Chintan Shivir: ಕೇಂದ್ರ ಗೃಹ ಇಲಾಖೆಯ ಚಿಂತನ ಶಿಬಿರಲ್ಲಿ ಪ್ರಧಾನಿ ಮೋದಿ ಭಾಷಣ

| Updated By: Rakesh Nayak Manchi

Updated on: Oct 28, 2022 | 7:22 AM

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯಗಳ ಗೃಹ ಸಚಿವರ ಚಿಂತನ್ ಶಿವರ್ ಅವರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

Chintan Shivir: ಕೇಂದ್ರ ಗೃಹ ಇಲಾಖೆಯ ಚಿಂತನ ಶಿಬಿರಲ್ಲಿ ಪ್ರಧಾನಿ ಮೋದಿ ಭಾಷಣ
ಕೇಂದ್ರ ಗೃಹ ಇಲಾಖೆಯ ಚಿಂತನ ಶಿಬಿರಲ್ಲಿ ಪ್ರಧಾನಿ ಮೋದಿ ಭಾಷಣ
Follow us on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಕ್ರವಾರ (ಅ.28) ದಂದು ಬೆಳಗ್ಗೆ 10:30 ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯಗಳ ಗೃಹ ಸಚಿವರ ಚಿಂತನ ಶಿಬಿರ (Chintan Shivir)ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎರಡು ದಿನಗಳ ಈ ಶಿಬಿರವು ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಿನ್ನೆ (ಅ.27) ಆರಂಭಗೊಂಡಿದ್ದು, ಇಂದು ಕೊನೆಯ ದಿನವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ರಾಜ್ಯಗಳ ಗೃಹ ಸಚಿವರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಆಡಳಿತಾಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ರಾಜ್ಯಗಳ ಗೃಹ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮಹಾನಿರ್ದೇಶಕರು (DGP) ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) ಮಹಾನಿರ್ದೇಶಕರು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳ (CPO) ಚಿಂತನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಈ ವರ್ಷದ ನಡೆದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿಯವರು ಘೋಷಿಸಿದ ‘ವಿಷನ್ 2047’ ಮತ್ತು ‘ಪಂಚ ಪ್ರಾಣ್’ (ಐದು ಪ್ರತಿಜ್ಞೆಗಳು) ಕಾರ್ಯಗತಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು ಈ ಚಿಂತನ ಶಿಬಿರದ ಗುರಿಯಾಗಿದೆ. ಸೈಬರ್ ಅಪರಾಧಗಳನ್ನು ನಿಗ್ರಹಿಸಲು ತಾಂತ್ರಕವಾಗಿ ಇನ್ನಷ್ಟು ಅಭಿವೃದ್ಧಿಹೊಂದುವುದು, ಪೊಲೀಸ್ ಪಡೆಗಳನ್ನು ಆಧುನೀಕರಿಸುವುದು, ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವುದು, ಭೂ ಗಡಿ ನಿರ್ವಹಣೆ ಮತ್ತು ಕರಾವಳಿ ಭದ್ರತೆ ಮತ್ತು ಇತರ ಆಂತರಿಕ ಭದ್ರತಾ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳು ಕಾರ್ಯಸೂಚಿಯ ಭಾಗವಾಗಿದೆ.

“2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ’ ಗುರಿಯನ್ನು ಸಾಧಿಸಲು ‘ನಾರಿ ಶಕ್ತಿ’ ಪಾತ್ರವು ಮುಖ್ಯವಾಗಿದೆ ಮತ್ತು ಮಹಿಳೆಯರ ಸುರಕ್ಷತೆ ಮತ್ತು ಅವರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ವಿಶೇಷ ಒತ್ತು ನೀಡಲಾಗುವುದು. ಸಮ್ಮೇಳನದ ಉದ್ದೇಶವು ರಾಷ್ಟ್ರೀಯ ನೀತಿ ನಿರ್ಮಾಣ ಮತ್ತು ಮೇಲೆ ತಿಳಿಸಿದ ಕ್ಷೇತ್ರಗಳಲ್ಲಿ ಉತ್ತಮ ಯೋಜನೆ ಮತ್ತು ಸಮನ್ವಯವನ್ನು ಸುಲಭಗೊಳಿಸುವುದಾಗಿದೆ” ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆದರಿಕೆಯ ಇತ್ತೀಚಿನ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಭದ್ರತೆ ಮತ್ತು ಅಭಿವೃದ್ಧಿ ವಿಷಯಗಳ ಮಾರ್ಗಸೂಚಿಯನ್ನು ಚರ್ಚಿಸಲು ದೆಹಲಿಯಲ್ಲಿ 10 ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 am, Fri, 28 October 22