ಜಪಾನ್‌ನಲ್ಲಿ ಪ್ರಧಾನಿ ಮೋದಿ, ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದ್ವಿಪಕ್ಷೀಯ ಸಭೆ ಸಾಧ್ಯತೆ
ಪಿಟಿಐ ವರದಿ ಪ್ರಕಾರ ಶನಿವಾರ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಝೆಲೆನ್ಸ್ಕಿ ನಡುವೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದು ಅದರ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭಿಸಿಲ್ಲ. ಪ್ರಸ್ತಾಪವನ್ನು ಅಂತಿಮಗೊಳಿಸಲು ಎರಡೂ ಕಡೆಯವರು ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ವರದಿ ಹೇಳಿದೆ.
ದೆಹಲಿ: ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ (G7 summit) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉಕ್ರೇನಿಯಾ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelenskyy) ನಡುವಿನ ದ್ವಿಪಕ್ಷೀಯ ಸಭೆಯ ಸಾಧ್ಯತೆಯನ್ನು ಭಾರತ ಮತ್ತು ಉಕ್ರೇನ್‌ನ ಹಿರಿಯ ರಾಜತಾಂತ್ರಿಕರು ಎದುರು ನೋಡುತ್ತಿದ್ದಾರೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದು ವೇಳೆ ಸಭೆ ನಡೆದರೆ, ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಲಿದೆ. ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಜಿ7 ಶೃಂಗಸಭೆಯಲ್ಲಿ ಮೂರು ಸೆಷನ್‌ಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇ 19ರಂದು ಜಪಾನ್ ತಲುಪಿದ್ದಾರೆ. ಅಲ್ಲಿಂದ ಅವರು ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಹೋಗಲಿದ್ದಾರೆ.
ಪಿಟಿಐ ವರದಿ ಪ್ರಕಾರ ಶನಿವಾರ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಝೆಲೆನ್ಸ್ಕಿ ನಡುವೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದು ಅದರ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭಿಸಿಲ್ಲ. ಪ್ರಸ್ತಾಪವನ್ನು ಅಂತಿಮಗೊಳಿಸಲು ಎರಡೂ ಕಡೆಯವರು ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ವರದಿ ಹೇಳಿದೆ.
ಪ್ರಬಲ ಗುಂಪಿನ ಪ್ರಸ್ತುತ ಅಧ್ಯಕ್ಷ ಜಪಾನ್‌ನ ಆಹ್ವಾನದ ಮೇರಿಗೆ ಉಕ್ರೇನಿಯನ್ ಅಧ್ಯಕ್ಷರು ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಉಕ್ರೇನ್‌ನ ಮೊದಲ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಕಳೆದ ತಿಂಗಳು ಭಾರತಕ್ಕೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಸಂದರ್ಭದಲ್ಲಿ ಮಾತನಾಡಿ ಝಪರೋವಾ ಅವರು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರಿಗೆ ಪತ್ರವನ್ನು ಹಸ್ತಾಂತರಿಸಿದರು. ಅಧ್ಯಕ್ಷ ಝೆಲೆನ್ಸ್ಕಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಉಕ್ರೇನ್ ಸಂಘರ್ಷ ಪ್ರಾರಂಭವಾದಾಗಿನಿಂದ, ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಹಲವಾರು ಬಾರಿ ಮಾತನಾಡಿದ್ದಾರೆ.
ಇದನ್ನೂ ಓದಿ:Japan G7 Summit: ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಕಳೆದ ವರ್ಷ ಅಕ್ಟೋಬರ್ 4 ರಂದು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ, ಪ್ರಧಾನಿ ಮೋದಿ “ಯಾವುದೇ ಮಿಲಿಟರಿ ಪರಿಹಾರ” ಸಾಧ್ಯವಿಲ್ಲ ಮತ್ತು ಯಾವುದೇ ಶಾಂತಿ ಪ್ರಯತ್ನಗಳಿಗೆ ಕೊಡುಗೆ ನೀಡಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಭಾರತ ಪ್ರತಿಪಾದಿಸುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ