AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sohna-Dausa Inauguration: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇಯನ್ನು ಉದ್ಘಾಟಿಸಲಿದ್ದಾರೆ.

Sohna-Dausa Inauguration: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ
TV9 Web
| Edited By: ವಿವೇಕ ಬಿರಾದಾರ|

Updated on: Feb 04, 2023 | 7:22 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.12) ದೆಹಲಿಯಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇಯನ್ನು ಉದ್ಘಾಟಿಸಲಿದ್ದಾರೆ. ದೆಹಲಿ ಮತ್ತು ಜೈಪುರ ಪ್ರಯಾಣ 4 ರಿಂದ 5 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಈಗ ಎಕ್ಸ್​ಪ್ರೆಸ್​​ ವೇ ಮೂಲಕ 2 ಗಂಟೆಯಲ್ಲೇ ತಲುಪಬಹುದಾಗಿದೆ. ಈ ಎಕ್ಸ್​ಪ್ರೆಸ್​ ವೇಯನ್ನು “ಭಾರತಮಾಲಾ ಪರಿಯೋಜನಾ” ಮೊದಲ ಹಂತದ ಭಾಗವಾಗಿ ನಿರ್ಮಿಸಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು 1 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

8 ಪಥಗಳ ಎಕ್ಸ್‌ಪ್ರೆಸ್‌ವೇಯನ್ನು 12 ಪಥಗಳ ಎಕ್ಸ್‌ಪ್ರೆಸ್‌ವೇಯಾಗಿ ವಿಸ್ತರಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಗುಜರಾತ್​​​​ ರಾಜ್ಯಗಳನ್ನು ಸಂಪರ್ಕಿಸುತ್ತದೆ. ದೆಹಲಿ-ಮುಂಬೈ ನಡುವಿನ 1,390 ಕೀಮಿ ದೂರದ ಅತಿ ದೊಡ್ಡ ಎಕ್ಸ್‌ಪ್ರೆಸ್‌ವೇ ಇದಾಗಿದೆ.

ಇದಲ್ಲದೆ, ಇದು ಆರ್ಥಿಕ ಕೇಂದ್ರಗಳಾದ ದೆಹಲಿ, ಮುಂಬೈ, ಜೈಪುರ, ಕಿಶನ್‌ಗಡ್, ಅಜ್ಮೀರ್, ಕೋಟಾ, ಚಿತ್ತೋರ್‌ಗಢ, ಉದಯಪುರ, ಭೋಪಾಲ್, ಉಜ್ಜೈನ್, ಇಂದೋರ್, ಅಹಮದಾಬಾದ್, ವಡೋದರಾ ಮತ್ತು ಸೂರತ್‌ಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಅನೇಕ ಜನರ ವಾಣಿಜ್ಯ ವ್ಯಾಪಾರಕ್ಕೂ ಅನುಕೂಲವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್