ಆಗಸ್ಟ್ 29ರಿಂದ ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ಗೆ ಪ್ರಧಾನಿ ಮೋದಿ 4 ದಿನಗಳ ಪ್ರವಾಸ

ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಜ್ ಗಣರಾಜ್ಯಕ್ಕೆ 4 ದಿನಗಳ ಪ್ರಮುಖ ದ್ವಿಪಕ್ಷೀಯ ಹಾಗೂ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತಾಷ್ಕೆಂಟ್‌ಗೆ ತೆರಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ವ್ಯಾಪಾರ, ಹೂಡಿಕೆ, ರಕ್ಷಣೆ, ಡಿಜಿಟಲ್ ಸಂಪರ್ಕ, ಇಂಧನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

ಆಗಸ್ಟ್ 29ರಿಂದ ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ಗೆ ಪ್ರಧಾನಿ ಮೋದಿ 4 ದಿನಗಳ ಪ್ರವಾಸ
Pm Modi
Image Credit source: PTI

Updated on: Aug 27, 2026 | 7:39 PM

ನವದೆಹಲಿ, ಆಗಸ್ಟ್ 27: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಜ್ ಗಣರಾಜ್ಯಕ್ಕೆ 4 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 29-30ರಂದು ಉಜ್ಬೇಕಿಸ್ತಾನ್‌ಗೆ ಅಧಿಕೃತ ಭೇಟಿ ನೀಡಲಿರುವ ಪ್ರಧಾನಿ ಮೋದಿ ನಂತರ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಕಿರ್ಗಿಸ್ತಾನ್‌ನಲ್ಲಿ ನಡೆಯಲಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಕಾರ್ಯದರ್ಶಿ ಸಿಬಿ ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ಈ ಭೇಟಿಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿಯ ಉಜ್ಬೇಕಿಸ್ತಾನ್ ಪ್ರವಾಸದ ಮುಖ್ಯಾಂಶಗಳು:

ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ತಾಷ್ಕೆಂಟ್‌ಗೆ ತೆರಳಲಿದ್ದಾರೆ. ಇದು ಪ್ರಧಾನಿ ಮೋದಿಯವರ 4ನೇ ಉಜ್ಬೇಕಿಸ್ತಾನ್ ಭೇಟಿಯಾಗಿದೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಮಿರ್ಜಿಯೊಯೆವ್ ಅವರೊಂದಿಗೆ ಮೋದಿ ನಿಯೋಗ ಮಟ್ಟದ ಮಾತುಕತೆ ನಡೆಸಿ, ಎರಡೂ ದೇಶಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲಿದ್ದಾರೆ. ವ್ಯಾಪಾರ-ಹೂಡಿಕೆ, ರಕ್ಷಣೆ, ಡಿಜಿಟಲ್ ಸಂಪರ್ಕ, ಇಂಧನ, ಶಿಕ್ಷಣ ಮತ್ತು ಸಾರ್ವಜನಿಕ ಸಂಪರ್ಕ ಕ್ಷೇತ್ರಗಳ ಪರಿಶೀಲನೆ ನಡೆಸಲಾಗುವುದು. ‘ವಿಕಸಿತ ಭಾರತ 2047’ ಮತ್ತು ‘ಉಜ್ಬೇಕಿಸ್ತಾನ್-2030’ ಯೋಜನೆಗಳಿಗೆ ಅನುಗುಣವಾಗಿ ದ್ವಿಪಕ್ಷೀಯ ಅಭಿವೃದ್ಧಿ ಕುರಿತು ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್​ನಲ್ಲಿ ಭಾರತ ಯಾಕೆ ಹೆಚ್ಚು ಪದಕ ಗೆಲ್ಲುತ್ತಿಲ್ಲ? ಪಿಎಂ ಮೋದಿ ಬಿಚ್ಚಿಟ್ಟ ಕಹಿ ಸತ್ಯ!

ತಾಷ್ಕೆಂಟ್‌ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕ ಹಾಗೂ ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿರುವ ಮಹಾತ್ಮ ಗಾಂಧಿ ಕೇಂದ್ರಕ್ಕೆ ಮೋದಿ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಸುಮಾರು 1 ಬಿಲಿಯನ್ ಅಮೆರಿಕನ್ ಡಾಲರ್ ಸಮೀಪದಲ್ಲಿದೆ.

ಕಿರ್ಗಿಸ್ತಾನ್ ಪ್ರವಾಸದ ಹೈಲೈಟ್ಸ್:

ಕಿರ್ಗಿಜ್ ಅಧ್ಯಕ್ಷ ಸದಿರ್ ಜಪರೋವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಬಿಷ್ಕೆಕ್‌ನಲ್ಲಿ ನಡೆಯಲಿರುವ 26ನೇ ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಂಘೈ ಸಹಕಾರ ಸಂಸ್ಥೆ (SCO) ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದ್ದು, ಭಾರತ 2017ರಿಂದ ಇದರ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿದೆ.

ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ, ದ್ವಿಪಕ್ಷೀಯ ಮಾತುಕತೆಗಳು: ಶೃಂಗಸಭೆಯ ಬಿಡುವಿನ ವೇಳೆ ಹಲವು ಎಸ್‌ಸಿಒ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಪ್ರಧಾನಿ ಮೋದಿ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಮಧ್ಯ ಏಷ್ಯಾದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ 6ನೇ ‘ವರ್ಲ್ಡ್ ನೋಮ್ಯಾಡ್ ಗೇಮ್ಸ್’ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us