AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi Rally: ಹಿಮಾಚಲ ಪ್ರದೇಶದ 2 ಕ್ಷೇತ್ರಗಳಲ್ಲಿ ಇಂದು ಪ್ರಧಾನಿ ಮೋದಿ ಚುನಾವಣಾ ರ್ಯಾಲಿ

PM Narendra Modi: ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸುಜನ್‌ಪುರದ ಐತಿಹಾಸಿಕ ಚೌಗನ್‌ಗೆ ಆಗಮಿಸಲಿದ್ದಾರೆ.

PM Narendra Modi Rally: ಹಿಮಾಚಲ ಪ್ರದೇಶದ 2 ಕ್ಷೇತ್ರಗಳಲ್ಲಿ ಇಂದು ಪ್ರಧಾನಿ ಮೋದಿ ಚುನಾವಣಾ ರ್ಯಾಲಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Nov 09, 2022 | 8:35 AM

Share

ನವದೆಹಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ (Himachal Pradesh) ಕೊನೆಯ ಸುತ್ತಿನ ಪ್ರಚಾರ ಕಾರ್ಯ ನಡೆಯುತ್ತಿದೆ. ಭಾರತದ ಎಲ್ಲಾ ಪ್ರಭಾವಿ ನಾಯಕರು ಮುಂದಿನ 2 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಇರುತ್ತಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೂಡ ಇಂದು (ಬುಧವಾರ) ಹಿಮಾಚಲ ಪ್ರದೇಶದಲ್ಲಿ 2 ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ. ಕಾಂಗ್ರಾ ಜಿಲ್ಲೆಯ ಶಾಹಪುರ್‌ನಲ್ಲಿರುವ ಚಂಬಿ ಮೈದಾನದಲ್ಲಿ ಒಂದು ರ್ಯಾಲಿ ನಡೆಯಲಿದೆ. 2ನೇ ರ್ಯಾಲಿ ಹಮೀರ್‌ಪುರ ಜಿಲ್ಲೆಯ ಸುಜನ್‌ಪುರದಲ್ಲಿ ನಡೆಯಲಿದೆ.

ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸುಜನ್‌ಪುರದ ಐತಿಹಾಸಿಕ ಚೌಗನ್‌ಗೆ ಆಗಮಿಸಲಿದ್ದಾರೆ. ಮೋದಿ ಕಳೆದ 8 ವರ್ಷಗಳಲ್ಲಿ ಎರಡನೇ ಬಾರಿಗೆ ಸುಜನ್​ಪುರಕ್ಕೆ ಬರುತ್ತಿದ್ದಾರೆ. ಇದಕ್ಕೂ ಮುನ್ನ ಅವರು 2014ರ ಫೆಬ್ರವರಿ 16ರಂದು ಸುಜನ್​ಪುರಕ್ಕೆ ಬಂದಿದ್ದರು. ಇದೀಗ ಪ್ರಧಾನಿ ಸಮಾವೇಶಕ್ಕೆ ಜಿಲ್ಲಾಡಳಿತ ಹಾಗೂ ಬಿಜೆಪಿ ಹೈಕಮಾಂಡ್ ಸಿದ್ಧತೆ ಮಾಡಿಕೊಂಡಿದೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಈ ಚುನಾವಣೆಯ ಸಾರ್ವಜನಿಕ ಸಭೆ ನಡೆಯಲಿದೆ.

ಇದನ್ನೂ ಓದಿ: Himachal Pradesh Elections: ಇಂದು ಶಿಮ್ಲಾದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಬಿಜೆಪಿ

ಸುಜನ್​ಪುರದಲ್ಲಿ ಕಾಂಗ್ರೆಸ್ ತನ್ನ ಕಾರ್ಯಾಧ್ಯಕ್ಷ ರಾಜೇಂದ್ರ ರಾಣಾ ಅವರನ್ನು ನಾಮನಿರ್ದೇಶನ ಮಾಡಿರುವುದರಿಂದ ಈ ರ್ಯಾಲಿ ಮಹತ್ವದ್ದಾಗಿದೆ. ಬಿಜೆಪಿ ಧುಮಾಲ್ ಕುಟುಂಬವನ್ನು ಹೊರತುಪಡಿಸಿ ಈ ಕ್ಷೇತ್ರದಲ್ಲಿ ಬೇರೆಯವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಳೆದ ಬಾರಿ ಬಿಜೆಪಿಯಿಂದ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಇದರ ಹೊರತಾಗಿಯೂ ಅವರು ಸುಜನ್‌ಪುರದ ರಾಜೇಂದ್ರ ರಾಣಾ ಅವರ ಎದುರು ಸೋಲನ್ನು ಎದುರಿಸಬೇಕಾಯಿತು. ಹೀಗಾಗಿ, ಬಿಜೆಪಿ ಈ ಬಾರಿ ಈ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸಿದೆ. ಪ್ರಧಾನಿ ರ್ಯಾಲಿ ಬಳಿಕ ಬಿಜೆಪಿ ಪರ ರಾಜಕೀಯ ವಾತಾವರಣ ನಿರ್ಮಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ.

ಹಿಮಾಚಲ ಪ್ರದೇಶದ ಅತಿ ದೊಡ್ಡ ಜಿಲ್ಲೆ ಕಾಂಗ್ರಾದಲ್ಲಿ ಕೊನೆಯ ಹಂತದ ಚುನಾವಣೆಯ ರ್ಯಾಲಿ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷ ಸಕಲ ಪ್ರಯತ್ನ ನಡೆಸಲಿದೆ. ಪ್ರಧಾನಿ ಮೋದಿಯವರ ರ್ಯಾಲಿಯೊಂದಿಗೆ ಬಿಜೆಪಿ ರಾಜ್ಯದ ಅತಿದೊಡ್ಡ ಜಿಲ್ಲೆ ಕಾಂಗ್ರಾವನ್ನು ತಲುಪಲು ಪ್ರಯತ್ನಿಸುತ್ತಿದೆ. ಬಿಜೆಪಿ ಅಭ್ಯರ್ಥಿ ಸರ್ವೀನ್ ಚೌಧರಿ ಸತತ 3 ಬಾರಿ ಶಹಪುರದಿಂದ ಗೆದ್ದಿದ್ದಾರೆ. ಹೀಗಾಗಿ, ಈ ಬಾರಿಯೂ ಈ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಖಚಿತ ಎನ್ನಲಾಗುತ್ತಿದೆ.

ಇದನ್ನೂ ಓದಿ: Himachal Pradesh Elections: ಕಾಂಗ್ರೆಸ್​ಗೆ ಹಿನ್ನಡೆ; ಮತದಾನಕ್ಕೆ ಕೆಲವೇ ದಿನಗಳಿರುವಾಗ ಬಿಜೆಪಿ ಸೇರಿದ 26 ಕಾಂಗ್ರೆಸ್ ನಾಯಕರು

ಮಲ್ಲಿಕಾರ್ಜುನ ಖರ್ಗೆ ಪ್ರಚಾರ: ಇಂದು ಬಿಜೆಪಿಯ ಜೊತೆಗೆ ಕಾಂಗ್ರೆಸ್ ಕೂಡ ಹಿಮಾಚಲ ಪ್ರದೇಶದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೂಡ ಮಂಗಳವಾರ ಹಿಮಾಚಲಕ್ಕೆ ಬಂದಿದ್ದಾರೆ. ಇಂದು ಅವರು ಶಿಮ್ಲಾ ಗ್ರಾಮಾಂತರದ ಬವುತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಪರ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಇದಾದ ನಂತರ ನಾಲಗಢದಲ್ಲಿ ಚುನಾವಣಾ ರ್ಯಾಲಿ ನಡೆಸಲಿದ್ದಾರೆ.

Published On - 8:35 am, Wed, 9 November 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!