ಮುಂಬೈ ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ ಮೆಟ್ರೋ ಲೈನ್ 3ರ BKC ಮತ್ತು ಆರೆ ವಿಭಾಗದ ನಡುವೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ, ವಿದ್ಯಾರ್ಥಿಗಳು ಮತ್ತು ಇತರರೊಂದಿಗೆ ಸಂವಹನ ನಡೆಸಿದರು. ಅವರು ಸಾಂತಾಕ್ರೂಜ್ ನಿಲ್ದಾಣದವರೆಗೆ ಮೆಟ್ರೋದಲ್ಲಿ ತೆರಳಿ ಮತ್ತೆ ಹಿಂತಿರುಗಿದರು.

ಮುಂಬೈ ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
Follow us
|

Updated on: Oct 05, 2024 | 10:15 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈ ಮೆಟ್ರೋ ಲೈನ್ 3ರ BKCಯಿಂದ ಆರೆ ಮಾರ್ಗವನ್ನು ಉದ್ಘಾಟಿಸಿದರು. ಸಾಂತಾಕ್ರೂಜ್ ನಿಲ್ದಾಣದವರೆಗೆ ಮೆಟ್ರೋದಲ್ಲಿ ಸಂಚರಿಸಿದ ಮೋದಿ ಮತ್ತೆ ಹಿಂತಿರುಗಿದರು. ಈ ವೇಳೆ ಮೆಟ್ರೋದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಜೊತೆ ಮಾತುಕತೆ ನಡೆಸಿದರು.

ಮೆಟ್ರೋದಲ್ಲಿ ಪ್ರಧಾನಿ ಮೋದಿ ಅವರು ವಿದ್ಯಾರ್ಥಿಗಳು, ಮಹಾರಾಷ್ಟ್ರ ಸರ್ಕಾರದ ಲಡ್ಕಿ ಬಹಿನ್ ಯೋಜನೆಯ ಫಲಾನುಭವಿಗಳು ಮತ್ತು ಅಂಡರ್​ಗ್ರೌಂಡ್ ಮಾರ್ಗವನ್ನು ನಿರ್ಮಿಸುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಮಹಾರಾಷ್ಟ್ರ ಸಿಎಂಒ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳು, ಮೆಟ್ರೋ ಕಾರ್ಮಿಕರು ಮತ್ತು ಇತರರೊಂದಿಗೆ ಸಂವಾದ ನಡೆಸುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ: ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೋದಿ ಇಂದು ಪ್ರಯಾಣಿಕರಿಗೆ ಪ್ರಯಾಣದ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಿದ MetroConnect3 ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ಅಂಡರ್​ಗ್ರೌಂಡ್ ಮೆಟ್ರೋ ಪ್ರಯಾಣದ ಅದ್ಭುತ ಫೋಟೋಗಳನ್ನು ಒಳಗೊಂಡಿರುವ ಕಾಫಿ ಟೇಬಲ್ ಪುಸ್ತಕವನ್ನು ಸಹ ಅನಾವರಣಗೊಳಿಸಿದರು.

ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್, ಕೇಂದ್ರ ಸಚಿವ ಮನೋಹರ್ ಲಾಲ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಸಹ ಇದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮೆಟ್ರೋ ಲೈನ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ, ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ

ಮುಂಬೈ ಮೆಟ್ರೋ ಲೈನ್ 3ರ ಮೊದಲ ಹಂತದಿಂದಾಗಿ 6.5 ಲಕ್ಷ ವಾಹನ ಟ್ರಿಪ್‌ಗಳನ್ನು ಕಡಿತಗೊಳಿಸಲಾಗುವುದು. ಇದರಿಂದ ರಸ್ತೆಗಳಲ್ಲಿನ ದಟ್ಟಣೆಯು ಶೇ.35ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಈ ಮಾರ್ಗದಿಂದಾಗಿ ಸುಮಾರು 3.54 ಲಕ್ಷ ಲೀಟರ್ ಇಂಧನ ಉಳಿತಾಯವಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ