ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಶುಕ್ರವಾರ) ಗುಜರಾತ್‌ಗೆ (Gujarat) ಭೇಟಿ ನೀಡಲಿದ್ದು, ಸುಮಾರು 4,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ 19,000 ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ವಸತಿ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ವಿತರಿಸಲಿದ್ದಾರೆ. ಮೋದಿಯವರು ಗಾಂಧಿನಗರದ (Gandhi nagar) ‘ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ’ದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಗಿಫ್ಟ್ ಸಿಟಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಂಧಿನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 2,450 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ನೆರವೇರಿಸಲಿದ್ದಾರೆ ಎಂದು ಅದು ತಿಳಿಸಿದೆ.
ಇವುಗಳಲ್ಲಿ ನಗರಾಭಿವೃದ್ಧಿ ಇಲಾಖೆ, ನೀರು ಸರಬರಾಜು ಇಲಾಖೆ, ರಸ್ತೆ ಮತ್ತು ಸಾರಿಗೆ ಇಲಾಖೆ ಮತ್ತು ಗಣಿ ಮತ್ತು ಖನಿಜ ಇಲಾಖೆಯ ಯೋಜನೆಗಳು ಸೇರಿವೆ.
ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಯೋಜನೆಯ ಫಲಾನುಭವಿಗಳಿಗೆ ಅವರು ಕೀಗಳನ್ನು ಹಸ್ತಾಂತರಿಸಲಿದ್ದಾರೆ. ಈ ಯೋಜನೆಗಳ ಒಟ್ಟು ವೆಚ್ಚ ಸುಮಾರು 1,950 ಕೋಟಿ ರೂಪಾಯಿ ಎಂದು ಹೇಳಿಕೆ ತಿಳಿಸಿದೆ.
ಇದನ್ನೂ ಓದಿ: PM Narendra Modi: ₹5,500 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ
ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅವರು ಅಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಸ್ಥಿತಿಯನ್ನು ಪರಿಶೀಲಿಸುತ್ತಾರೆ. ಅಲ್ಲಿ ಅವರು GIFT IFSC ಯೊಂದಿಗೆ ಸಂವಾದವನ್ನು ನಡೆಸುತ್ತಾರೆ.
‘ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ’ ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29ನೇ ದ್ವೈವಾರ್ಷಿಕ ಸಮ್ಮೇಳನವಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ