ಇಂದು ತಮಿಳುನಾಡಿನಲ್ಲಿ 11 ವೈದ್ಯಕೀಯ ಕಾಲೇಜು, ಸಿಐಸಿಟಿ ಹೊಸ ಕ್ಯಾಂಪಸ್​ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ; ಸಂಜೆ 4ಕ್ಕೆ ವರ್ಚ್ಯುವಲ್​ ಕಾರ್ಯಕ್ರಮ

ಸಿಐಸಿಟಿಯ ಹೊಸ ಕ್ಯಾಂಪಸ್​ಗೆ ಕೇಂದ್ರ ಸರ್ಕಾರವೇ ಪೂರ್ಣ ಅನುದಾನ ನೀಡಿದ್ದು, ಇದು 24 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಮೂರು ಮಹಡಿಗಳನ್ನು ಹೊಂದಿದ್ದು, ವಿಶಾಲವಾದ ಗ್ರಂಥಾಲಯವಿದೆ.

ಇಂದು ತಮಿಳುನಾಡಿನಲ್ಲಿ 11 ವೈದ್ಯಕೀಯ ಕಾಲೇಜು, ಸಿಐಸಿಟಿ ಹೊಸ ಕ್ಯಾಂಪಸ್​ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ; ಸಂಜೆ 4ಕ್ಕೆ ವರ್ಚ್ಯುವಲ್​ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on: Jan 12, 2022 | 8:40 AM

ಪ್ರಧಾನಿ ನರೇಂದ್ರ ಮೋದಿ(PM Modi)ಯವರು ಇಂದು ತಮಿಳುನಾಡಿನಲ್ಲಿ 11 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಸೆಂಟ್ರಲ್​ ಇನ್​ಸ್ಟಿಟ್ಯೂಟ್ ಆಫ್​ ಕ್ಲಾಸಿಕಲ್​ ತಮಿಳಿನ (CICT) ನೂತನ ಕ್ಯಾಂಪಸ್​​ನ್ನು ಇಂದು ಉದ್ಘಾಟಿಸಲಿದ್ದಾರೆ. ಈ ಸಿಐಸಿಟಿ ಇದ್ದಿದ್ದು ಚೆನ್ನೈನಲ್ಲಿ. ಅಂದಹಾಗೆ ಈ 11 ವೈದ್ಯಕೀಯ ಕಾಲೇಜುಗಳು ಮತ್ತು ಸಿಐಸಿಟಿ ಕ್ಯಾಂಪಸ್ ಉದ್ಘಾಟನೆ ಕಾರ್ಯಕ್ರಮ ಸಂಜೆ 4ಗಂಟೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆಯಲಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ (PMO) ತಿಳಿಸಿದೆ. ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ತಮಿಳುನಾಡಿನ ಸಂಸ್ಕೃತಿ ಜಾಗತಿಕವಾಗಿ ಮೆಚ್ಚುಗೆ ಪಡೆದಿದೆ. ಅಂಥ ಸಂಸ್ಕೃತಿಯನ್ನು ಉಳಿಸಿ, ಆಚರಿಸಲು ನಮ್ಮ ಪ್ರಯತ್ನ ನಿರಂತರವಾಗಿ ಸಾಗುತ್ತಿರುತ್ತದೆ. ಅದರ ಒಂದು ಭಾಗವಾಗಿ ಸೆಂಟ್ರಲ್​ ಇನ್​ಸ್ಟಿಟ್ಯೂಟ್ ಆಫ್​ ಕ್ಲಾಸಿಕಲ್ ತಮಿಳಿನ ಹೊಸ ಕ್ಯಾಂಪಸ್ ಉದ್ಘಾಟನೆಯಾಗುತ್ತಿದೆ ಎಂದು ಹೇಳಿದ್ದರು.

ಇನ್ನು ರಾಜ್ಯಾದ್ಯಂತ 11 ವೈದ್ಯಕೀಯ ಕಾಲೇಜುಗಳನ್ನು ಸುಮಾರು 4ಸಾವಿರ ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಾಗಿದೆ. ಅದರಲ್ಲಿ 2415 ಕೋಟಿ ರೂಪಾಯಿ ಕೇಂದ್ರ ಸರ್ಕಾರ ಕೊಟ್ಟಿದೆ. ಉಳಿದ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಿದೆ. ನೀಲಗಿರಿ, ತಿರುವಳ್ಳೂರು, ನಾಗಪಟ್ಟಣಂ, ನಾಮಕ್ಕಲ್, ದಿಂಡಿಗಲ್, ಕಲ್ಲಕುರಿಚಿ, ಅರಿಯಲೂರ್, ರಾಮನಾಥಪುರಂ, ಕೃಷ್ಣಗಿರಿ, ತಿರುಪ್ಪೂರ್ ಮತ್ತು ವಿರುದುನಗರ ಜಿಲ್ಲೆಗಳಲ್ಲಿ ಒಂದೊಂದು ವೈದ್ಯಕೀಯ ಕಾಲೇಜು ನಿರ್ಮಾಣವಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ನೀಡಿದಂತಾಗಿದೆ. ಈ ಕಾಲೇಜುಗಳಲ್ಲಿ 1450 ಸೀಟ್​ಗಳು ಇರಲಿವೆ. ಈ ವೈದ್ಯಕೀಯ ಕಾಲೇಜುಗಳನ್ನು ಕೇಂದ್ರ ಸರ್ಕಾರದ ಜಿಲ್ಲೆ/ರೆಫರೆಲ್ ಆಸ್ಪತ್ರೆ ಸ್ಕೀಮ್​​ನಲ್ಲಿ ನಿರ್ಮಿಸಲಾಗಿದೆ. ಎಲ್ಲೆಲ್ಲಿ ಸರ್ಕಾರಿ ಅಥವಾ ಖಾಸಗಿಯ ಯಾವುದೇ ವೈದ್ಯಕೀಯ ಕಾಲೇಜು ಇಲ್ಲವೋ, ಆ ಪ್ರದೇಶಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಯೋಜನೆ ಇದಾಗಿದೆ.

ಇನ್ನು ಸಿಐಸಿಟಿಯ ಹೊಸ ಕ್ಯಾಂಪಸ್​ಗೆ ಕೇಂದ್ರ ಸರ್ಕಾರವೇ ಪೂರ್ಣ ಅನುದಾನ ನೀಡಿದ್ದು, ಇದು 24 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಮೂರು ಮಹಡಿಗಳನ್ನು ಹೊಂದಿದ್ದು, ವಿಶಾಲವಾದ ಗ್ರಂಥಾಲಯವಿದೆ. ಸೆಮಿನಾರ್ ಹಾಲ್‌ಗಳು, ಮಲ್ಟಿಮೀಡಿಯಾ ಹಾಲ್ ಮತ್ತು ಇ-ಲೈಬ್ರರಿಯನ್ನೂ ಹೊಂದಿದೆ. ಈ ಕ್ಯಾಂಪಸ್​ನ್ನು ಭಾರತೀಯ ಪರಂಪರೆ ರಕ್ಷಿಸಲು ಮತ್ತು ಶಾಸ್ತ್ರೀಯ ಭಾಷೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಈ ಸಿಐಸಿಟಿಯು ತಮಿಳು ಭಾಷೆಯ ಪ್ರಾಚೀನತೆ, ಅನನ್ಯತೆಯ ಬಗ್ಗೆ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತದೆ. ಇಲ್ಲಿ 45 ಸಾವಿರಕ್ಕೂ ಅಧಿಕ ಪ್ರಾಚೀನ ತಮಿಳು ಪುಸ್ತಕಗಳ ಸಂಗ್ರಹವಿದೆ.  ಇದು ವಿದ್ಯಾರ್ಥಿಗಳಿಗೆ ಫೆಲೋಶಿಪ್​ ಕೂಡ ನೀಡುತ್ತದೆ.

ಇದನ್ನೂ ಓದಿ: ರಾಯಚೂರು: ಅಧಿಕಾರಿಗಳ ವರ್ತನೆ ವಿರುದ್ಧ ನರ್ಸಿಂಗ್ ವಿದ್ಯಾರ್ಥಿನಿಯರ ಅಹೋರಾತ್ರಿ ಪ್ರತಿಭಟನೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?