AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 8,500 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಮಣಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ (ಶನಿವಾರ) 8,500 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 2023ರ ಜನಾಂಗೀಯ ಹಿಂಸಾಚಾರದ ನಂತರ ಮಣಿಪುರಕ್ಕೆ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಜನಾಂಗೀಯ ಘರ್ಷಣೆಗಳು ಮಣಿಪುರವನ್ನು ತಲ್ಲಣಗೊಳಿಸಿದ 2 ವರ್ಷಗಳ ನಂತರ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಮಣಿಪುರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 8,500 ಕೋಟಿ ರೂ. ಯೋಜನೆಗಳಿಗೆ ಚಾಲನೆ
Modi
ಸುಷ್ಮಾ ಚಕ್ರೆ
|

Updated on: Sep 12, 2025 | 5:04 PM

Share

ನವದೆಹಲಿ, ಸೆಪ್ಟೆಂಬರ್ 12: ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಶನಿವಾರ) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ, 2023ರಲ್ಲಿ 200ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಜನಾಂಗೀಯ ಹಿಂಸಾಚಾರದ ನಂತರ ಈ ರಾಜ್ಯಕ್ಕೆ ಮೋದಿಯ ಮೊದಲ ಪ್ರವಾಸ ಇದಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಸಂಘರ್ಷ ಪೀಡಿತ ಈಶಾನ್ಯ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸಲು ಮಣಿಪುರ ರಾಜ್ಯಕ್ಕೆ ಭೇಟಿ ನೀಡದಿದ್ದಕ್ಕಾಗಿ ವಿರೋಧ ಪಕ್ಷಗಳು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿತ್ತು.

ಮಣಿಪುರದ ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯಲ್ ಅವರು ಸೆಪ್ಟೆಂಬರ್ 13ರಂದು ಪ್ರಧಾನಿ ಮೋದಿ 8,500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಮೊದಲು ಮಿಜೋರಾಂನಿಂದ ಚುರಾಚಂದ್‌ಪುರಕ್ಕೆ ಆಗಮಿಸಲಿದ್ದಾರೆ. ನಂತರ ಇಂಫಾಲ್‌ಗೆ ತೆರಳಲಿದ್ದಾರೆ. “ಮಣಿಪುರದ ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಚುರಾಚಂದ್‌ಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಉಂಗುರದಿಂದ ಹಿಡಿದು ರಾಜನಾಥ್ ಸಿಂಗ್ ಹೊಂದಿರುವ ಪೈಪ್​ಗನ್​​ವರೆಗೆ ಯಾವ್ಯಾವ ಸಚಿವರ ಆಸ್ತಿ ಎಷ್ಟೆಷ್ಟಿದೆ?

ಜನಾಂಗೀಯ ಹಿಂಸಾಚಾರದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ಚುರಾಚಂದ್‌ಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ 1,200 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಹಾಗೇ, ಮಣಿಪುರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳ ಮತ್ತು ಚುನಾವಣೆ ನಡೆಯಲಿರುವ ಬಿಹಾರಕ್ಕೆ ಹೋಗುವ ಮೊದಲು ಮಿಜೋರಾಂ ಮತ್ತು ಅಸ್ಸಾಂ ಸೇರಿದಂತೆ ಇತರ ಈಶಾನ್ಯ ರಾಜ್ಯಗಳಿಗೂ ಭೇಟಿ ನೀಡಲಿದ್ದಾರೆ. ನಾಳೆ ಅವರು ಮಿಜೋರಾಂನಲ್ಲಿ ತಮ್ಮ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಅಲ್ಲಿ ಅವರು ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಇದರ ನಂತರ ಅವರು ಮಣಿಪುರಕ್ಕೆ ಪ್ರಯಾಣಿಸಲಿದ್ದಾರೆ. ನಾಳೆ ಸಂಜೆ ಪ್ರಧಾನ ಮಂತ್ರಿ ಮೋದಿ ಗುವಾಹಟಿಯಲ್ಲಿ ನಡೆಯಲಿರುವ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮಳೆಯಿಂದ ಹಾನಿಗೊಳಗಾದ ಉತ್ತರಾಖಂಡಕ್ಕೆ ಪ್ರಧಾನಿ ಮೋದಿ 1,200 ಕೋಟಿ ರೂ.ನೆರವು ಘೋಷಣೆ

ಸೆಪ್ಟೆಂಬರ್ 14ರಂದು ಪ್ರಧಾನ ಮಂತ್ರಿ ಮೋದಿ ಮತ್ತೊಮ್ಮೆ ಅಸ್ಸಾಂನಲ್ಲಿ 18,530 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಪ್ರಮುಖ ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮರುದಿನ, ಸೆಪ್ಟೆಂಬರ್ 15ರಂದು ಅವರು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ 16ನೇ ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನ -2025 ಅನ್ನು ಉದ್ಘಾಟಿಸಲಿದ್ದಾರೆ. ನಂತರ ಬಿಹಾರಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಮಧ್ಯಾಹ್ನ ಪೂರ್ಣಿಯಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ