Kashi-Tamil Samagam: ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ವಾರಣಾಸಿ ಮತ್ತು ತಮಿಳುನಾಡು ನಡುವಿನ ಸಾಂಸ್ಕೃತಿಕ ಸಂಬಂಧವನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕಾಶಿ-ತಮಿಳು ಸಮಾಗಮವನ್ನು ಕೇಂದ್ರ ಸರ್ಕಾರವು ಆಯೋಜಿಸುತ್ತಿದೆ. ಪ್ರಧಾನಿಯವರು ಕಾರ್ಯಕ್ರಮವನ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ.

Kashi-Tamil Samagam: ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
Follow us
TV9 Web
| Updated By: Rakesh Nayak Manchi

Updated on:Nov 19, 2022 | 6:58 AM

ವಾರಣಾಸಿ: ಒಂದು ತಿಂಗಳ ಕಾಲ ನಡೆಯುವ ಕಾಶಿ-ತಮಿಳು ಸಮಾಗಮವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶನಿವಾರ ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ಆಂಫಿಥಿಯೇಟರ್ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. “ಆಜಾದಿ ಕಾ ಅಮೃತ್ ಮಹೋತ್ಸವ”ದ (Azadi Ka Amrit Mahotsav) ಭಾಗವಾಗಿ ಮತ್ತು “ಏಕ್ ಭಾರತ್ ಶ್ರೇಷ್ಠ ಭಾರತ”ದ (Ek Bharat Shreshtha Bharat) ಸ್ಪೂರ್ತಿಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಾಗೂ ವಾರಣಾಸಿ ಮತ್ತು ತಮಿಳುನಾಡು ನಡುವಿನ ಸಾಂಸ್ಕೃತಿಕ ಸಂಬಂಧವನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕಾಶಿ-ತಮಿಳು ಸಮಾಗಮ (Kashi-Tamil Samagam)ವನ್ನು ಕೇಂದ್ರ ಸರ್ಕಾರವು ಆಯೋಜಿಸುತ್ತಿದೆ. ಪ್ರಧಾನಿ ಅವರು ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಹಾನಗರ ಅಧ್ಯಕ್ಷ ವಿದ್ಯಾಸಾಗರ್ ರೈ ತಿಳಿಸಿದ್ದಾರೆ.

ಇದನ್ನೂ ಓದಿ: Fact Check ಬಾಲಿಯಲ್ಲಿ ಜಿ 20 ಶೃಂಗಸಭೆ ವೇಳೆ ಗೋ ಬ್ಯಾಕ್ ಮೋದಿ ಎಂದು ಫಲಕ ಹಿಡಿದ ಯುವತಿ; ಫೋಟೊಶಾಪ್ ಮಾಡಿದ ಚಿತ್ರ ವೈರಲ್

ನವೆಂಬರ್ 17 ರಿಂದ ಡಿಸೆಂಬರ್ 16 ರವರೆಗಿನ ಕಾರ್ಯಕ್ರಮವು ಕಾಶಿ (ವಾರಣಾಸಿ) ಮತ್ತು ತಮಿಳುನಾಡು ನಡುವಿನ ಶತಮಾನಗಳ ಹಳೆಯ ಜ್ಞಾನ ಮತ್ತು ಪ್ರಾಚೀನ ನಾಗರಿಕತೆಯ ಸಂಬಂಧವನ್ನು ಮರುಶೋಧಿಸಲು ಶ್ರಮಿಸುತ್ತದೆ. ಒಂದು ತಿಂಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ತಮಿಳುನಾಡಿನ 2500ಕ್ಕೂ ಹೆಚ್ಚು ಪ್ರತಿನಿಧಿಗಳು 8 ವಿವಿಧ ಬ್ಯಾಚ್‌ಗಳಲ್ಲಿ ಕಾಶಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಎರಡು ದಿನಗಳ ಹಿಂದೆಯಷ್ಟೇ ವಾರಣಾಸಿಗೆ ಆಗಮಿಸಿ ಸಂಗಮಕ್ಕೆ ಸಿದ್ಧತೆಗಳನ್ನು ಪರಿಶೀಲಿಸಿದ್ದರು.

ಇದನ್ನೂ ಓದಿ: Fact Check ನೋಟು ರದ್ದತಿಯಿಂದ ಸಂಕಷ್ಟಕ್ಕೊಳಗಾದ ಜನರನ್ನು ಗೇಲಿ ಮಾಡಿದ್ದಾರಾ ನರೇಂದ್ರ ಮೋದಿ; ಎಡಿಟ್ ಮಾಡಿದ ವಿಡಿಯೊ ವೈರಲ್

ಕಾಶಿಯ ಮೇಯರ್ ಡಾ ಮೃದುಲಾ ಜಯಸ್ವಾಲ್ ಅವರು ಸುದ್ದಿ ಸಂಸ್ಥೆ AIR ನ್ಯೂಸ್‌ ಜೊತೆ ಮಾತನಾಡಿ, ತಮಿಳುನಾಡಿನ ಪ್ರತಿನಿಧಿಗಳನ್ನು ಸ್ವಾಗತಿಸಲು ಕಾಶಿಯ ಜನರು ಸಿದ್ಧರಾಗಿದ್ದಾರೆ ಮತ್ತು ಈ ಕಾರ್ಯಕ್ರಮವು ಎರಡು ಸಂಸ್ಕೃತಿಗಳನ್ನು ಒಟ್ಟಿಗೆ ತರುತ್ತದೆ ಮತ್ತು ಹಳೆಯ ಸಂಬಂಧಗಳನ್ನು ಪುನರುಜ್ಜೀವನಗೊಳಿಸುತ್ತದೆ ಎಂದು ತಿಳಿಸಿದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 am, Sat, 19 November 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್