ಎಲ್​.ಕೆ ಅಡ್ವಾಣಿ ಭೇಟಿ ಮಾಡಿ 97ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

97ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತೀಯ ರಾಜಕಾರಣಕ್ಕೆ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ತಮ್ಮ ರಾಜಕೀಯ ಗುರು ಅಡ್ವಾಣಿಗೆ ಹೂವಿನ ಬೊಕ್ಕೆ ನೀಡುವ ಮೂಲಕ ಮೋದಿ ಶುಭ ಕೋರಿದ್ದಾರೆ.

ಎಲ್​.ಕೆ ಅಡ್ವಾಣಿ ಭೇಟಿ ಮಾಡಿ 97ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ಎಲ್​.ಕೆ ಅಡ್ವಾಣಿ ಭೇಟಿ ಮಾಡಿ 97ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on: Nov 08, 2024 | 9:10 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರ 97ನೇ ಜನ್ಮದಿನದ ಹಿನ್ನೆಲೆಯಲ್ಲಿ ಅಡ್ವಾಣಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದಾರೆ. ಭಾರತದ ರಾಜಕೀಯಕ್ಕೆ ಅವರ ಅಪಾರ ಕೊಡುಗೆಗಳನ್ನು ಮೋದಿ ಶ್ಲಾಘಿಸಿದ್ದಾರೆ. ಹಾಗೇ, ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹೊಂದುವಂತಾಗಲಿ ಎಂದು ಹಾರೈಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು (ಶುಕ್ರವಾರ) ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದಶಕಗಳ ಕಾಲ ಭಾರತದ ರಾಜಕೀಯದ ಮೂಲಾಧಾರವಾಗಿರುವ ಅಡ್ವಾಣಿ ಅವರನ್ನು ಪ್ರಧಾನಿಯವರು ಹೃತ್ಪೂರ್ವಕವಾಗಿ ಹಾರೈಸಿದರು. ಅವರು ದೇಶದ ರಾಜಕೀಯ ಕ್ಷೇತ್ರಕ್ಕೆ ಅವರು ನೀಡಿದ ಅಪಾರ ಕೊಡುಗೆಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: ಪ್ರತ್ಯೇಕತಾವಾದಿಗಳಿಗೆ ಶಿಕ್ಷೆಯಾಗಬೇಕು; ಕೆನಡಾದಲ್ಲಿ ಹಿಂದೂ ದೇವಾಲಯದ ದಾಳಿಗೆ ಭಾರತ ಟೀಕೆ

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಡ್ವಾಣಿಯನ್ನು ಭಾರತದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು ಎಂದು ಶ್ಲಾಘಿಸಿದ್ದಾರೆ. ರಾಷ್ಟ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವರ ಸಮರ್ಪಣೆಯ ಬಗ್ಗೆ ಗೌರವ ಸೂಚಿಸಿದ್ದಾರೆ. “ಅವರ ಜನ್ಮದಿನದ ಸಂದರ್ಭದಲ್ಲಿ, ನಾನು ಎಲ್.ಕೆ. ಅಡ್ವಾಣಿ ಜಿ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ವರ್ಷ ಬಹಳ ವಿಶೇಷವಾಗಿದೆ. ಏಕೆಂದರೆ ಅವರಿಗೆ ರಾಷ್ಟ್ರಕ್ಕೆ ಅವರ ಅಸಾಧಾರಣ ಸೇವೆಗಾಗಿ ಭಾರತ ರತ್ನವನ್ನು ನೀಡಲಾಯಿತು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

2002ರಿಂದ 2004ರವರೆಗೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ನಾಯಕ ಎಲ್​ಕೆ ಅಡ್ವಾಣಿ ಅವರು ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಈ ವರ್ಷದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇದನ್ನೂ ಓದಿ: ಇಡೀ ಜಗತ್ತೇ ನಿಮ್ಮನ್ನು ಪ್ರೀತಿಸುತ್ತೆ, ಪ್ರಧಾನಿ ಮೋದಿಯನ್ನು ಹೊಗಳಿದ ಟ್ರಂಪ್

ನವೆಂಬರ್ 8, 1927ರಂದು ಕರಾಚಿಯಲ್ಲಿ (ಈಗ ಪಾಕಿಸ್ತಾನದಲ್ಲಿದೆ) ಜನಿಸಿದ ಅಡ್ವಾಣಿ 1942ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ನಲ್ಲಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಬಿಜೆಪಿಯನ್ನು ಭಾರತದ ಪ್ರಬಲ ರಾಜಕೀಯ ಶಕ್ತಿಯಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಡ್ವಾಣಿ 1986-1990, 1993-1998, ಮತ್ತು 2004-2005ರ ನಡುವೆ ಮೂರು ಅವಧಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಬಿಜೆಪಿಯ ಬೆಳವಣಿಗೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ ಅಡ್ವಾಣಿ ಅವರು 1999ರಿಂದ 2004ರವರೆಗೆ ದೇಶದ ಗೃಹ ಸಚಿವರಾಗಿದ್ದರು ಮತ್ತು ವಾಜಪೇಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉಪಪ್ರಧಾನಿಯಾಗಿದ್ದರು. 1998ರಲ್ಲಿ ಭಾರತದ ಪರಮಾಣು ಪರೀಕ್ಷೆಗಳು ಮತ್ತು ಪ್ರಮುಖ ಮೂಲಸೌಕರ್ಯ ಯೋಜನೆಗಳು ಸೇರಿದಂತೆ ಮಹತ್ವದ ರಾಜಕೀಯ ಬೆಳವಣಿಗೆಗಳು ಮತ್ತು ಸುಧಾರಣೆಗಳನ್ನು ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ