AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಜರಾತ್​​ನಲ್ಲಿ 108 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿ; ದೇಶದ 4 ದಿಕ್ಕುಗಳಲ್ಲಿ ಇರಲಿದ್ದಾನೆ ಹನುಮ

ಆಂಜನೇಯನೆಂದರೆ ಶಕ್ತಿ, ಧೈರ್ಯ,  ಸಂಯಮದ ಪ್ರತೀಕ. ಆ ಪವನಪುತ್ರನ ಕೃಪೆಯಿಂದ ಪ್ರತಿಯೊಬ್ಬರೂ ಶಕ್ತಿ, ಧೈರ್ಯ, ಅರಿವು, ಸದ್ಬುದ್ದಿ ಪಡೆಯುವಂತಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Video: ಗುಜರಾತ್​​ನಲ್ಲಿ 108 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿ; ದೇಶದ 4 ದಿಕ್ಕುಗಳಲ್ಲಿ ಇರಲಿದ್ದಾನೆ ಹನುಮ
108 ಅಡಿ ಎತ್ತರದ ಹನುಮಂತನ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Apr 16, 2022 | 12:31 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್​ನ ಮೋರ್ಬಿ ಜಿಲ್ಲೆಯಲ್ಲಿ 108 ಅಡಿ ಎತ್ತರದ ಆಂಜನೇಯನ ಮೂರ್ತಿಯನ್ನು ವರ್ಚ್ಯುವಲ್​ ಆಗಿ ಉದ್ಘಾಟನೆ ಮಾಡಿದ್ದಾರೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ಈ ಪ್ರತಿಮೆ ಅನಾವರಣಗೊಂಡಿದ್ದು, ಅದಕ್ಕೂ ಪೂರ್ವ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಇಂದು ಹನುಮಾನ್ ಜಯಂತಿ. ಬೆಳಗ್ಗೆ 11ಗಂಟೆಗೆ ಹನುಮಾನ್​ ವಿಗ್ರಹವನ್ನು ಲೋಕಾರ್ಪಣೆಗೊಳಿಸುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಆಂಜನೇಯನ ವಿಗ್ರಹವನ್ನು ಅನಾವರಣಗೊಳಿಸುತ್ತಿರುವುದು ನನಗೆ ಸಂದ ಗೌರವ ಎಂದು ಭಾವಿಸುತ್ತೇನೆ ಎಂದು ಹೇಳಿದ್ದರು. ನಂತರ ಉದ್ಘಾಟನಾ ಸಮಾರಂಭದ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.

ಹನುಮಂತನ ಈ ವಿಗ್ರಹವನ್ನು ಗುಜರಾತ್​​ನ ಪಶ್ಚಿಮದ ಮೋರ್ಬಿ ಜಿಲ್ಲೆಯಲ್ಲಿನ ಪರಮಪೂಜ್ಯ ಬಾಪು ಕೇಶವಾನಂದ ಆಶ್ರಮದಲ್ಲಿ ನಿರ್ಮಿಸಲಾಗಿದೆ. ದೇಶದ ನಾಲ್ಕು ದಿಕ್ಕುಗಳಿಗೆ ನಾಲ್ಕು ಹನುಮಂತನ ಪ್ರತಿಮೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಅದಕ್ಕೆ ಹನುಮಾನ್​ ಜಿ ಚಾರ್​ ಧಾಮ್ ಎಂದು ಹೆಸರಿಸಲಾಗಿದೆ. ಈ ನಾಲ್ಕು ಹನುಮಾನ್​ ಪ್ರತಿಮೆಗಳಲ್ಲಿ ಗುಜರಾತ್​​ನ ಮೋರ್ಬಿಯಲ್ಲಿ ಅನಾವರಣಗೊಂಡಿದ್ದು ಎರಡನೇಯದು.  ಅಂದಹಾಗೇ, ಮೊದಲನೇಯದ್ದು ಶಿಮ್ಲಾದಲ್ಲಿ (ಉತ್ತರ) 2010ರಲ್ಲಿ ನಿರ್ಮಾಣಗೊಂಡಿದೆ.  ಇನ್ನು ದಕ್ಷಿಣ ದಿಕ್ಕಿನಲ್ಲಿ ರಾಮೇಶ್ವರಂನಲ್ಲಿ ಒಂದು ಹನುಮಾನ್​ ವಿಗ್ರಹ ನಿರ್ಮಾಣಗೊಳ್ಳಲಿದ್ದು, ಅದರ ಕಾರ್ಯವೂ ಶುರುವಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಹಾಗೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನರಿಗೆ ಹನುಮಾನ್​ ಜಯಂತಿ ಶುಭಾಶಯ ಕೋರಿದ್ದಾರೆ. ಆಂಜನೇಯನ ಜಯಂತಿಯಾದ ಇಂದು ದೇಶದ ಎಲ್ಲರಿಗೂ ಶುಭಾಶಯಗಳು. ಆಂಜನೇಯನೆಂದರೆ ಶಕ್ತಿ, ಧೈರ್ಯ,  ಸಂಯಮದ ಪ್ರತೀಕ. ಆ ಪವನಪುತ್ರನ ಕೃಪೆಯಿಂದ ಪ್ರತಿಯೊಬ್ಬರೂ ಶಕ್ತಿ, ಧೈರ್ಯ, ಅರಿವು, ಸದ್ಬುದ್ದಿ ಪಡೆಯುವಂತಾಗಲಿ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿ ಹಲವು ಗಣ್ಯರು ಇಂದು ಹನುಮಾನ್​ ಜಯಂತಿ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: RCB Playing XI: ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ: ಆ ಪ್ಲೇಯರ್ ಆಡುವುದು ಅನುಮಾನ

Published On - 12:30 pm, Sat, 16 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!