂಬರ್ 8: ಭಾರತ ಮತ್ತು ಭೂತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನವೆಂಬರ್ 11 ಮತ್ತು 12ರಂದು ಭೂತಾನ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಮೋದಿ ಅವರು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಪ್ರಧಾನಿ ತ್ಸೆರಿಂಗ್ ಟೋಬ್ಗೆ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಮತ್ತು ಭೂತಾನ್ ರಾಜ ಜಿಗ್ಮೆ ಒಟ್ಟಾಗಿ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

ಭೂತಾನಿನ ಮಾಜಿ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ ಅವರ 70ನೇ ಜನ್ಮ ದಿನಾಚರಣೆಯ ಆಚರಣೆಯಲ್ಲಿಯೂ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಮೋದಿ ಅವರು ಥಿಂಪುವಿನ ತಾಶಿಚೋಡ್‌ಜಾಂಗ್‌ನಲ್ಲಿರುವ ಪವಿತ್ರ ಅವಶೇಷಗಳಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ ಮತ್ತು ಭೂತಾನ್ ಸರ್ಕಾರ ಆಯೋಜಿಸಿರುವ ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ

ಪ್ರಧಾನಿ ಮೋದಿ ಅವರ ಭೇಟಿಯು ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ವರ್ಧಿಸುವ ಮತ್ತು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಲು, ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎರಡೂ ಕಡೆಯವರಿಗೆ ಅವಕಾಶವನ್ನು ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಭಾರತವು ಇತ್ತೀಚೆಗೆ 4,033 ಕೋಟಿ ರೂ. ವೆಚ್ಚದಲ್ಲಿ ಭೂತಾನ್‌ನೊಂದಿಗೆ ಮೊದಲ 2 ಗಡಿಯಾಚೆಗಿನ ರೈಲ್ವೆ ಸಂಪರ್ಕಗಳನ್ನು ನಿರ್ಮಿಸುವುದಾಗಿ ಘೋಷಿಸಿತು. ಈ ಯೋಜನೆಯನ್ನು ಆರ್ಥಿಕ ಏಕೀಕರಣ ಮತ್ತು ವ್ಯಾಪಾರವನ್ನು ಹೆಚ್ಚಿಸಲು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವ ಭಾರತದ ಪ್ರಯತ್ನಗಳ ಭಾಗವಾಗಿ ನೋಡಲಾಗಿದೆ.

ಇದನ್ನೂ ಓದಿ: ಭಾರತ ರತ್ನ ಅಡ್ವಾಣಿ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕೊನೆಯ ಬಾರಿಗೆ 2024ರ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿದ್ದರು. ಆಗ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ದಿ ಡ್ರಕ್ ಗಯಾಲ್ಪೊ ಪ್ರಶಸ್ತಿಯನ್ನು ನೀಡಲಾಯಿತು. ಈ ಮೂಲಕ ಈ ಪ್ರಶಸ್ತಿ ಸ್ವೀಕರಿಸಿದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರೆಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ