ಭಾರತಕ್ಕೆ ಜವಾದ್​ ಚಂಡಮಾರುತ ಭೀತಿ: ಸಂಬಂಧಪಟ್ಟ ಅಧಿಕಾರಿಗಳೊಟ್ಟಿಗೆ ಉನ್ನತ ಸಭೆ ನಡೆಸಿದ ಪ್ರಧಾನಿ ಮೋದಿ

Cyclone Jawad: ಜವಾದ್ ಚಂಡಮಾರುತ ಡಿಸೆಂಬರ್ 4ರಂದು ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮೊದಲು ಒಡಿಶಾದ ಕರಾವಳಿ ತೀರ ತಲುಪಲಿದೆ.

ಭಾರತಕ್ಕೆ ಜವಾದ್​ ಚಂಡಮಾರುತ ಭೀತಿ: ಸಂಬಂಧಪಟ್ಟ ಅಧಿಕಾರಿಗಳೊಟ್ಟಿಗೆ ಉನ್ನತ ಸಭೆ ನಡೆಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on: Dec 02, 2021 | 3:18 PM

ದೆಹಲಿ: ಭಾರತಕ್ಕೆ ಡಿಸೆಂಬರ್​ 4ರಂದು ಜವಾದ್​ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿರುವ ಬೆನ್ನಲ್ಲೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗ ಪಿಟಿಐ ವರದಿ ಮಾಡಿದೆ. ಚಂಡಮಾರುತದ ಪ್ರಭಾವ, ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಇಂದು ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಭೆಯಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ.  

ಈ ಜವಾದ್ ಚಂಡಮಾರುತ ಡಿಸೆಂಬರ್ 4ರಂದು ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮೊದಲು ಒಡಿಶಾದ ಕರಾವಳಿ ತೀರ ತಲುಪಲಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ, ಚಂಡಮಾರುತದ ಪ್ರಭಾವ ಹೆಚ್ಚಾಗಿ ಆಗಲಿರುವ  13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಮಾಡಿದ್ದು, ಅಲ್ಲಿನ ಜನರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಹಾಗೇ, ರಕ್ಷಣಾ ಕಾರ್ಯಾಚರಣೆ ಆಗಮಿಸುವಂತೆ ಎನ್​ಡಿಆರ್​ಎಫ್​, ಒಡಿಆರ್​ಎಎಫ್​ಗಳನ್ನೂ ವಿನಂತಿಸಿದೆ. ಇದೀಗ ಮೋದಿಯವರು ಒಟ್ಟಾರೆ ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದನ್ನು ಹೊರತುಪಡಿಸಿ ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಾದ ಕೋಲ್ಕತ್ತ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳು, ಮಿಡ್ನಾಪುರದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳು, ಹೂಗ್ಲಿ, ನಾದಿಯಾ ಮತ್ತು ಝಾರ್​ಗ್ರಾಮ್​​ಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Junior Hockey World Cup 2021: ಬೆಲ್ಜಿಯಂ ಮಣಿಸಿ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟ ಭಾರತ! ಮುಂದಿನ ಎದುರಾಳಿ ಜರ್ಮನಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ