Rashtriya Ekta Diwas 2022: ರಾಷ್ಟ್ರೀಯ ಏಕತಾ ದಿವಸ್​; ಸರ್ದಾರ್ ಪಟೇಲ್​ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ ಮೋದಿ

ಈ ವರ್ಷವೂ ಪ್ರಧಾನಮಂತ್ರಿ ಮೋದಿ ಏಕತಾ ಪ್ರತಿಮೆ ಬಳಿ ನಡೆಯುವ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

Rashtriya Ekta Diwas 2022: ರಾಷ್ಟ್ರೀಯ ಏಕತಾ ದಿವಸ್​; ಸರ್ದಾರ್ ಪಟೇಲ್​ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 31, 2022 | 8:31 AM

ನವದೆಹಲಿ: ಸರ್ದಾರ್ ವಲ್ಲಭಬಾಯಿ ಪಟೇಲ್ (Sardar Vallabhbhai Patel) ಜನ್ಮದಿನದ ಅಂಗವಾಗಿ ಇಂದು (ಅ. 31) ರಾಷ್ಟ್ರೀಯ ಏಕತಾ ದಿನವನ್ನು (Rashtriya Ekta Divas) ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಏಕತಾ ಪ್ರತಿಮೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ ಮೋದಿ, ರಾಷ್ಟ್ರೀಯ ಏಕತಾ ದಿವಸದಂದು ಸರ್ದಾರ್ ಪಟೇಲ್ ಅವರಿಗೆ ಗೌರವ ಸಲ್ಲಿಸಲಿದ್ದಾರೆ. ಗುಜರಾತ್​ನ ಮೋರ್ಬಿ ಸೇತುವೆ ದುರಂತದ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮಾಚರಣೆಗಳನ್ನು ಮಾಡುವುದಿಲ್ಲ ಎಂದು ತಿಳಿಸಲಾಗಿದೆ. ಮೋರ್ಬಿ ದುರಂತಕ್ಕೆ (Morbi Tragedy) ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi), ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸರ್ದಾರ್ ಪಟೇಲ್ ಅವರ ಜನ್ಮದಿನವಾದ ಅಕ್ಟೋಬರ್ 31 ಅನ್ನು 2014ರಿಂದ ಪ್ರತಿ ವರ್ಷ ರಾಷ್ಟ್ರೀಯ ಏಕತಾ ದಿವಸ್ ಎಂದು ಆಚರಿಸಲಾಗುತ್ತಿದೆ. ಈ ವರ್ಷವೂ ಪ್ರಧಾನಮಂತ್ರಿಯವರು ಏಕತಾ ಪ್ರತಿಮೆ ಬಳಿ ನಡೆಯುವ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Morbi bridge collapse: ಕೇಬಲ್ ಸೇತುವೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 141ಕ್ಕೆ ಏರಿಕೆ

ಈ ಬಗ್ಗೆ ಮಾತನಾಡಿರುವ ಬಿಜೆಪಿ ಗುಜರಾತ್ ಮಾಧ್ಯಮ ಸಂಚಾಲಕ ಡಾ. ಯಜ್ಞೇಶ್ ದವೆ, ಮೋರ್ಬಿ ದುರಂತದಲ್ಲಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ಯಾವುದೇ ಸಂಭ್ರಮಾಚರಣೆಯ ಕಾರ್ಯಕ್ರಮಗಳನ್ನು ನಡೆಸುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ಆದರೂ 2,900 ಕೋಟಿ ರೂ. ಮೌಲ್ಯದ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯ ಕಾರ್ಯಕ್ರಮಗಳು ಈ ಹಿಂದಿನ ವೇಳಾಪಟ್ಟಿಯಂತೆ ನಡೆಯಲಿದೆ. 8,000 ಕೋಟಿ ರೂ.ಗಳ ಥರಾಡ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ಮೋದಿ, ಬನಸ್ಕಾಂತ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅವರು ಅಹಮದಾಬಾದ್‌ನಲ್ಲಿ ಪ್ರಮುಖ ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಇದನ್ನೂ ಓದಿ: ಮೊರ್ಬಿ ಸೇತುವೆ ಕುಸಿತ: ಮೃತರ ಕುಟುಂಬಕ್ಕೆ ತಲಾ 2ಲಕ್ಷ ಪರಿಹಾರ ಘೋಷಣೆ; ದುಃಖ ವ್ಯಕ್ತಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ

ಹಾಗೇ, ನವೆಂಬರ್ 1ರಂದು ರಾಜಸ್ಥಾನದ ಮಂಗಢ್ ಹಿಲ್‌ನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಮೋದಿ ಭಾಗವಹಿಸಲಿದ್ದಾರೆ. ಬಳಿಕ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಜಂಬುಗೋಡವನ್ನು ತಲುಪಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿ ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ ಗುಜರಾತ್‌ನ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಹಾಗೇ, ಗುಜರಾತ್ ಮತ್ತು ರಾಜಸ್ಥಾನಕ್ಕೆ 3 ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ರೋಡ್‌ಶೋ ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಮೋರ್ಬಿ ಕೇಬಲ್ ಸೇತುವೆ ಕುಸಿತದ ಘಟನೆಯ ಹಿನ್ನೆಲೆಯಲ್ಲಿ ಇದುವರೆಗೆ 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ, ರೋಡ್ ಶೋ ರದ್ದುಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 am, Mon, 31 October 22

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ