PM Modi Covid Review Meeting: ಕೊರೊನಾ ಪ್ರಸರಣ ಹೆಚ್ಚಳ; ಇಂದು ಮಧ್ಯಾಹ್ನ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ದೇಶದಲ್ಲಿ ಸದ್ಯ ಯಾವುದೇ ಕೊರೊನಾ ನಿಯಂತ್ರಣ ನಿರ್ಬಂಧಗಳಿಲ್ಲ. ಹಾಗೇ, ಲಸಿಕೆ ಮೂರನೇ ಡೋಸ್ ನೀಡಿಕೆ ಅಭಿಯಾನವೂ ನಡೆಯುತ್ತಿದೆ. ಈ ಮಧ್ಯೆ ಕೊರೊನಾ ಸೋಂಕಿನ ಪ್ರಸರಣವೂ ಹೆಚ್ಚುತ್ತಿದೆ.

PM Modi Covid Review Meeting:  ಕೊರೊನಾ ಪ್ರಸರಣ ಹೆಚ್ಚಳ; ಇಂದು ಮಧ್ಯಾಹ್ನ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Apr 27, 2022 | 10:15 AM

ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಕೊವಿಡ್​ 19 ಪರಿಸ್ಥಿತಿ ಹೇಗಿದೆ ಎಂಬುದನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ  ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ಇದರಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್​ ಕೂಡ ಉಪಸ್ಥಿತರಿದ್ದು, ಮಾತನಾಡಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೊವಿಡ್​ 19 ಸಾಂಕ್ರಾಮಿಕ ಶುರುವಾದಾಗಿನಿಂದಲೂ ವಿವಿಧ ರಾಜ್ಯಗಳಲ್ಲಿನ ಪರಿಸ್ಥಿತಿ, ಕೊರನಾ ನಿಯಂತ್ರಣ ಕ್ರಮಗಳ ಅನುಷ್ಠಾನ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿಯವರು ಮುಖ್ಯಮಂತ್ರಿಗಳೊಂದಿಗೆ ಹಲವು ಸಭೆಗಳನ್ನು ನಡೆಸಿದ್ದು. ಇದೀಗ ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಭಯ ಎದ್ದಿದೆ. ನಿತ್ಯ ದಾಖಲಾಗುವ ಕೇಸ್​ಗಳಲ್ಲೂ ಕ್ರಮೇಣ ಏರಿಕೆ ಕಾಣುತ್ತಿದೆ. ಹೀಗಾಗಿ ಮತ್ತೊಮ್ಮೆ ಪ್ರಧಾನಿ ಸಭೆ ಕರೆದಿದ್ದಾರೆ. 

ದೇಶದಲ್ಲಿ ಸದ್ಯ ಯಾವುದೇ ಕೊರೊನಾ ನಿಯಂತ್ರಣ ನಿರ್ಬಂಧಗಳಿಲ್ಲ. ಹಾಗೇ, ಲಸಿಕೆ ಮೂರನೇ ಡೋಸ್ ನೀಡಿಕೆ ಅಭಿಯಾನವೂ ನಡೆಯುತ್ತಿದೆ. ಈ ಮಧ್ಯೆ ಕೊರೊನಾ ಸೋಂಕಿನ ಪ್ರಸರಣವೂ ಹೆಚ್ಚುತ್ತಿದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು ಎಂದು ಸರ್ಕಾರಗಳು ಹೇಳುತ್ತಲೇ ಬರುತ್ತಿವೆ. ಇನ್ನು ಮೊನ್ನೆ ಭಾನುವಾರ ಮನ್​ ಕೀ ಬಾತ್​ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಈಗ ಹಲವು ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಹಬ್ಬಗಳನ್ನು ಖುಷಿಯಿಂದಲೇ ಆಚರಿಸಿ, ಆದರೆ ಅದರ ಮಧ್ಯೆ ಕೊವಿಡ್​ 19 ನಿಯಂತ್ರಣ ನಿಯಮಗಳ ಪಾಲನೆ ಮರೆಯಬೇಡಿ ಎಂದು ಹೇಳಿದ್ದರು. ಈದ್​, ಅಕ್ಷಯ ತೃತೀಯಾ, ಭಗವಾನ್ ಪರಶುರಾಮ ಜಯಂತಿ, ವೈಶಾಖ ಬುದ್ಧ ಪೂರ್ಣಿಮಾಗಳು ಸಮೀಪಿಸುತ್ತಿವೆ. ಇವೆಲ್ಲವರೂ ಕೂಡ ಸಾಮರಸ್ಯದ ಪ್ರತೀಕಗಳು. ನಾಮು ಮುಂಚಿತವಾಗಿಯೇ ಎಲ್ಲರಿಗೂ ಶುಭಾಶಯವನ್ನು ಕೋರುತ್ತಿದ್ದೇನೆ. ಆದರೆ ಈ ಹಬ್ಬಗಳ ಆಚರಣೆ ವೇಳೆ ಯಾರೂ ಕೊರೊನಾ ನಿಯಂತ್ರಣ  ನಿಯಮಗಳನ್ನು ಮರೆಯಬಾರದು. ಮಾಸ್ಕ್​ನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದರು.

ಭಾರತದಲ್ಲಿ ಈಗೀಗ ಪ್ರತಿದಿನ 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲಾಗುತ್ತಿವೆ. ನಿನ್ನೆ 2483 ಪ್ರಕರಣಗಳು ದಾಖಲಾಗಿದ್ದವು. ಈ ಮೂಲಕ ಭಾರತದ ಒಟ್ಟಾರೆ ಕೊರೊನಾ ಸೋಂಕಿನ ಸಂಖ್ಯೆ   43,062,569ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,636. ದೆಹಲಿ, ಉತ್ತರಪ್ರದೇಶ, ಕರ್ನಾಟಕ, ಪಂಜಾಬ್​​, ಹರ್ಯಾಣಗಳಲ್ಲಿ ಕೊರೊನಾ ಹೆಚ್ಚಳವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ನಡೆಸಲಿರುವ ಸಭೆ ಅತ್ಯಂತ ಮಹತ್ವದ್ದಾಗಿದೆ.

ಇದನ್ನೂ ಓದಿ: ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ

Published On - 9:52 am, Wed, 27 April 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್