AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮತ್ತೆ ವಾರಾಣಸಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; 870 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Narendra Modi Varanasi Visit: ಪ್ರಧಾನಿ ನರೇಂದ್ರ ಮೋದಿ ನಾಳೆ ಮತ್ತೊಮ್ಮೆ ವಾರಣಾಸಿಗೆ ಭೇಟಿ ನೀಡುವರು. ಗುರುವಾರ 870 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ

ಇಂದು ಮತ್ತೆ ವಾರಾಣಸಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; 870 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ
ಪ್ರಧಾನಮಂತ್ರಿ ನರೇಂದ್ರ ಮೋದಿ
S Chandramohan
| Updated By: Lakshmi Hegde|

Updated on:Dec 23, 2021 | 11:00 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು (ಡಿಸೆಂಬರ್ 23) ಮತ್ತೊಮ್ಮೆ ಉತ್ತರ ಪ್ರದೇಶಕ್ಕೆ ಭೇಟಿ ನೀಡುವರು. ಉತ್ತರ ಪ್ರದೇಶದಲ್ಲಿ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಗೆ ನಾಳೆ ಭೇಟಿ ನೀಡುವರು. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಪ್ರಧಾನಿ ಮೋದಿ ವಾರಾಣಸಿಗೆ ಇಂದು ಭೇಟಿ ನೀಡುತ್ತಿದ್ದಾರೆ. ವಾರಾಣಸಿಯಲ್ಲಿ 870 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವರು. ಜೊತೆಗೆ ಕೃಷಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುವರು.

ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೊಮ್ಮೆ ವಾರಣಾಸಿಗೆ ಭೇಟಿ ನೀಡುವರು. ಗುರುವಾರ 870 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ. ಇದು ಒಂದು ತಿಂಗಳ ಅವಧಿಯಲ್ಲಿ ಅವರ ಸಂಸದೀಯ ಕ್ಷೇತ್ರಕ್ಕೆ ಅವರ ಎರಡನೇ ಭೇಟಿಯಾಗಿದೆ. ಈ ತಿಂಗಳ ಆರಂಭದಲ್ಲಿ ಅವರು ಕಾಶಿ ವಿಶ್ವನಾಥ ದೇವಾಲಯ ಕಾರಿಡಾರ್ ಉದ್ಘಾಟಿಸಲು ಪವಿತ್ರ ನಗರಕ್ಕೆ ಭೇಟಿ ನೀಡಿದ್ದರು.

ಇಂದಿನ ಭೇಟಿಯ ವೇಳೆ ಪ್ರಧಾನಿ ಮೋದಿಯವರು ವಾರಣಾಸಿಯ ಕರ್ಖಿಯೋನ್‌ನಲ್ಲಿರುವ ಉತ್ತರ ಪ್ರದೇಶ ರಾಜ್ಯ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಫುಡ್ ಪಾರ್ಕ್‌ನಲ್ಲಿ ‘ಬನಾಸ್ ಡೈರಿ ಸಂಕುಲ್’ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. 30 ಎಕರೆ ಪ್ರದೇಶದಲ್ಲಿ ಹರಡಿರುವ ಈ ಡೇರಿಯು ಸುಮಾರು 475 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ದಿನಕ್ಕೆ 5 ಲಕ್ಷ ಲೀಟರ್ ಹಾಲು ಸಂಸ್ಕರಿಸುವ ಸೌಲಭ್ಯವನ್ನು ಹೊಂದಿದೆ. ಇದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತದೆ. ಈ ಪ್ರದೇಶದ ರೈತರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಪಿಎಂಒ ಹೇಳಿದೆ.

ಬನಾಸ್ ಡೈರಿಗೆ ಸಂಬಂಧಿಸಿದ 1.7 ಲಕ್ಷಕ್ಕೂ ಹೆಚ್ಚು ಹಾಲು ಉತ್ಪಾದಕರ ಬ್ಯಾಂಕ್ ಖಾತೆಗಳಿಗೆ ಸುಮಾರು 35 ಕೋಟಿ ರೂ. ಬೋನಸ್ ಅನ್ನು ಪ್ರಧಾನಮಂತ್ರಿ ಡಿಜಿಟಲ್ ರೂಪದಲ್ಲಿ ವರ್ಗಾಯಿಸಲಿದ್ದಾರೆ. ವಾರಾಣಸಿಯ ರಾಮನಗರದ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಘಟಕಕ್ಕೆ ಜೈವಿಕ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನ್ಯಾಶನಲ್ ಡೈರಿ ಡೆವಲಪ್‌ಮೆಂಟ್ ಬೋರ್ಡ್ (ಎನ್‌ಡಿಡಿಬಿ) ಸಹಾಯದಿಂದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಅಭಿವೃದ್ಧಿಪಡಿಸಿದ ಹಾಲಿನ ಉತ್ಪನ್ನಗಳ ಅನುಸರಣೆ ಮೌಲ್ಯಮಾಪನ ಯೋಜನೆಗೆ ಮೀಸಲಾದ ಪೋರ್ಟಲ್ ಮತ್ತು ಲೋಗೋವನ್ನು ಸಹ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. BIS ಮತ್ತು NDDB ಗುಣಮಟ್ಟದ ಗುರುತುಗಳ ಲೋಗೋಗಳನ್ನು ಒಳಗೊಂಡಿರುವ ಏಕೀಕೃತ ಲೋಗೋ ಡೈರಿ ವಲಯದ ಪ್ರಮಾಣೀಕರಣ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ, ಡೈರಿ ಉತ್ಪನ್ನದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡುತ್ತದೆ.

ತಳಮಟ್ಟದಲ್ಲಿ ಭೂ ಮಾಲೀಕತ್ವದ ಸಮಸ್ಯೆಗಳನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ಪ್ರಧಾನಮಂತ್ರಿ ಮೋದಿ, ಉತ್ತರ ಪ್ರದೇಶದ 20 ಲಕ್ಷಕ್ಕೂ ಹೆಚ್ಚು ನಿವಾಸಿಗಳಿಗೆ ಸ್ವಾಮೀತ್ವ ಯೋಜನೆಯಡಿ ಗ್ರಾಮೀಣ ವಸತಿ ಹಕ್ಕುಗಳ ದಾಖಲೆ ‘ಘರೌನಿ’ಯನ್ನು ವಿತರಿಸಲಿದ್ದಾರೆ. ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಾರಣಾಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 870 ಕೋಟಿ ರೂ. ಮೊತ್ತದ 22 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವರು.

ಪ್ರಧಾನಿ ನರೇಂದ್ರ ಮೋದಿ, ವಾರಣಾಸಿಯಲ್ಲಿ ಬಹು ನಗರಾಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇವುಗಳಲ್ಲಿ ಹಳೆಯ ಕಾಶಿ ವಾರ್ಡ್‌ಗಳ ಪುನರಾಭಿವೃದ್ಧಿ, ಬೆನಿಯಾಬಾಗ್‌ನಲ್ಲಿ ಪಾರ್ಕಿಂಗ್ ಮತ್ತು ಉದ್ಯಾನವನ, ಎರಡು ಕೊಳಗಳ ಸುಂದರೀಕರಣ, ರಾಮನ ಹಳ್ಳಿಯಲ್ಲಿ ಒಂದು ಕೊಳಚೆ ನೀರು ಸಂಸ್ಕರಣಾ ಘಟಕ ಮತ್ತು ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ 720 ಸ್ಥಳಗಳಲ್ಲಿ ಸುಧಾರಿತ ಕಣ್ಗಾವಲು ಕ್ಯಾಮೆರಾಗಳನ್ನು ಒದಗಿಸುವ ಆರು ಯೋಜನೆಗಳು ಸೇರಿವೆ.

ಮೋದಿ ಉದ್ಘಾಟಿಸಲಿರುವ ಶಿಕ್ಷಣ ಕ್ಷೇತ್ರದ ಯೋಜನೆಗಳಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಶಿಕ್ಷಕರ ಶಿಕ್ಷಣಕ್ಕಾಗಿ ಸುಮಾರು 107 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶಿಕ್ಷಕರ ಶಿಕ್ಷಣ ಕೇಂದ್ರ ಮತ್ತು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹೈಯರ್ ಟಿಬೆಟಿಯನ್ ಸ್ಟಡೀಸ್‌ನಲ್ಲಿ ಶಿಕ್ಷಕರ ಶಿಕ್ಷಣ ಕೇಂದ್ರವನ್ನು ನಿರ್ಮಿಸಲಾಗಿದೆ. ಇದಲ್ಲದೆ, BHU ಮತ್ತು ITI ಕರೌಂಡಿಯಲ್ಲಿ ವಸತಿ ಫ್ಲಾಟ್‌ಗಳು ಮತ್ತು ಸಿಬ್ಬಂದಿ ಕ್ವಾರ್ಟರ್ಸ್‌ಗಳನ್ನು ಸಹ ಪ್ರಧಾನ ಮಂತ್ರಿ ಉದ್ಘಾಟಿಸಲಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ, ಪಂಡಿತ್ ಮದನ್ ಮೋಹನ್ ಮಾಳವೀಯ ಕ್ಯಾನ್ಸರ್ ಕೇಂದ್ರದಲ್ಲಿ 130 ಕೋಟಿ ರೂ. ಮೊತ್ತದ ವೈದ್ಯರ ಹಾಸ್ಟೆಲ್, ದಾದಿಯರ ಹಾಸ್ಟೆಲ್ ಮತ್ತು ಆಶ್ರಯ ಮನೆಯನ್ನು ಒಳಗೊಂಡ ಯೋಜನೆಯನ್ನು ಉದ್ಘಾಟಿಸಲಾಗುವುದು. ಪ್ರಧಾನಮಂತ್ರಿಯವರು ಭದ್ರಸಿಯಲ್ಲಿ 50 ಹಾಸಿಗೆಗಳ ಇಂಟಿಗ್ರೇಟೆಡ್ ಆಯುಷ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಆಯುಷ್ ಮಿಷನ್ ಅಡಿಯಲ್ಲಿ ಪಿಂದ್ರಾ ತಾಲ್ಲೂಕಿನಲ್ಲಿ 49 ಕೋಟಿ ರೂ. ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿಗೆ ಅಡಿಪಾಯ ಹಾಕಲಿದ್ದಾರೆ.

ರಸ್ತೆ ವಲಯದಲ್ಲಿ, ಪ್ರಯಾಗ್‌ರಾಜ್ ಮತ್ತು ಭದೋಹಿ ರಸ್ತೆಗಳಿಗಾಗಿ ಎರಡು ‘4 ರಿಂದ 6 ಲೇನ್’ ರಸ್ತೆ ವಿಸ್ತರಣೆ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ವಾರಾಣಸಿಯ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ನಗರದ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಹೆಜ್ಜೆಯಾಗಿದೆ.

ಪವಿತ್ರ ನಗರದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಲು, ಪ್ರಧಾನಮಂತ್ರಿಯವರು ಗುರು ರವಿದಾಸ್ ಜಿ ದೇವಸ್ಥಾನ, ಸೀರ್ ಗೋವರ್ಧನ, ವಾರಣಾಸಿಗೆ ಸಂಬಂಧಿಸಿದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯ ಹಂತ-1 ಅನ್ನು ಉದ್ಘಾಟಿಸಲಿದ್ದಾರೆ. ಅವರು ಇಂಟರ್​ನ್ಯಾಷನಲ್ ರೈಸ್ ರಿಸರ್ಚ್ ಇನ್​ಸ್ಟಿಟ್ಯೂಟ್, ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ವಾರಾಣಸಿಯಲ್ಲಿ ಸ್ಪೀಡ್ ಬ್ರೀಡಿಂಗ್ ಫೆಸಿಲಿಟಿ, ಪಯಕ್‌ಪುರ ಗ್ರಾಮದಲ್ಲಿ ಪ್ರಾದೇಶಿಕ ಉಲ್ಲೇಖ ಮಾನದಂಡಗಳ ಪ್ರಯೋಗಾಲಯ ಮತ್ತು ಪಿಂದ್ರಾ ತಾಲೂಕಿನಲ್ಲಿ ವಕೀಲರ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಏರುತ್ತಿರುವ ಒಮಿಕ್ರಾನ್​ ಪ್ರಕರಣ, 3ನೇ ಅಲೆ ಆತಂಕ; ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಮಹಿಳಾ ಸಬಲೀಕರಣ ಯೋಜನೆಗಳ ಫಲಾನುಭವಿಗಳಿಗೆ ₹1000 ಕೋಟಿ ವರ್ಗಾವಣೆ ಮಾಡಲಿದ್ದಾರೆ ಮೋದಿ

Published On - 5:57 pm, Wed, 22 December 21

ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು