BRICS Summit: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಜೋಹಾನ್ಸ್‌ಬರ್ಗ್‌ಗೆ ತೆರಳುವ ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟೆಮೆಲಾ ಸಿರಿಲ್ ರಮಾಫೋಸಾ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.

BRICS Summit: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ Image Credit source: PTI
Follow us
Ganapathi Sharma
|

Updated on: Aug 03, 2023 | 10:11 PM

ನವದೆಹಲಿ, ಆಗಸ್ಟ್ 3: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಆಗಸ್ಟ್ 22 ರಿಂದ 24 ರ ವರೆಗೆ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗವಹಿಸಲಿದ್ದಾರೆ. ಪ್ರಧಾನಿಯವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಂತೆಯೇ ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಮೋದಿ ಅವರು ಖುದ್ದು ಜೋಹಾನ್ಸ್‌ಬರ್ಗ್‌ಗೆ ತೆರಳಿ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಬ್ರಿಕ್ಸ್ ಸದಸ್ಯರ ರಾಷ್ಟ್ರಗಳಲ್ಲಿ ಚೀನಾ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಿದ್ದರೂ ಸಹ, ಬ್ರೆಜಿಲ್ ಜೊತೆ ಸೇರಿ ಭಾರತ ಕೂಡ ತನ್ನ ಪಾತ್ರದ ಬಗ್ಗೆ ದೃಢವಾದ ಸಂದೇಶ ರವಾನಿಸುತ್ತಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ತಿಳಿಸಿದೆ.

ಸೌದಿ ಅರೇಬಿಯಾ, ಯುಎಇಯಂತಹ ನಿಕಟ ಮಿತ್ರರಾಷ್ಟ್ರಗಳು ಬ್ರಿಕ್ಸ್ ಸೇರಲು ಬಯಸುತ್ತಿರುವ ಕಾರಣ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ಹೋಗುವುದು ಬಹಳ ಮುಖ್ಯವಾದ ವಿಚಾರವಾಗಿದೆ. ಬ್ರಿಕ್ಸ್‌ಗೆ ಸೇರಲು ಸುಮಾರು 25 ದೇಶಗಳು ಅರ್ಜಿ ಸಲ್ಲಿಸಿವೆ ಮತ್ತು ಐದು ರಾಷ್ಟ್ರಗಳ ಸಂಸ್ಥೆಯನ್ನು ವಿಸ್ತರಿಸಬೇಕೆ ಅಥವಾ ಬೇಡವೇ ಎಂಬ ನಿರ್ಧಾರವನ್ನು ಜೋಹಾನ್ಸ್‌ಬರ್ಗ್‌ನಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಜೋಹಾನ್ಸ್‌ಬರ್ಗ್‌ಗೆ ತೆರಳುವ ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟೆಮೆಲಾ ಸಿರಿಲ್ ರಮಾಫೋಸಾ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ದೂರವಾಣಿ ಸಂಭಾಷಣೆಯ ಸಮಯದಲ್ಲಿ, ರಮಾಫೋಸಾ ಅವರು ಬ್ರಿಕ್ಸ್ ಶೃಂಗಸಭೆಗೆ ಪ್ರಧಾನ ಮಂತ್ರಿಯನ್ನು ಆಹ್ವಾನಿಸಿದರು ಮತ್ತು ಸಿದ್ಧತೆಗಳ ಬಗ್ಗೆ ಅವರಿಗೆ ವಿವರಿಸಿದರು. ಪ್ರಧಾನಮಂತ್ರಿಯವರು ಆಹ್ವಾನವನ್ನು ಸ್ವೀಕರಿಸಿದರು ಮತ್ತು ಶೃಂಗಸಭೆಗಾಗಿ ಜೋಹಾನ್ಸ್‌ಬರ್ಗ್‌ಗೆ ತೆರಳುವುದನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ ‘ಮೇರಿ ಮಾಟಿ ಮೇರಾ ದೇಶ್ ಅಭಿಯಾನ’ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ

ಮೋದಿ ಮತ್ತು ರಮಾಫೋಸಾ ಇಬ್ಬರೂ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಪ್ರಸ್ತುತ ಭಾರತದ ಜಿ20 ಅಧ್ಯಕ್ಷತೆಯ ಭಾಗವಾಗಿ ಕೈಗೊಳ್ಳಲಾಗಿರುವ ಉಪಕ್ರಮಗಳಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ರಾಮಫೋಸಾ ತಿಳಿಸಿದರು ಮತ್ತು ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್