AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 20-21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ

ಜೂನ್ 20 ರಂದು, ಸಂಜೆ 6 ಗಂಟೆಗೆ, ಪ್ರಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಜಮ್ಮು ಕಾಶ್ಮೀರದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ಮಾಡಲಿದ್ದಾರೆ

ಜೂನ್ 20-21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Jun 19, 2024 | 8:04 PM

Share

ದೆಹಲಿ ಜೂನ್ 19: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಜೂನ್ 20 ಮತ್ತು 21 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 20 ರಂದು, ಸಂಜೆ 6 ಗಂಟೆಗೆ, ಪ್ರಧಾನ ಮಂತ್ರಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (SKICC) ನಲ್ಲಿ ‘ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಜಮ್ಮು ಕಾಶ್ಮೀರದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ಮಾಡಲಿದ್ದಾರೆ. ಕೃಷಿ ಮತ್ತು ಸಂಬಂಧಿತ ವಲಯಗಳ ಯೋಜನೆಯಲ್ಲಿ (JKCIP) ಸ್ಪರ್ಧಾತ್ಮಕತೆ ಸುಧಾರಣೆಗೂ ಅವರು ಚಾಲನೆ ನೀಡಲಿದ್ದಾರೆ.

ಜೂನ್ 21 ರಂದು, ಬೆಳಿಗ್ಗೆ 6.30 ರ ಸುಮಾರಿಗೆ, ಶ್ರೀನಗರದ SKICC ನಲ್ಲಿ 10 ನೇ ಅಂತರರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು ನಂತರ CYP ಯೋಗ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.

ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು

“ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು ಕಾರ್ಯಕ್ರಮವು ಯುವಕರಿಗೆ ಸ್ಫೂರ್ತಿ ನೀಡುವಂಥದ್ದು. ಈ ಸಂದರ್ಭದಲ್ಲಿ, ಪ್ರಧಾನ ಮಂತ್ರಿಯವರು ಸ್ಟಾಲ್‌ಗಳಿಗೆ ಭೇಟಿ ನೀಡಲಿದ್ದು ಯುವ ಸಾಧಕರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರು ರೂ. 1,500 ಕೋಟಿ ವೆಚ್ಚದ 84 ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಿದ್ದಾರೆ. ರಸ್ತೆ ಮೂಲಸೌಕರ್ಯ, ನೀರು ಸರಬರಾಜು ಯೋಜನೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಮೂಲಸೌಕರ್ಯ ಇತ್ಯಾದಿಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ. ಹೆಚ್ಚುವರಿಯಾಗಿ, ಚೆನಾನಿ-ಪಟ್ನಿಟಾಪ್-ನಶ್ರಿ ವಿಭಾಗದ ಸುಧಾರಣೆ, ಕೈಗಾರಿಕಾ ವಸಾಹತುಗಳ ಅಭಿವೃದ್ಧಿ ಮತ್ತು ಆರು ಸರ್ಕಾರಿ ಪದವಿ ಕಾಲೇಜುಗಳು ನಿರ್ಮಾಣದಂತಹ ಯೋಜನೆಗಳಿಗೆ ಪ್ರಧಾನಮಂತ್ರಿ ಅಡಿಪಾಯ ಹಾಕಲಿದ್ದಾರೆ.

ಪ್ರಧಾನಮಂತ್ರಿ ಅವರು ರೂ.1,800 ಕೋಟಿ ವೆಚ್ಚದಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ (ಜೆಕೆಸಿಐಪಿ) ಯೋಜನೆಗೆ ಚಾಲನೆ ನೀಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಾದ್ಯಂತ 90 ಬ್ಲಾಕ್‌ಗಳಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು. ಇದು 15 ಲಕ್ಷ ಫಲಾನುಭವಿಗಳನ್ನು ಒಳಗೊಂಡಿರುವ 300,000 ಕುಟುಂಬಗಳ ಯೋಜನೆಯ ವ್ಯಾಪ್ತಿಯನ್ನು ಹೊಂದಿರುತ್ತದೆ. ಪ್ರಧಾನಮಂತ್ರಿ ಅವರು ಸರ್ಕಾರಿ ಸೇವೆಯಲ್ಲಿ ನೇಮಕಗೊಂಡ 2000 ಕ್ಕೂ ಹೆಚ್ಚು ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಯೋಜನೆಗಳ ಶಂಕುಸ್ಥಾಪನೆ/ಉದ್ಘಾಟನೆ ಯುವಕರನ್ನು ಸಶಕ್ತಗೊಳಿಸುತ್ತದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂಲಸೌಕರ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಬಿಸಿಲಿನ ಆಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಯಲ್ಲಿ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ

ಅಂತರಾಷ್ಟ್ರೀಯ ಯೋಗ ದಿನ

2024 ರ ಜೂನ್ 21 ರಂದು 10 ನೇ ಅಂತರರಾಷ್ಟ್ರೀಯ ಯೋಗ ದಿನದ (IDY) ಸಂದರ್ಭದಲ್ಲಿ, ಶ್ರೀನಗರದ SKICC ಯಲ್ಲಿ ಪ್ರಧಾನ ಮಂತ್ರಿಯವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ. ಈ ಆಚರಣೆಯು ಯೋಗದ ಅಭ್ಯಾಸದಲ್ಲಿ ಸಾವಿರಾರು ಜನರನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ, ಜಾಗತಿಕ ಮಟ್ಟದಲ್ಲಿ ಆರೋಗ್ಯ ಮತ್ತು ಕ್ಷೇಮವನ್ನು ಉತ್ತೇಜಿಸುತ್ತದೆ. 2015 ರಿಂದ, ದೆಹಲಿಯ ಕರ್ತವ್ಯ ಪಥ್, ಚಂಡೀಗಢ, ಡೆಹ್ರಾಡೂನ್, ರಾಂಚಿ, ಲಕ್ನೋ, ಮೈಸೂರು ಮತ್ತು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ (IDY) ಆಚರಣೆಗಳನ್ನು ಪ್ರಧಾನ ಮಂತ್ರಿಯವರು ಮುನ್ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ