AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Gujarat Visit: ಗುಜರಾತ್‌ನಲ್ಲಿ ಇಂದು ₹4,400 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೋದಿಯವರು ಗಾಂಧಿನಗರದ 'ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ'ದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಗಿಫ್ಟ್ ಸಿಟಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ

PM Modi Gujarat Visit: ಗುಜರಾತ್‌ನಲ್ಲಿ ಇಂದು ₹4,400 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: May 12, 2023 | 6:30 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಶುಕ್ರವಾರ) ಗುಜರಾತ್‌ಗೆ (Gujarat) ಭೇಟಿ ನೀಡಲಿದ್ದು, ಸುಮಾರು 4,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ 19,000 ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ವಸತಿ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ವಿತರಿಸಲಿದ್ದಾರೆ. ಮೋದಿಯವರು ಗಾಂಧಿನಗರದ (Gandhi nagar) ‘ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ’ದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಗಿಫ್ಟ್ ಸಿಟಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಂಧಿನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 2,450 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ನೆರವೇರಿಸಲಿದ್ದಾರೆ ಎಂದು ಅದು ತಿಳಿಸಿದೆ.

ಇವುಗಳಲ್ಲಿ ನಗರಾಭಿವೃದ್ಧಿ ಇಲಾಖೆ, ನೀರು ಸರಬರಾಜು ಇಲಾಖೆ, ರಸ್ತೆ ಮತ್ತು ಸಾರಿಗೆ ಇಲಾಖೆ ಮತ್ತು ಗಣಿ ಮತ್ತು ಖನಿಜ ಇಲಾಖೆಯ ಯೋಜನೆಗಳು ಸೇರಿವೆ.

ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಯೋಜನೆಯ ಫಲಾನುಭವಿಗಳಿಗೆ ಅವರು ಕೀಗಳನ್ನು ಹಸ್ತಾಂತರಿಸಲಿದ್ದಾರೆ. ಈ ಯೋಜನೆಗಳ ಒಟ್ಟು ವೆಚ್ಚ ಸುಮಾರು 1,950 ಕೋಟಿ ರೂಪಾಯಿ ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: PM Narendra Modi: ₹5,500 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅವರು ಅಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಸ್ಥಿತಿಯನ್ನು ಪರಿಶೀಲಿಸುತ್ತಾರೆ. ಅಲ್ಲಿ ಅವರು GIFT IFSC ಯೊಂದಿಗೆ ಸಂವಾದವನ್ನು ನಡೆಸುತ್ತಾರೆ.

‘ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ’ ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29ನೇ ದ್ವೈವಾರ್ಷಿಕ ಸಮ್ಮೇಳನವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ