ನಾಳೆಯಿಂದ 2 ದಿನ ಬಂಗಾಳ, ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 17-18ರಂದು ಪಶ್ಚಿಮ ಬಂಗಾಳ, ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಹೌರಾ ಮತ್ತು ಗುವಾಹಟಿ ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಚುನಾವಣೆ ನಡೆಯಲಿರುವ 2 ರಾಜ್ಯಗಳಾದ ಅಸ್ಸಾಂ, ಬಂಗಾಳದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗೇ, ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ನಾಳೆಯಿಂದ 2 ದಿನ ಬಂಗಾಳ, ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ
Pm Modi

Updated on: Jan 16, 2026 | 9:49 PM

ನವದೆಹಲಿ, ಜನವರಿ 16: ಜನವರಿ 17 ಮತ್ತು 18ರಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೆ ಎರಡು ದಿನಗಳ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಪ್ರಮುಖ ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಬಾಗುರುಂಬಾ ದ್ವೌ 2026″ದಲ್ಲಿ ಮೋದಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಶನಿವಾರ ಮಧ್ಯಾಹ್ನ 12.45ರ ಸುಮಾರಿಗೆ ಪಶ್ಚಿಮ ಬಂಗಾಳದ ಮಾಲ್ಡಾಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಲ್ಡಾ ಪಟ್ಟಣದ ರೈಲು ನಿಲ್ದಾಣದಲ್ಲಿ ಹೌರಾವನ್ನು ಗುವಾಹಟಿ (ಕಾಮಾಕ್ಯ)ಯನ್ನು ಸಂಪರ್ಕಿಸುವ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. 3,250 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ

ಜನವರಿ 17ರಂದು ಸಂಜೆ ಮೋದಿ ಅವರು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಬಾಗುರುಂಬಾ ದ್ವೌ 2026″ದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10,000ಕ್ಕೂ ಹೆಚ್ಚು ಕಲಾವಿದರು ಒಂದೇ ಬಾರಿಗೆ ಬಾಗುರುಂಬಾ ನೃತ್ಯವನ್ನು ಪ್ರದರ್ಶಿಸಲಿದ್ದಾರೆ.

ಕಲಿಯಾಬೋರ್‌ನಲ್ಲಿ 6,950 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗಾಗಿ ಮೋದಿ ಭೂಮಿ ಪೂಜೆಯನ್ನು ಸಹ ಮಾಡಲಿದ್ದಾರೆ. 86 ಕಿ.ಮೀ. ಉದ್ದದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಪರಿಸರ ಸೂಕ್ಷ್ಮ ರಾಷ್ಟ್ರೀಯ ಹೆದ್ದಾರಿ ಯೋಜನೆಯಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಯನ್ನು ಸಂರಕ್ಷಣೆಯೊಂದಿಗೆ ಸಮತೋಲನಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

ಜನವರಿ 18ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಸುಮಾರು 830 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಮೋದಿ 2 ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಾದ ಗುವಾಹಟಿ (ಕಾಮಾಕ್ಯ) – ರೋಹ್ಟಕ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ದಿಬ್ರುಗಢ – ಲಕ್ನೋ (ಗೋಮ್ತಿ ನಗರ) ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಈ ಹೊಸ ಸೇವೆಗಳು ಈಶಾನ್ಯ ಮತ್ತು ಉತ್ತರ ಭಾರತದ ನಡುವಿನ ರೈಲು ಸಂಪರ್ಕವನ್ನು ಬಲಪಡಿಸುತ್ತದೆ. ಪ್ರಯಾಣಿಕರಿಗೆ ಸುರಕ್ಷಿತ, ವೇಗದ ಮತ್ತು ಹೆಚ್ಚು ಅನುಕೂಲಕರ ಪ್ರಯಾಣವನ್ನು ಒದಗಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ