AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ರತ್ನ ಅಡ್ವಾಣಿ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಿರಿಯ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಗುರುಗಳಲ್ಲಿ ಒಬ್ಬರಾಗಿರುವ ಅಡ್ವಾಣಿ ಇಂದು 98ನೇ ಜನ್ಮದಿವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೆಹಲಿಯಲ್ಲಿರುವ ಮಾಜಿ ಉಪಪ್ರಧಾನಿ ಅಡ್ವಾಣಿಯವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಭಾರತ ರತ್ನ ಅಡ್ವಾಣಿ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
Pm Modi With Advani
ಸುಷ್ಮಾ ಚಕ್ರೆ
|

Updated on: Nov 08, 2025 | 8:44 PM

Share

ನವದೆಹಲಿ, ನವೆಂಬರ್ 8: ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ (LK Advani Birthday) ಅವರಿಗೆ 98 ವರ್ಷ ತುಂಬಿದೆ. ಇಂದು ಅವರ ಜನ್ಮದಿನ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಎಲ್​.ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ಅತ್ಯುನ್ನತ ದೃಷ್ಟಿಕೋನದ ರಾಜನೀತಿಜ್ಞ” ಎಂದು ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಕುರಿತು ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಮಜನ್ಮಭೂಮಿ ಚಳವಳಿಯ ಶಿಲ್ಪಿ ಎಲ್.ಕೆ. ಅಡ್ವಾಣಿ ಇಂದು (ನವೆಂಬರ್ 8) 98 ವರ್ಷಗಳನ್ನು ಪೂರೈಸಿದ್ದಾರೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ, ಹೂಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಆರ್​ಜೆಡಿ ಮಕ್ಕಳಿಗೆ ಪಿಸ್ತೂಲು ನೀಡಿದರೆ ನಾವು ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದ್ದೇವೆ; ಪ್ರಧಾನಿ ಮೋದಿ ವಾಗ್ದಾಳಿ

ಫೆಬ್ರವರಿ 3, 2024ರಂದು ಎಲ್​.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ’ ನೀಡಲಾಯಿತು. ಬಿಜೆಪಿಯ ಮಾರ್ಗದರ್ಶಕ ಮಂಡಲದ ಸದಸ್ಯರಾದ ಅಡ್ವಾಣಿ 1980 ಮತ್ತು 1990ರ ನಡುವೆ ಬಿಜೆಪಿಯ ಚುನಾವಣಾ ಮತ್ತು ರಾಜಕೀಯ ಉನ್ನತಿಗೆ ಮುಖ್ಯ ಕಾರಣರಾಗಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೊತೆ ಎಲ್​ಕೆ. ಅಡ್ವಾಣಿ ಬಹಳ ಆತ್ಮೀಯ ಸಂಬಂಧ ಹೊಂದಿದ್ದರು. ಇವರಿಬ್ಬರೂ ದೇಶದಲ್ಲಿ ಬಿಜೆಪಿ ನೆಲೆ ನಿಲ್ಲಲು ಮುಖ್ಯ ಕಾರಣೀಭೂತರು.

“ಎಲ್.ಕೆ. ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅತ್ಯುನ್ನತ ದೃಷ್ಟಿಕೋನ ಮತ್ತು ಬುದ್ಧಿಶಕ್ತಿಯಿರುವ ರಾಜಕಾರಣಿ ಅಡ್ವಾಣಿ ಅವರ ಜೀವನವು ಭಾರತದ ಪ್ರಗತಿಯನ್ನು ಬಲಪಡಿಸಲು ಸಮರ್ಪಿತವಾಗಿದೆ. ಅವರು ಯಾವಾಗಲೂ ನಿಸ್ವಾರ್ಥ ಕರ್ತವ್ಯ ಮತ್ತು ದೃಢ ತತ್ವಗಳ ಮನೋಭಾವವನ್ನು ಸಾಕಾರಗೊಳಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕ್ಷೇತ್ರದ ಮೇಲೆ ಅಳಿಸಲಾಗದ ಗುರುತು ಮೂಡಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ” ಎಂದು ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಬರೆದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ 1990ರ ದಶಕದಲ್ಲಿ ಪಾಲಂಪುರದಲ್ಲಿ (ಹಿಮಾಚಲ ಪ್ರದೇಶ) ನಡೆದ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಎಲ್​ಕೆ ಅಡ್ವಾಣಿ ಅವರು ರಾಮ ಜನ್ಮಭೂಮಿ ಚಳವಳಿಗೆ ನಾಂದಿ ಹಾಡಿದರು. ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿಯನ್ನು ಹಿಂದೂಗಳಿಗೆ ಹಸ್ತಾಂತರಿಸುವ ಬೇಡಿಕೆಯನ್ನು ನಿರ್ಣಯದಲ್ಲಿ ಬಿಜೆಪಿ ಅನುಮೋದಿಸಿತ್ತು.

ಇದನ್ನೂ ಓದಿ: ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ

1984ರಲ್ಲಿ ಎರಡು ಸ್ಥಾನಗಳಿದ್ದ ಬಿಜೆಪಿ 1989ರ ಸಾರ್ವತ್ರಿಕ ಚುನಾವಣೆಯಲ್ಲಿ 85, 1991ರಲ್ಲಿ 120, 1996ರಲ್ಲಿ 161 ಮತ್ತು 1999ರಲ್ಲಿ 182 ಲೋಕಸಭಾ ಸ್ಥಾನಗಳನ್ನು ಗಳಿಸಿತು. ಇದಕ್ಕೆ ಕಾರಣರಾದವರಲ್ಲಿ ಎಲ್​ಕೆ ಅಡ್ವಾಣಿ ಕೂಡ ಪ್ರಮುಖರು. 1980ರಲ್ಲಿ ಭಾರತೀಯ ಜನತಾ ಪಕ್ಷ ರಚನೆಯಾದಾಗಿನಿಂದ ಅಡ್ವಾಣಿ ಬಿಜೆಪಿಯ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.

ಸಂಸದರಾಗಿ 3 ದಶಕಗಳ ಸುದೀರ್ಘ ಅಧಿಕಾರ ಪಡೆದಿದ್ದ ಅಡ್ವಾಣಿ ಮೊದಲು ಗೃಹ ಸಚಿವರಾದರು. ನಂತರ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ (1999-2004) ಉಪ ಪ್ರಧಾನಿಯಾದರು. 2019ರ ಲೋಕಸಭಾ ಚುನಾವಣೆಯಿಂದ ಹೊರಗುಳಿಯುವ ಮೂಲಕ ಅಡ್ವಾಣಿ 2019ರಲ್ಲಿ ರಾಜಕೀಯದಿಂದ ದೂರ ಉಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?