AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಡೆನ್ಮಾರ್ಕ್​​ನಲ್ಲಿ ಡೋಲು ಬಾರಿಸಿದ ಪ್ರಧಾನಿ ನರೇಂದ್ರ ಮೋದಿ; ಭಾರತೀಯರಿಂದ ಭರ್ಜರಿ ಸ್ವಾಗತ

ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

Video: ಡೆನ್ಮಾರ್ಕ್​​ನಲ್ಲಿ ಡೋಲು ಬಾರಿಸಿದ ಪ್ರಧಾನಿ ನರೇಂದ್ರ ಮೋದಿ; ಭಾರತೀಯರಿಂದ ಭರ್ಜರಿ ಸ್ವಾಗತ
ಡೋಲು ಬಾರಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on:May 04, 2022 | 10:59 AM

Share

ಡೆನ್ಮಾರ್ಕ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಡೋಲು ಬಾರಿಸುವ ಮೂಲಕ ಗಮನಸೆಳೆದಿದ್ದಾರೆ.  ಮೂರು ದಿನಗಳ ಯುರೋಪ್​ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನಿನ್ನೆ ಜರ್ಮನಿಯಿಂದ ಡೆನ್ಮಾರ್ಕ್​ಗೆ ತೆರಳಿದ್ದಾರೆ. ಅಲ್ಲಿ ಅವರನ್ನು ಭಾರತೀಯ ಮೂಲದವರು ಅದ್ದೂರಿಯಾಗಿ ಸ್ವಾಗತಿಸಿದರು. ಡೋಲು, ಡ್ರಮ್​, ತಾಳಗಳ ವಾದನ ಇತ್ತು.  ಈ ವೇಳೆ ಬೂದು ಬಣ್ಣದ ಉಡುಪು ತೊಟ್ಟಿದ್ದ ಪ್ರಧಾನಿ ಮೋದಿ ತಾವೂ ಕೂಡ ಒಂದು ಕೈಯಲ್ಲಿ ಡೋಲು ಬಾರಿಸಲು ಪ್ರಯತ್ನಿಸಿದ್ದಾರೆ.  ಅದರ ವಿಡಿಯೋಗಳು ವೈರಲ್ ಆಗಿವೆ.

ಪ್ರಧಾನಿ ನರೇಂದ್ರ ಮೋದಿ ಡೆನ್ಮಾರ್ಕ್ ಪ್ರಧಾನಿ  ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ರಾಣಿ ಮಾರ್ಗರೆಥೆ II ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ  ಡೆನ್ಮಾರ್ಕ್​​ನಲ್ಲಿರುವ ಭಾರತೀಯರೊಟ್ಟಿಗೆ ಕೋಪನ್​ಹ್ಯಾಗನ್​​ನಲ್ಲಿ ಸಂವಾದ ನಡೆಸಿದ್ದಾರೆ. ಹಾಗೇ, ಇಲ್ಲಿರುವ ನೀವೆಲ್ಲ ರಾಷ್ಟ್ರದೂತರಂತೆ (ಭಾರತವನ್ನು ಪ್ರತಿನಿಧಿಸುವಂತೆ) ಕೆಲಸ ಮಾಡಬೇಕ ಎಂದು ಭಾರತೀಯ ಮೂಲದವರಿಗೆ ಹೇಳಿದರು. ಡೆನ್ಮಾರ್ಕ್​​ನಲ್ಲಿರುವ ನಿಮ್ಮ ಸ್ನೇಹಿತರಿಗೆ ಭಾರತಕ್ಕೆ ಭೇಟಿ ಕೊಡುವಂತೆ ಹೇಳಿ ಎಂದರು.

ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ. ಎಷ್ಟು ಅಗತ್ಯವಿದೆಯೋ ಅಷ್ಟನ್ನೇ ಬಳಸುವ ಕ್ರಮವನ್ನು ರೂಢಿಸಿಕೊಳ್ಳಬೇಕು. ಜೇಬು ದೊಡ್ಡದಿದೆ ಎಂದು ಅನಗತ್ಯವಾಗಿ ತುಂಬಿಸಿಕೊಳ್ಳಬಾರದು ಎಂದು ಹೇಳಿದರು. ಈ ಮೂಲಕ ಏನನ್ನೂ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.  (Source)

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:58 am, Wed, 4 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ