AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Queen Elizabeth Death: ಅವರ ಸರಳತೆ, ಪ್ರೀತಿಯನ್ನು ಎಂದಿಗೂ ಮರೆಯುವುದಿಲ್ಲ; ಬ್ರಿಟನ್ ರಾಣಿ ಎಲಿಜಬೆತ್ ಭೇಟಿ ಮೆಲುಕು ಹಾಕಿದ ಪ್ರಧಾನಿ ಮೋದಿ

ರಾಣಿ ಎಲಿಜಬೆತ್ ಅವರಿಗೆ ಮಹಾತ್ಮ ಗಾಂಧಿ ನೀಡಿದ್ದ ಕರವಸ್ತ್ರವು ಕೈಯಿಂದ ನೇಯ್ದ ಹತ್ತಿಯ ಲೇಸ್ ಆಗಿದ್ದು ಅದರಲ್ಲಿ "ಜೈ ಹಿಂದ್" ಎಂದು ಬರೆಯಲಾಗಿತ್ತು.

Queen Elizabeth Death: ಅವರ ಸರಳತೆ, ಪ್ರೀತಿಯನ್ನು ಎಂದಿಗೂ ಮರೆಯುವುದಿಲ್ಲ; ಬ್ರಿಟನ್ ರಾಣಿ ಎಲಿಜಬೆತ್ ಭೇಟಿ ಮೆಲುಕು ಹಾಕಿದ ಪ್ರಧಾನಿ ಮೋದಿ
ಬ್ರಿಟನ್ ರಾಣಿ ಎಲಿಜಬೆತ್ ಅವರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ
TV9 Web
| Updated By: ಸುಷ್ಮಾ ಚಕ್ರೆ|

Updated on:Sep 09, 2022 | 8:50 AM

Share

ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II (Queen Elizabeth) ನಿನ್ನೆ (ಗುರುವಾರ) ರಾತ್ರಿ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ವೈದ್ಯಕೀಯ ನಿಗಾದಡಿ ಇದ್ದ 96 ವರ್ಷದ ರಾಣಿ ಎಲಿಜಬೆತ್- II ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

“2015 ಮತ್ತು 2018ರಲ್ಲಿ ನಾನು ಇಂಗ್ಲೆಂಡ್​ಗೆ ಭೇಟಿ ನೀಡಿದ್ದಾಗ ಬ್ರಿಟನ್ ರಾಣಿ ಎಲಿಜಬೆತ್-II ಅವರನ್ನು ಭೇಟಿಯಾಗಿದ್ದೆ. ಅವರ ಪ್ರೀತಿ, ಉದಾರತೆ, ದಯೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಅವರನ್ನು ಭೇಟಿಯಾಗಿದ್ದಾಗ ಒಂದು ಸಭೆಯಲ್ಲಿ ರಾಣಿ ಎಲಿಜಬೆತ್ ಮಹಾತ್ಮ ಗಾಂಧಿಯವರು ತಮ್ಮ ಮದುವೆಗೆ ಉಡುಗೊರೆಯಾಗಿ ನೀಡಿದ ಕರವಸ್ತ್ರವನ್ನು ನನಗೆ ತೋರಿಸಿದ್ದರು. ಅವರ ಸರಳತೆ ಎಲ್ಲರಿಗೂ ಮಾದರಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಮಹಾರಾಣಿ ಎಲಿಜಬೆತ್ ಕಣ್ಮರೆಯಾಗಿರಬಹುದು ಆದರೆ ಅವರ ದಾಖಲೆ, ಮೈಲಿಗಲ್ಲಿಗಳು ಜನರ ಮನಸ್ಸಿನಲ್ಲಿ ಶಾಶ್ವತವಾಗಿರಲಿವೆ

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಗ್ಲೆಂಡ್​​ಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಣಿ 2ನೇ ಎಲಿಜಬೆತ್ ಅವರನ್ನು ಭೇಟಿಯಾಗಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು. ರಾಣಿ ಎಲಿಜಬೆತ್ ಅವರಿಗೆ ಮಹಾತ್ಮ ಗಾಂಧಿ ನೀಡಿದ್ದ ಕರವಸ್ತ್ರವು ಕೈಯಿಂದ ನೇಯ್ದ ಹತ್ತಿಯ ಲೇಸ್ ಆಗಿದ್ದು ಅದರಲ್ಲಿ “ಜೈ ಹಿಂದ್” ಎಂದು ಬರೆಯಲಾಗಿತ್ತು. ಇದನ್ನು ಮಹಾತ್ಮಾ ಗಾಂಧಿಯವರು ನವೆಂಬರ್ 1947ರಲ್ಲಿ ಪ್ರಿನ್ಸ್ ಫಿಲಿಪ್ ಅವರೊಂದಿಗೆ ರಾಣಿ ಎಲಿಜಬೆತ್ ಅವರ ವಿವಾಹದ ಉಡುಗೊರೆಯಾಗಿ ಕಳುಹಿಸಿದ್ದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಣಿ 2ನೇ ಎಲಿಜಬೆತ್ ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್‌ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು. 2ನೇ ಎಲಿಜಬೆತ್ 1953ರಿಂದ ಬ್ರಿಟನ್ ರಾಣಿಯಾಗಿ ಸುದೀರ್ಘ 70 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಮೂಲಕ ಅತ್ಯಂತ ಸುದೀರ್ಘ ಅವಧಿಯವರೆಗೆ ದೇಶವನ್ನು ಆಳಿದವರು ಎಂಬ ವಿಶ್ವ ದಾಖಲೆಯನ್ನು ಕೂಡ ರಾಣಿ ಎಲಿಜಬೆತ್ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:50 am, Fri, 9 September 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!