Modi in Kedarnath ಕೇದಾರನಾಥದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಮಾಡಿದ ನರೇಂದ್ರ ಮೋದಿ

TV9 Digital Desk

| Edited By: Rashmi Kallakatta

Updated on:Nov 05, 2021 | 10:37 AM

ಮೈಸೂರಿನ ಖ್ಯಾತ ಶಿಲ್ಪಿ ನಿರ್ಮಾಣ ಮಾಡಿದ್ದ ಪ್ರತಿಮೆ ಇದಾಗಿದೆ. ಪ್ರತಿಮೆ ಅನಾವರಣಕ್ಕೂ ಮುನ್ನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ ಗರ್ಭಗುಡಿಯಲ್ಲಿ ರುದ್ರಾಭಿಷೇಕ ಮಾಡಿದ್ದಾರೆ.

Modi in Kedarnath ಕೇದಾರನಾಥದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಮಾಡಿದ ನರೇಂದ್ರ ಮೋದಿ
ನರೇಂದ್ರ ಮೋದಿ

Follow us on

ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ದೇವಾಲಯದ ಆವರಣದಲ್ಲಿ 12 ಅಡಿ ಎತ್ತರದ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದರು. ಮೈಸೂರಿನ ಖ್ಯಾತ ಶಿಲ್ಪಿ ನಿರ್ಮಾಣ ಮಾಡಿದ್ದ ಪ್ರತಿಮೆ ಇದಾಗಿದೆ. ಪ್ರತಿಮೆ ಅನಾವರಣಕ್ಕೂ ಮುನ್ನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ ಗರ್ಭಗುಡಿಯಲ್ಲಿ ರುದ್ರಾಭಿಷೇಕ ಮಾಡಿದ್ದಾರೆ.

2013 ರ ಉತ್ತರಾಖಂಡ ಪ್ರವಾಹದಲ್ಲಿ ನಾಶವಾಗಿದ್ದ ಆದಿ ಶಂಕರಾಚಾರ್ಯರ ಸಮಾಧಿಯನ್ನು ನಂತರ ಪುನರ್ನಿರ್ಮಿಸಲಾಯಿತು.

ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅವರು ಪುರಾತನ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆರತಿ ಮಾಡಿದರು. ಭಗವಾನ್ ಶಿವನಿಗೆ ನಮನ ಸಲ್ಲಿಸಿದ ಅವರು ಪ್ರಾರ್ಥನೆ ಸಲ್ಲಿಸಿದ ನಂತರ ಕೇದಾರನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದರು.

ಉತ್ತರಾಖಂಡದ ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ), ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳಾದ ಸುಬೋಧ್ ಉನಿಯಾಲ್ ಮತ್ತು ಗಣೇಶ್ ಜೋಶಿ, ಉತ್ತರಾಖಂಡ ವಿಧಾನಸಭೆ ಸ್ಪೀಕರ್ ಪ್ರೇಮಚಂದ್ ಅಗರ್ವಾಲ್ ಅವರು ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು.

“ನಾವೆಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತೇವೆ. ಪ್ರಧಾನಿ ಮೋದಿ ಬೆಳಿಗ್ಗೆ ಇಲ್ಲಿಗೆ ತಲುಪುತ್ತಾರೆ. ಅವರು ಮಹಾ ರುದ್ರ ಅಭಿಷೇಕವನ್ನು ಮಾಡುತ್ತಾರೆ ಮತ್ತು ರಾಷ್ಟ್ರದ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಾರೆ. ಅವರು ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸುತ್ತಾರೆ. ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿದೆ ಎಂದು ಕೇದಾರನಾಥ ದೇವಸ್ಥಾನದ ಅರ್ಚಕ ಬಾಗೀಶ್ ಲಿಂಗ್ ಭೇಟಿಯ ಮೊದಲು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.

130 ಕೋಟಿ ಮೌಲ್ಯದ 5 ಯೋಜನೆ ಉದ್ಘಾಟಿಸಿದ ಮೋದಿ ಸರಸ್ವತಿ ರಿಟೈನಿಂಗ್ ವಾಲ್ ಆಸ್ಥಾಪಥ್ ಮತ್ತು ಘಾಟ್‌ಗಳು, ಮಂದಾಕಿನಿ ರಿಟೈನಿಂಗ್ ವಾಲ್ ಆಸ್ಥಾಪಥ್, ತೀರ್ಥ ಪುರೋಹಿತ ಮನೆಗಳು ಮತ್ತು ಮಂದಾಕಿನಿ ನದಿಯ ಗರುಡ್ ಚಟ್ಟಿ ಸೇತುವೆಗಳು ಮೊದಲಾದ 130 ಕೋಟಿ ಮೌಲ್ಯದ 5 ಯೋಜನೆಯನ್ನು   ಪ್ರಧಾನಿ ಮೋದಿಯವರು ಉದ್ಘಾಟಿಸಿದ್ದಾರೆ.

ಮಂದಾಕಿನಿ ನದಿಯ ದಂಡೆಯ ಮೇಲಿರುವ ಕೇದಾರನಾಥ ದೇವಾಲಯವು ಯಮುನೋತ್ರಿ, ಗಂಗೋತ್ರಿ ಮತ್ತು ಬದರಿನಾಥಗಳನ್ನು ಒಳಗೊಂಡಿರುವ ನಾಲ್ಕು ಪುರಾತನ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: LKG, UKG ಆರಂಭಕ್ಕೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್; ನವೆಂಬರ್ 8ರಿಂದ ಭೌತಿಕ ತರಗತಿ ಶುರು

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada