AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಗುರು ಎಲ್​ಕೆ ಅಡ್ವಾಣಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರನ್ನು ಇಂದು ಭೇಟಿಯಾಗಿ 25 ವರ್ಷಗಳನ್ನು ಪೂರೈಸಿದರು. ಪ್ರಧಾನಿ ಮೋದಿ ಅವರು ಎಲ್.ಕೆ. ಅಡ್ವಾಣಿ ಅವರೊಂದಿಗೆ ಕೈ ಹಿಡಿದು ಮಾತನಾಡುತ್ತಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ. ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಇದಕ್ಕೂ ಮುನ್ನ, ಪ್ರಧಾನಿ ಮೋದಿ ರಾಜ್ಯ ಮತ್ತು ದೇಶದ 25 ವರ್ಷಗಳ ನಾಯಕತ್ವವನ್ನು ಗುರುತಿಸಲು ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು.

ರಾಜಕೀಯ ಗುರು ಎಲ್​ಕೆ ಅಡ್ವಾಣಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಎಲ್​ಕೆ ಅಡ್ವಾಣಿಯನ್ನು ಭೇಟಿಯಾದ ಪ್ರಧಾನಿ ಮೋದಿImage Credit source: PTI
ಸುಷ್ಮಾ ಚಕ್ರೆ
|

Updated on: Oct 07, 2026 | 8:38 PM

Share

ನವದೆಹಲಿ, ಅಕ್ಟೋಬರ್ 7: ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಮುಖಂಡ ಎಲ್‌.ಕೆ. ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. 2001ರ ಅಕ್ಟೋಬರ್ 7ರಿಂದ ಪ್ರಧಾನಿ ಮೋದಿ ಅವರು ಸತತವಾಗಿ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲು 3 ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ನಂತರ ಸತತ 3 ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿ ಭಾರತದ ಪ್ರಧಾನಮಂತ್ರಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಎಲ್‌ಕೆ ಅಡ್ವಾಣಿ ಅವರ ಭೇಟಿಯ ಕುರಿತು ‘ಎಕ್ಸ್’ (X) ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆಶೀರ್ವಾದ ಪಡೆದೆ. ಅವರ ದಶಕಗಳ ಸಾರ್ವಜನಿಕ ಸೇವೆ ಮತ್ತು ನಮ್ಮ ರಾಷ್ಟ್ರೀಯ ಜೀವನಕ್ಕೆ ಅವರು ನೀಡಿದ ಕೊಡುಗೆಯು ಶಾಶ್ವತ ಛಾಪನ್ನು ಮೂಡಿಸಿದೆ. ಭಾರತದ ಪ್ರಗತಿಯನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರತದ ಘನತೆ ಹೆಚ್ಚಿಸಿದ ಮುತ್ಸದ್ದಿ: ಮೋದಿಯವರ 25 ವರ್ಷಗಳ ಆಡಳಿತ ಮೈಲಿಗಲ್ಲು ಕೊಂಡಾಡಿದ ಜಾಗತಿಕ ಗಣ್ಯರು

ಇದಕ್ಕೂ ಮುನ್ನ, ಸರ್ಕಾರದ ಮುಖ್ಯಸ್ಥರಾಗಿ ಕಾಲು ಶತಮಾನ ಪೂರೈಸಿದ ನೆನಪಿಗಾಗಿ ಆಯೋಜಿಸಲಾಗಿದ್ದ ‘ವಿಕಸಿತ ಭಾರತ ಸಂಕಲ್ಪ ಸಭೆ’ಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ವಿ ವಿಲ್ ಡೂ ಇಟ್” (ನಾವು ಇದನ್ನು ಸಾಧಿಸಲಿದ್ದೇವೆ) ಎಂಬ ನೂತನ ಘೋಷಣೆಯನ್ನು ನೀಡಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರಲ್ಲದೆ, ಚುನಾವಣೆಯ ಸಮಯದಲ್ಲಿ ಕಂಡುಬರುವ ಜಾತಿಯಾಧಾರಿತ ವಿಭಜನೆಗಳು ದೇಶದ ಹಾದಿಯಲ್ಲಿ ದೊಡ್ಡ ಸವಾಲಾಗಿವೆ ಎಂದು ಎಚ್ಚರಿಸಿದರು.

ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’:

ಪ್ರಧಾನಿ ಮೋದಿಯವರ 25 ವರ್ಷಗಳ ಆಡಳಿತವನ್ನು ಸಂಭ್ರಮಿಸಲು ಬಿಜೆಪಿ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಂಡಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ವಿಕಸಿತ ಭಾರತ ಸಂಕಲ್ಪ ಸಭೆ’ ಮತ್ತು ದಿಶಾ ಪಂಜಿನ ಮೆರವಣಿಗೆಗಳನ್ನು ಆಯೋಜಿಸಲಾಗಿತ್ತು. ‘ವಿಕಸಿತ ಭಾರತ 2047’ ಗುರಿ ತಲುಪಲು ಈ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು