AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಫೆಬ್ರವರಿ 25ರವರೆಗೆ ಪ್ರಧಾನಿ ಮೋದಿ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ಪ್ರವಾಸ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆ ಮತ್ತು ಭಾಗಲ್ಪುರದಲ್ಲಿ ರೈತರಿಗೆ 19ನೇ ಕಂತಿನ ನಗದು ಸಹಾಯ ಬಿಡುಗಡೆ ಸೇರಿದಂತೆ ಹಲವಾರು ಅಭಿವೃದ್ಧಿ ಉಪಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಸ್ಸಾಂನ ಜುಮೋಯಿರ್ ಬಿನಂದಿನಿಯಲ್ಲೂ ಭಾಗವಹಿಸಲಿದ್ದಾರೆ. ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಮೋದಿ ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ನಾಳೆಯಿಂದ ಫೆಬ್ರವರಿ 25ರವರೆಗೆ ಪ್ರಧಾನಿ ಮೋದಿ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ಪ್ರವಾಸ
Pm Modi
Follow us
ಸುಷ್ಮಾ ಚಕ್ರೆ
|

Updated on: Feb 22, 2025 | 6:17 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ (ಫೆಬ್ರವರಿ 23) 3 ದಿನಗಳ ಕಾಲ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಪ್ರದೇಶದಲ್ಲಿ ಪ್ರಧಾನಿ ಮೋದಿ ಛತ್ತರ್ಪುರದಲ್ಲಿ ಬಾಗೇಶ್ವರ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿ, ಸೋಮವಾರ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಭೋಪಾಲ್‌ನಲ್ಲಿ ನಡೆಯಲಿರುವ ಎರಡು ದಿನಗಳ ಜಾಗತಿಕ ಹೂಡಿಕೆದಾರರ ಶೃಂಗಸಭೆ (GIS) ಮಧ್ಯಪ್ರದೇಶವನ್ನು ಜಾಗತಿಕ ಹೂಡಿಕೆ ಕೇಂದ್ರವಾಗಿ ಸ್ಥಾಪಿಸಲು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಇಲಾಖಾ ಶೃಂಗಸಭೆಗಳು, ಔಷಧ ಮತ್ತು ವೈದ್ಯಕೀಯ ಸಾಧನಗಳು, ಸಾರಿಗೆ ಮತ್ತು ಲಾಜಿಸ್ಟಿಕ್ಸ್, ಕೈಗಾರಿಕೆ, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEs) ಕುರಿತು ವಿಶೇಷ ಅಧಿವೇಶನಗಳನ್ನು ಒಳಗೊಂಡಿರುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಸ್ಸಾಂನ ಜುಮೋಯಿರ್ ಬಿನಂದಿನಿಯಲ್ಲೂ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಅಸ್ಸಾಂನಲ್ಲಿ ಚಹಾ ಉದ್ಯಮದ 200 ವರ್ಷಗಳ ಮತ್ತು ಕೈಗಾರಿಕೀಕರಣದ 200 ವರ್ಷಗಳ ಸಂಕೇತವಾಗಿದೆ.

ಇದನ್ನೂ ಓದಿ: ಛತ್ರಪತಿ ಸಂಭಾಜಿ ಜೀವನಾಧರಿತ ಛಾವಾ ಸಿನಿಮಾಗೆ ಪ್ರಧಾನಿ ಮೋದಿಯಿಂದಲೂ ಭಾರೀ ಮೆಚ್ಚುಗೆ

ಮಧ್ಯಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ:

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 3 ದಿನಗಳ ಪ್ರವಾಸದಲ್ಲಿ, ಪ್ರಧಾನಿ ಮೋದಿ ಮೊದಲು ಮಧ್ಯಪ್ರದೇಶಕ್ಕೆ ಹೋಗಿ, ಅಲ್ಲಿಂದ ಭೋಪಾಲ್‌ನಲ್ಲಿ ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆ ಮತ್ತು ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 23ರಂದು ಅವರು ಮಧ್ಯಪ್ರದೇಶದ ಛತ್ತರ್ಪುರ್ ಜಿಲ್ಲೆಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 24ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪ್ರಧಾನ ಮಂತ್ರಿ ಮೋದಿ ಭೋಪಾಲ್‌ನಲ್ಲಿ 2025ರ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ.

60ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು, ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳ ಅಧಿಕಾರಿಗಳು, ಭಾರತದ 300ಕ್ಕೂ ಹೆಚ್ಚು ಪ್ರಮುಖ ಕೈಗಾರಿಕಾ ಮುಖಂಡರು ಮತ್ತು ನೀತಿ ನಿರೂಪಕರು ಸೇರಿದಂತೆ ಇತರರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬಿಹಾರಕ್ಕೆ ಪ್ರಧಾನಿ ಮೋದಿ ಭೇಟಿ:

ಫೆಬ್ರವರಿ 24ರಂದು ಪ್ರಧಾನಿ ನರೇಂದ್ರ ಮೋದಿ ಬಿಹಾರದ ಭಾಗಲ್ಪುರಕ್ಕೆ ಪ್ರಯಾಣಿಸಲಿದ್ದು, ಮಧ್ಯಾಹ್ನ 2.15ರ ಸುಮಾರಿಗೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಮೋದಿ ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಇದನ್ನೂ ಓದಿ: ಮಾರಿಷಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿ; ಪಿಎಂ ನವೀನ್ ರಾಮ್‌ಗೂಲಂ ಘೋಷಣೆ

ಪ್ರಧಾನಿ ಮೋದಿ ಅಸ್ಸಾಂ ಭೇಟಿ:

ಪ್ರಧಾನಮಂತ್ರಿ ನರೇಂದ್ರ ಮೋದಿ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದು, ಫೆಬ್ರವರಿ 24ರಂದು ಸಂಜೆ 6 ಗಂಟೆ ಸುಮಾರಿಗೆ ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 25ರಂದು ಬೆಳಿಗ್ಗೆ 10.45ರ ಸುಮಾರಿಗೆ ಪ್ರಧಾನ ಮಂತ್ರಿ ಮೋದಿ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ.

ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು, ಜಾಗತಿಕ ನಾಯಕರು ಮತ್ತು ಹೂಡಿಕೆದಾರರು, ನೀತಿ ನಿರೂಪಕರು, ಉದ್ಯಮ ತಜ್ಞರು, ನವೋದ್ಯಮಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇತರರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್