ಪಶ್ಚಿಮ ಬಂಗಾಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 7,800 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

| Updated By: ಸುಷ್ಮಾ ಚಕ್ರೆ

Updated on: Dec 29, 2022 | 2:34 PM

ಕೋಲ್ಕತ್ತಾದಲ್ಲಿ ಎನ್‌ಜಿಸಿ ಸಭೆಯ ಅಧ್ಯಕ್ಷತೆಯನ್ನು ಮೋದಿ ವಹಿಸಲಿದ್ದಾರೆ. ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಲ್ಲದೆ ಹಲವಾರು ಕೇಂದ್ರ ಸಚಿವರು ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪಶ್ಚಿಮ ಬಂಗಾಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 7,800 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ
Follow us on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ (ಶುಕ್ರವಾರ) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, 7,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೇ, ಇದೇ ವೇಳೆ ಹೌರಾ ಮತ್ತು ನ್ಯೂ ಜಲ್ಪೈಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ (Vande Bharat Express) ಚಾಲನೆ ನೀಡಲಿದ್ದಾರೆ. ಕೊಲ್ಕತ್ತಾದಲ್ಲಿ ನಡೆಯಲಿರುವ ರಾಷ್ಟ್ರೀಯ ಗಂಗಾ ಮಂಡಳಿಯ (NGC) ಎರಡನೇ ಸಭೆಗೂ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಮೋದಿ 2,550 ಕೋಟಿ ರೂ.ಗಳ ಬಹು ಒಳಚರಂಡಿ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೊಲ್ಕತ್ತಾ ಮೆಟ್ರೋದ ಪರ್ಪಲ್ ಲೈನ್‌ನ ಜೋಕಾ-ತಾರಾಟಾಲಾ ಸ್ಟ್ರೆಚ್ ಅನ್ನು ಕೂಡ ಅವರು ಇದೇ ವೇಳೆ ಉದ್ಘಾಟಿಸಲಿದ್ದಾರೆ. ಹೊಸ ಜಲ್ಪೈಗುರಿ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಅಡಿಪಾಯವನ್ನು ಹಾಕಲಿದ್ದಾರೆ. ಬಿಜೆಪಿ ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೆಸರಿನ ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: Mann Ki Baat: ಮೋದಿ ಮನ್ ಕಿ ಬಾತ್​​ನಲ್ಲಿ ಅಟಲ್ ಸ್ಮರಣೆ; ಭಾರತದ ಸಾಧನೆಗಳ ಮೆಲುಕು ಹಾಕಿ 2022ಕ್ಕೆ ವಿದಾಯ ಹೇಳಿದ ಪ್ರಧಾನಿ

ಹಾಗೇ, ಕೋಲ್ಕತ್ತಾದಲ್ಲಿ ಎನ್‌ಜಿಸಿ ಸಭೆಯ ಅಧ್ಯಕ್ಷತೆಯನ್ನು ಮೋದಿ ವಹಿಸಲಿದ್ದಾರೆ. ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಲ್ಲದೆ ಹಲವಾರು ಕೇಂದ್ರ ಸಚಿವರು ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸೆಪ್ಟೆಂಬರ್ ಮಧ್ಯಭಾಗದಿಂದ 6.5 ಕಿಮೀ ವಿಸ್ತಾರದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ಸಂಚಾರವನ್ನು ನಡೆಸಲಾಗುತ್ತಿದೆ. ಮೆಟ್ರೋ ರೈಲ್ವೆ ಜನರಲ್ ಮ್ಯಾನೇಜರ್ ಅರುಣ್ ಅರೋರಾ ಅವರು ಡಿಸೆಂಬರ್ 24ರಂದು ವಿವಿಧ ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಕರ್ಯಗಳನ್ನು ಪರಿಶೀಲಿಸಿದ್ದರು. ಈ ಮಾರ್ಗದಲ್ಲಿ 6 ನಿಲ್ದಾಣಗಳಿವೆ. ಜೋಕಾ, ಠಾಕೂರ್​​ಪುರ್, ಸಖೇರ್​ಬಜಾರ್, ಬೆಹಲಾ ಚೌರಸ್ತಾ, ಬೆಹಲಾ ಬಜಾರ್ ಮತ್ತು ತಾರಾತಲಾ ಎಂಬ ನಿಲ್ದಾಣಗಳಿವೆ. ಭಾರತೀಯ ರೈಲ್ವೆಯು 6.5 ಕಿಮೀ ವ್ಯಾಪ್ತಿಯನ್ನು ಪೂರ್ಣಗೊಳಿಸಲು 2,477.25 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Thu, 29 December 22