PM Narendra Modi: ಗುಜರಾತ್​​ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ; 21,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

| Updated By: ಸುಷ್ಮಾ ಚಕ್ರೆ

Updated on: Jun 17, 2022 | 9:07 AM

ಇಂದು ಗುಜರಾತ್​​ನಲ್ಲಿ 21,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

PM Narendra Modi: ಗುಜರಾತ್​​ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ; 21,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ
Follow us on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದಿನಿಂದ (ಜೂನ್ 17) 2 ದಿನಗಳ ಕಾಲ ಗುಜರಾತ್‌ಗೆ (Gujarat) ಭೇಟಿ ನೀಡಲಿದ್ದಾರೆ. ಇಂದು ಗುಜರಾತ್​​ನಲ್ಲಿ 21,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ನಾಳೆ (ಜೂನ್ 18) ಪಾವಗಡ ಬೆಟ್ಟದಲ್ಲಿ ಶ್ರೀ ಕಾಳಿಕಾ ಮಾತೆಯ ಪುನರಾಭಿವೃದ್ಧಿ ದೇವಾಲಯವನ್ನು ಮೋದಿ ಉದ್ಘಾಟಿಸಲಿದ್ದು, ನಂತರ ವಿರಾಸತ್ ವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ತಿಳಿಸಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಅವರು 21,000 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೂನ್ 18ರಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿಯ 100ನೇ ಹುಟ್ಟುಹಬ್ಬವೂ ಇರಲಿದ್ದು, ನರೇಂದ್ರ ಮೋದಿಯವರು ತಮ್ಮ ಶತಾಯುಷಿ ತಾಯಿಯ ಆಶೀರ್ವಾದ ಪಡೆಯಲು ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ
Agnipath Scheme: ಅಗ್ನಿಪಥ್ ಯೋಜನೆಯ ಅಗ್ನಿವೀರರ ಗರಿಷ್ಠ ವಯೋಮಿತಿ 23 ವರ್ಷಕ್ಕೆ ಏರಿಕೆ; ಶೀಘ್ರದಲ್ಲೇ ನೇಮಕಾತಿ ಶುರು
ಧರ್ಮಶಾಲಾ ಭೇಟಿಯೊಂದಿಗೆ ಪ್ರಧಾನಿ ಮೋದಿಯವರ ಎರಡು ದಿನಗಳ ಹಿಮಾಚಲ ಪ್ರದೇಶ ಪ್ರವಾಸ ಇಂದು ಆರಂಭ
ಕೇಂದ್ರ ಸಚಿವಾಲಯ,ಇಲಾಖೆಗಳಲ್ಲಿ 10 ಲಕ್ಷ ಜನರ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

ವಡೋದರಾದಲ್ಲಿ ಗುಜರಾತ್ ಗೌರವ ಅಭಿಯಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಅಭಿವೃದ್ಧಿ ಯೋಜನೆಗಳು 16,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ರೈಲ್ವೆಗೆ ಸಂಬಂಧಿಸಿದ ಯೋಜನೆಗಳನ್ನು ಒಳಗೊಂಡಿರುತ್ತದೆ. ರೈಲ್ವೆ ಯೋಜನೆಗಳು ಸರಕು ಸಾಗಣೆ ಕಾರಿಡಾರ್‌ನ 357 ಕಿಮೀ ಉದ್ದದ ನ್ಯೂ ಪಾಲನ್‌ಪುರ್-ಮದರ್ ವಿಭಾಗ, 166 ಕಿಮೀ ಉದ್ದದ ಅಹಮದಾಬಾದ್-ಬೋಟಾಡ್ ವಿಭಾಗದ ಗೇಜ್ ಪರಿವರ್ತನೆ ಮತ್ತು 81 ಕಿಮೀ ಉದ್ದದ ಪಾಲನ್‌ಪುರ್-ಮಿಥಾ ವಿಭಾಗದ ವಿದ್ಯುದ್ದೀಕರಣವನ್ನು ಒಳಗೊಂಡಿವೆ.

ಇದನ್ನೂ ಓದಿ: ಕೇಂದ್ರ ಸಚಿವಾಲಯ,ಇಲಾಖೆಗಳಲ್ಲಿ 10 ಲಕ್ಷ ಜನರ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಪ್ರದೇಶದಲ್ಲಿ ಸುಮಾರು 1,800 ಕೋಟಿ ರೂ. ಮೌಲ್ಯದ ಮನೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ 1,530 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮನೆಗಳು ಸೇರಿದಂತೆ ಒಟ್ಟು 1.38 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. 310 ಕೋಟಿ ರೂ.ಗೂ ಅಧಿಕ ಮೌಲ್ಯದ ಸುಮಾರು 3,000 ಮನೆಗಳ ‘ಖತ್ ಮುಹೂರ್ತ’ ಕೂಡ ನಡೆಯಲಿದೆ.

ಖೇಡಾ, ಆನಂದ್, ವಡೋದರಾ, ಛೋಟಾ ಉದೇಪುರ್ ಮತ್ತು ಪಂಚಮಹಲ್‌ನಲ್ಲಿ 680 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದಾಭೋಯಿ ತಾಲೂಕಿನ ಕುಂಧೇಲಾ ಗ್ರಾಮದಲ್ಲಿ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನೂ ಮೋದಿ ನೆರವೇರಿಸಲಿದ್ದಾರೆ. ವಡೋದರಾ ನಗರದಿಂದ ಸುಮಾರು 20 ಕಿಮೀ ದೂರದಲ್ಲಿರುವ ಈ ವಿಶ್ವವಿದ್ಯಾನಿಲಯವನ್ನು ಸುಮಾರು 425 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದು 2,500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಗತ್ಯಗಳನ್ನು ಪೂರೈಸುತ್ತದೆ.

ಇತರ ಉಪಕ್ರಮಗಳ ಪೈಕಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ‘ಮುಖ್ಯಮಂತ್ರಿ ಮಾತೃಶಕ್ತಿ ಯೋಜನೆ’ಯನ್ನು ಪ್ರಾರಂಭಿಸಲಿದ್ದು, ಇದು ತಾಯಿ ಮತ್ತು ಮಗುವಿನ ಆರೋಗ್ಯವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು 800 ಕೋಟಿ ರೂ. ಯೋಜನೆಯಡಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಂದ 2 ಕೆಜಿ ಕಡಲೆ, 1 ಕೆಜಿ ತೊಗರಿಬೇಳೆ ಮತ್ತು 1 ಕೆಜಿ ಖಾದ್ಯ ಎಣ್ಣೆಯನ್ನು ಉಚಿತವಾಗಿ ನೀಡಲಾಗುತ್ತದೆ.

ಇದನ್ನೂ ಓದಿ: ಶತಾಯುಷಿ ತಾಯಿಯ ಭೇಟಿಗಾಗಿ ಪ್ರಧಾನಿ ಮೋದಿ ಗುಜರಾತ್‌ಗೆ ಭೇಟಿ, 21000 ಕೋಟಿ ರೂ ಯೋಜನೆಗಳ ಉದ್ಘಾಟನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಮಾರು 120 ಕೋಟಿ ರೂ.ಗಳನ್ನು ‘ಪೋಷಣ್ ಸುಧಾ ಯೋಜನೆ’ಗೆ ವಿತರಿಸಲಿದ್ದಾರೆ. ಇದನ್ನು ಈಗ ರಾಜ್ಯದ ಎಲ್ಲಾ ಬುಡಕಟ್ಟು ಫಲಾನುಭವಿಗಳಿಗೆ ವಿಸ್ತರಿಸಲಾಗುತ್ತಿದೆ. ಬುಡಕಟ್ಟು ಜಿಲ್ಲೆಗಳ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಕಬ್ಬಿಣ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ನೀಡುವ ಮತ್ತು ಪೌಷ್ಟಿಕಾಂಶದ ಬಗ್ಗೆ ಶಿಕ್ಷಣ ನೀಡುವ ಪ್ರಯೋಗ ಯಶಸ್ವಿಯಾದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇನ್ನು, ಶ್ರೀ ಕಾಳಿಕಾ ಮಾತಾ ದೇವಾಲಯ ಈ ಪ್ರದೇಶದ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ. ಇದು ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. ದೇವಾಲಯದ ಪುನರಾಭಿವೃದ್ಧಿಯನ್ನು ಎರಡು ಹಂತಗಳಲ್ಲಿ ಮಾಡಲಾಗಿದೆ. ಮೊದಲ ಹಂತದ ಪುನರಾಭಿವೃದ್ಧಿಯ ಉದ್ಘಾಟನೆಯನ್ನು ಏಪ್ರಿಲ್‌ನಲ್ಲಿ ನರೇಂದ್ರ ಮೋದಿ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 am, Fri, 17 June 22