AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಪಿಎಂ ಮೋದಿ: ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ

ಅಮೆರಿಕ ಮೂಲದ ಸಲಹಾ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ನಡೆಸಿದ ಸಮೀಕ್ಷೆಯ ಪ್ರಕಾರ ಶೇಕಡಾ 76 ರೇಟಿಂಗ್​​ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಗ್ರ ಸ್ಥಾನದಲ್ಲಿದ್ದಾರೆ. ಮೋದಿಯವರ ನಂತರದ ಸ್ಥಾನಗಳಲ್ಲಿ ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮತ್ತು ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಇದ್ದಾರೆ.

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಪಿಎಂ ಮೋದಿ: ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 08, 2023 | 9:01 PM

Share

ದೆಹಲಿ ಡಿಸೆಂಬರ್ 08: ಅಮೆರಿಕ ಮೂಲದ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಮಾರ್ನಿಂಗ್ ಕನ್ಸಲ್ಟ್ (Morning Consult) ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಶೇಕಡಾ 76 ರೇಟಿಂಗ್​​ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಅಗ್ರ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿ ಅವರ ಆನಂತರದ ಸ್ಥಾನದಲ್ಲಿ ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ (66%), ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ (58%) ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ (49%) ಇದ್ದಾರೆ. ಅದೇ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು 40%  ರೇಟಿಂಗ್‌ನೊಂದಿಗೆ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ, ಇದು ಮಾರ್ಚ್‌ನಿಂದ ಅವರ ಅತ್ಯಧಿಕ ರೇಟಿಂಗ್ ಆಗಿದೆ. ನವೆಂಬರ್ 29ರಿಂದ ಡಿಸೆಂಬರ್ 5ರ ಅವಧಿಯಲ್ಲಿನ ಸಮೀಕ್ಷೆಯಾಗಿದೆ ಇದು. ಈ  ಬಾರಿಯ ಸಮೀಕ್ಷೆಯಲ್ಲಿ ಶೇ 18 ಜನರು ಮೋದಿಯವರನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ರಾಜಕೀಯ ಗುಪ್ತಚರ ಸಂಶೋಧನಾ ಸಂಸ್ಥೆಯು ಸಂಗ್ರಹಿಸಿದ ದತ್ತಾಂಶವು 22 ಜಾಗತಿಕ ನಾಯಕರ ಸಮೀಕ್ಷೆಯನ್ನು ಆಧರಿಸಿದೆ. ಸೆಪ್ಟೆಂಬರ್ 6-12, 2023 ರಿಂದ ಸಂಗ್ರಹಿಸಲಾದ ಮಾಹಿತಿಯ ಪ್ರಕಾರ, ಪಿಎಂ ಮೋದಿ ಅವರು ಪಟ್ಟಿಯಲ್ಲಿ ಅತ್ಯಂತ ಕಡಿಮೆ ಅಂದರೆ ಶೇ 18ಜನರು ಒಪ್ಪುವುದಿಲ್ಲ ಎಂಬ ರೇಟಿಂಗ್ ಅನ್ನು ಹೊಂದಿದ್ದಾರೆ.

ನಾಯಕರನ್ನು ಒಪ್ಪುವುದಿಲ್ಲ ಎಂಬ ಪಟ್ಟಿಯಲ್ಲಿರುವ ಅಗ್ರ 10 ನಾಯಕರಲ್ಲಿ, ಕೆನಡಾದ ಜಸ್ಟಿನ್ ಟ್ರುಡೊ ಅಗ್ರ ಸ್ಥಾನದಲ್ಲಿದ್ದಾರೆ. ಅವರು ಶೇಕಡಾ 58 ಮಂದಿ ಟ್ರುಡೊ ಅವರನ್ನು ಒಪ್ಪುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯ ನಾಯಕ

ಈ ಹಿಂದಿನ ರೇಟಿಂಗ್‌ಗಳಲ್ಲಿಯೂ ಮೋದಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು. ಆಗ ಅವರು ಜಾಗತಿಕ ನಾಯಕರ ಪಟ್ಟಿಯಲ್ಲಿ ಶೇ 76 ರಷ್ಟು ರೇಟಿಂಗ್​ನೊಂದಿಗೆ ಅಗ್ರಸ್ಥಾನ ಪಡೆದಿದ್ದರು. ಹಿಂದಿನ ರೇಟಿಂಗ್​​ನಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಶೇಕಡಾ 40, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಶೇಕಡಾ 37, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶೇಕಡಾ 27 ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಶೇಕಡಾ 24 ರ ಅನುಮೋದನೆಯನ್ನು ಪಡೆದಿದ್ದಾರೆ. ಈ ರೇಟಿಂಗ್‌ಗಳು ಸೆಪ್ಟೆಂಬರ್ 6 ರಿಂದ 12 ರವರೆಗೆ ಸಂಗ್ರಹಿಸಿದ ಡೇಟಾವನ್ನು ಆಧರಿಸಿವೆ ಎಂದು ಮಾರ್ನಿಂಗ್ ಕನ್ಸಲ್ಟ್ ಹೇಳಿದೆ. ಅಮೆರಿಕದಿಂದ, ಸರಾಸರಿ 45,000 ಮಂದಿ ಸಮೀಕ್ಷೆಯಲ್ಲಿ ಭಾಗಿಯಾದರೆ, ಇತರ ದೇಶಗಳಿಂದ, ಸರಿಸುಮಾರು 500 ರಿಂದ 5,000 ವರೆಗೆ ಜನ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು.

ಮಾರ್ನಿಂಗ್ ಕನ್ಸಲ್ಟ್ ಪ್ರಕಾರ ಇದು ರಾಜಕೀಯ ಚುನಾವಣೆಗಳು, ಚುನಾಯಿತ ಅಧಿಕಾರಿಗಳು ಮತ್ತು ಮತದಾನದ ಸಮಸ್ಯೆಗಳ ಕುರಿತು ರಿಯಲ್ ಟೈಂ ಮತದಾನದ ಡೇಟಾವನ್ನು ಒದಗಿಸುತ್ತದೆ. ಮಾರ್ನಿಂಗ್ ಕನ್ಸಲ್ಟ್ ಪ್ರತಿದಿನ 20,000 ಕ್ಕೂ ಹೆಚ್ಚು ಜಾಗತಿಕ ಸಂದರ್ಶನಗಳನ್ನು ನಡೆಸುತ್ತದೆ. ಎಲ್ಲಾ ಸಂದರ್ಶನಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Fri, 8 December 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ