AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Chauraha: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯಿಂದ ಇಂದು ಲತಾ ಮಂಗೇಶ್ಕರ್ ಹೆಸರಿನ ಚೌಕ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ 93ನೇ ಜನ್ಮದಿನದ ಸಂದರ್ಭದಲ್ಲಿ ಅವರ ನೆನಪಿಗಾಗಿ ಅವರ ಹೆಸರಿನ ಈ ಚೌಕವನ್ನು ಉದ್ಘಾಟಿಸಲಿದ್ದಾರೆ.

Lata Mangeshkar Chauraha: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯಿಂದ ಇಂದು ಲತಾ ಮಂಗೇಶ್ಕರ್ ಹೆಸರಿನ ಚೌಕ ಉದ್ಘಾಟನೆ
ಲತಾ ಮಂಗೇಶ್ಕರ್ ಹೆಸರಿನ ವೃತ್ತ
TV9 Web
| Edited By: |

Updated on:Sep 28, 2022 | 9:15 AM

Share

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಇಂದು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಹೆಸರಿನ ವೃತ್ತವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಗಾಯಕಿ ಲತಾ ಮಂಗೇಶ್ಕರ್ (Lata Mangeshkar Birthday) ಅವರ 93ನೇ ಜನ್ಮದಿನದ ಸಂದರ್ಭದಲ್ಲಿ ಅವರ ಹೆಸರಿನ ಚೌಕವನ್ನು (Lata Mangeshkar Chowk) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲತಾ ಮಂಗೇಶ್ಕರ್ ಅವರ ಕುಟುಂಬಸ್ಥರೆಲ್ಲರಿಗೂ ಆಹ್ವಾನ ನೀಡಲಾಗಿದೆ. ಈ ಬೃಹತ್ ಚೌಕ (ವೃತ್ತ)ದ ಮಧ್ಯೆ ಸಂಗೀತದ ಉಪಕರಣವನ್ನು ಇಡಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ 93ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅವರ ನೆನಪಿಗಾಗಿ ಅವರ ಹೆಸರಿನ ಈ ಚೌಕವನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರಯೂ ನದಿಯ ದಡದಲ್ಲಿರುವ ಹೊಸ ಘಾಟ್ ಪ್ರದೇಶವನ್ನು ಲತಾ ಮಂಗೇಶ್ಕರ್ ಚೌರಾಹಾ ಎಂದು ಕರೆಯಲಾಗಿದ್ದು, ಇದನ್ನು 7.9 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ: ಮುಂದಿನ ಜನ್ಮ ಇದ್ದರೆ ಲತಾ ಮಂಗೇಶ್ಕರ್​ ಆಗಿ ಹುಟ್ಟಲು ನನಗೆ ಇಷ್ಟವಿಲ್ಲ ಎಂದಿದ್ದ ನೈಟಿಂಗೇಲ್​ ಆಫ್ ಇಂಡಿಯಾ

ಈ ವೃತ್ತದ ಮಧ್ಯೆ 14 ಟನ್ ತೂಕ, 40 ಅಡಿ ಉದ್ದ ಮತ್ತು 12 ಮೀಟರ್ ಎತ್ತರವಿರುವ ಭಾರತೀಯ ಸಂಗೀತ ವಾದ್ಯವಾದ ವೀಣೆಯನ್ನು ಸ್ಥಾಪಿಸಿರುವುದು ಈ ಸ್ಥಳದ ಪ್ರಮುಖ ಆಕರ್ಷಣೆಯಾಗಿದೆ. ಈ ಸಮಾರಂಭದಲ್ಲಿ ಲತಾ ಮಂಗೇಶ್ಕರ್ ಅವರ ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಅನೇಕ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಇಂದು ಲತಾ ಮಂಗೇಶ್ಕರ್ ಅವರ ಜನ್ಮದಿನವಾದ್ದರಿಂದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಲತಾ ದೀದಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ನೆನಪಿಸಿಕೊಳ್ಳುತ್ತೇನೆ. ನಾನು ನೆನಪಿಸಿಕೊಳ್ಳುವುದು ತುಂಬಾ ಇದೆ. ಲತಾ ದೀದಿ ಎಲ್ಲರಿಗೂ ಬಹಳ ಪ್ರೀತಿಯನ್ನು ಸುರಿಸುತ್ತಿದ್ದರು. ಇಂದು ಅಯೋಧ್ಯೆಯ ಚೌಕ್‌ಗೆ ಅವರ ಹೆಸರಿಡಲು ನನಗೆ ಸಂತೋಷವಾಗುತ್ತಿದೆ. ಇದು ಶ್ರೇಷ್ಠ ಭಾರತೀಯ ಸಂಗೀತ ದಿಗ್ಗಜರಿಗೆ ನಾವು ನೀಡುತ್ತಿರುವ ಸೂಕ್ತವಾದ ಗೌರವವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ದಶಕಗಳ ಕಾಲ ತಮ್ಮ ಮಾಂತ್ರಿಕ ಕಂಠದಿಂದ ಕೇಳುಗರನ್ನು ಪುಳಕಿತಗೊಳಿಸಿದ್ದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ 2022ರ ಫೆಬ್ರವರಿ 6ರಂದು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 am, Wed, 28 September 22

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!