ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಜ.28) ನ್ಯಾಷನಲ್ ಕೆಡೆಟ್ ಕಾರ್ಪ್ಸ್ನ (NCC 75th Anniversary) 75ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಿ, ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಯಂಕಾಲ 5:45ಕ್ಕೆ ಕರಿಯಪ್ಪ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿಯವರು 75ನೇ ವಾರ್ಷಿಕೋತ್ಸವದ ನೆನಪಿಗಾಗಿ ವಿಶೇಷ ದಿನದ ಕವರ್ ಮತ್ತು 75ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ.
ಇನ್ನು ಕಾರ್ಯಕ್ರಮ ಸಂಜೆ ಪ್ರಾರಂಭವಾಗಿ ರಾತ್ರಿಯವರೆಗು ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ “ಏಕ ಭಾರತ ಶ್ರೇಷ್ಠ ಭಾರತ” ಧ್ಯೇಯ ವ್ಯಾಖಗಳೊಂದಿಗೆ ಸಾಂಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಭಾರತ “ವಸುದೈವ ಕುಟುಂಬಕಂ” ಸಂಕೃತಿ ಹೊಂದಿದ್ದು, 196 ಅಧಿಕಾರಿಗಳು ಮತ್ತು 19 ದೇಶದ ಕೆಡೆಟ್ಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಕೆಲವೇ ದಿನಗಳಲ್ಲಿ ಪ್ರಧಾನ ಮಂತ್ರಿಗಳು ಜಾನಪದ ದೇವತೆಯಾದ ದೇವನಾರಾಯಣನ 1111 ನೇ ಜನ್ಮ ವಾರ್ಷಿಕೋತ್ಸವಕ್ಕಾಗಿ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಅಸಿಂದ್‌ಗೆ ಭೇಟಿ ನೀಡಲಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ