ಜಿ7 ಶೃಂಗಸಭೆಗಾಗಿ ಜೂನ್ 26-27 ರಂದು ಜರ್ಮನಿಗೆ, 28ರಂದು ಯುಎಇಗೆ ಭೇಟಿ ನೀಡಲಿದ್ದಾರೆ ಮೋದಿ

ಮೋದಿ ಜರ್ಮನಿಯಲ್ಲಿ ಶ್ಲೋಸ್ಎಲ್ಮೊಗೆ ಭೇಟಿ ನೀಡಲಿದ್ದಾರೆ. ಶೃಂಗಸಭೆಯ ನಂತರ ಜೂನ್ 28 ರಂದು ಯುಎಇಗೆ ಪ್ರಯಾಣಿಸಲಿದ್ದು, ಮಾಜಿ ಯುಎಇ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಾರೆ.

ಜಿ7 ಶೃಂಗಸಭೆಗಾಗಿ ಜೂನ್ 26-27 ರಂದು ಜರ್ಮನಿಗೆ, 28ರಂದು ಯುಎಇಗೆ ಭೇಟಿ ನೀಡಲಿದ್ದಾರೆ ಮೋದಿ
ನರೇಂದ್ರ ಮೋದಿ
Edited By:

Updated on: Jun 22, 2022 | 2:32 PM

ದೆಹಲಿ: 2022ರ ಜೂನ್ 26-27 ರಂದು G7 ಶೃಂಗಸಭೆಗೆ (G7 Summit) ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ (German Chancellor Olaf Scholz)ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜರ್ಮನಿಗೆ (Germany) ಭೇಟಿ ನೀಡಲಿದ್ದಾರೆ. ಅಲ್ಲಿ ಭಾಗವಹಿಸುವ ಕೆಲವು ದೇಶಗಳ ನಾಯಕರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವ ಬಗ್ಗೆ ಎರಡು ಅಧಿವೇಶನಗಳಲ್ಲಿ ಪ್ರಧಾನಿ ಮಾತನಾಡುವ ನಿರೀಕ್ಷೆಯಿದೆ ಎಂದು ಎಂಇಎ ಪ್ರಕಟಣೆ ತಿಳಿಸಿದೆ. ಈ ಪ್ರಮುಖ ವಿಷಯಗಳಲ್ಲಿ ಅಂತರರಾಷ್ಟ್ರೀಯ ಸಹಯೋಗವನ್ನು ಬಲಪಡಿಸುವ ಪ್ರಯತ್ನದಲ್ಲಿ ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾದಂತಹ ಇತರ ಪ್ರಜಾಪ್ರಭುತ್ವ ರಾಷ್ಟ್ರಗಳನ್ನು ಸಹ ಆಹ್ವಾನಿಸಲಾಗಿದೆ.


ಮೋದಿ ಜರ್ಮನಿಯಲ್ಲಿ ಶ್ಲೋಸ್ಎಲ್ಮೊ (Schloss Elmau) ಗೆ ಭೇಟಿ ನೀಡಲಿದ್ದಾರೆ. ಶೃಂಗಸಭೆಯ ನಂತರ ಜೂನ್ 28 ರಂದು ಯುಎಇಗೆ ಪ್ರಯಾಣಿಸಲಿದ್ದು, ಮಾಜಿ ಯುಎಇ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಾರೆ. ಯುಎಇಯ ಹೊಸ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರರಾಗಿ ಆಯ್ಕೆಯಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಮೋದಿ ಅಭಿನಂದಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ