Mission LiFE : ಕೆವಾಡಿಯಾದಲ್ಲಿ ಮಿಷನ್ ಲೈಫ್‌ಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೆವಾಡಿಯಾದಲ್ಲಿ ಮಿಷನ್ ಲೈಫ್‌ಗೆ ಚಾಲನೆ ನೀಡಲಿದ್ದಾರೆ. ತಾಪಿಯ ವ್ಯಾರಾದಲ್ಲಿ 1970 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಲಿದೆ.

Mission LiFE : ಕೆವಾಡಿಯಾದಲ್ಲಿ ಮಿಷನ್ ಲೈಫ್‌ಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
ಕೆವಾಡಿಯಾದಲ್ಲಿ ಮಿಷನ್ ಲೈಫ್‌ಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
Follow us
| Updated By: Rakesh Nayak Manchi

Updated on:Oct 20, 2022 | 10:24 AM

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ (Gujarat Election)ಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಲವು ಬಾರಿ ರಾಜ್ಯಕ್ಕೆ ಭೇಟಿಕೊಟ್ಟು ಒಂದಲ್ಲಾ ಒಂದು ಯೋಜನೆಗಳನ್ನು ಪ್ರಾರಂಭಿಸುತ್ತಿದ್ದಾರೆ. ಅಲ್ಲದೆ ಪೂರ್ಣಗೊಂಡ ಒಂದಷ್ಟು ಯೋಜನೆಗಳಿಗೆ ಚಾಲನೆಯನ್ನೂ ನೀಡಿದ್ದಾರೆ. ಮೋದಿ ಕೈಗೊಂಡಿರುವ ಎರಡು ದಿನಗಳ ಗುಜರಾತ್ ಪ್ರವಾಸದ ಕೊನೆಯ ದಿನವಾದ ಇಂದು ಕೆವಾಡಿಯಾದಲ್ಲಿ ಮಿಷನ್ ಲೈಫ್‌ (Mission LiFE )ಗೆ ಚಾಲನೆ ನೀಡಲಿದ್ದು, ತಾಪಿ ಜಿಲ್ಲೆಯ ವ್ಯರ ಪಟ್ಟಣದಲ್ಲಿ 1970 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ ಬೇರೆ ಬೇರೆ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಪ್ರಮುಖ ಅಧಿಕಾರಿಗಳ 10ನೇ ಸಮಾವೇಶದಲ್ಲೂ ಮೋದಿ ಭಾಗಿಯಾಗಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೆವಾಡಿಯಾದಲ್ಲಿ 10 ನೇ ಮುಖ್ಯಸ್ಥರ ಸಮಾವೇಶವನ್ನು ಆಯೋಜಿಸುತ್ತಿದೆ ಎಂದು ಏರ್ ವರದಿಗಾರ ವರದಿ ಮಾಡಿದ್ದಾರೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ವಿಶ್ವದಾದ್ಯಂತದ ರಾಯಭಾರಿಗಳು ಮತ್ತು ಹೈಕಮಿಷನರ್ ಗಳು ಸೇರಿದಂತೆ 100 ಕ್ಕೂ ಹೆಚ್ಚು ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಲಾಗುತ್ತಿದೆ. ಸಮಕಾಲೀನ ಭೌಗೋಳಿಕ ಮತ್ತು ಭೌಗೋಳಿಕ ಆರ್ಥಿಕ ಪರಿಸರ ಮತ್ತು ಸಂಪರ್ಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಸಮ್ಮೇಳನದಲ್ಲಿ ಚರ್ಚಿಸಲಾಗುತ್ತಿದೆ. ಅಲ್ಲದೆ ಪ್ರಧಾನಮಂತ್ರಿಯವರು ಕೆವಾಡಿಯಾದಲ್ಲಿ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ಬುಧವಾರ ಸಂಜೆ ಮೋದಿ ಅವರು ರಾಜ್​ಕೋಟ್​ ನಗರದಲ್ಲಿ ರೋಡ್​ಶೋ ನಡೆಸಿದರು. ವಿಮಾನ ನಿಲ್ದಾಣದಿಂದ ಆರಂಭವಾದ ಈ ರೋಡ್ ಶೋ ರೇಸ್ ಕೋರ್ಸ್ ಮೈದಾನದವರೆಗೆ ಸಾಗಿತು. ಬಳಿಕ ಅಲ್ಲಿ 7,000 ಕೋಟಿ ರೂಪಾಯಿಗಳ ಯೋಜನೆಗಳಿಗೆ ಚಾಲನೆ ನೀಡಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನದ ಮೇಲೆ ನಿಂತಿದ್ದ ಪ್ರಧಾನಿ ಮೋದಿ, 1.5 ಕಿಮೀ ಉದ್ದದ ಮಾರ್ಗದಲ್ಲಿ ಜನರತ್ತ ಕೈ ಬೀಸಿದರು. ಜುನಾಗಢ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ನಂತರ ಅಲ್ಲಿಗೆ ತಲುಪಿದ ಪ್ರಧಾನಿಯನ್ನು ಸ್ವಾಗತಿಸಲು ಸುಮಾರು 20,000 ಜನರು ಮಾರ್ಗದುದ್ದಕ್ಕೂ ಜಮಾಯಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುನಾಗಢದಲ್ಲಿ ಮಾಡಿದ ಭಾಷಣದುದ್ದಕ್ಕೂ ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರಲ್ಲದೆ ಜನರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಮಾಡಿದ್ದರು. ತಮ್ಮನ್ನು ಮತ್ತು ರಾಜ್ಯವನ್ನು ಅವಮಾನಿಸಿದವರಿಗೆ ತಕ್ಕ ಉತ್ತರ ನೀಡುವಂತೆಯೂ ಜನರಲ್ಲಿ ಮನವಿ ಮಾಡಿದ್ದರು. “ಕೆಲವರು ಗುಜರಾತಿಗಳನ್ನು ವಿಭಜಿಸಲು ಬಯಸುತ್ತಾರೆ. ಗುಜರಾತಿಗಳು ವ್ಯಾಪಾರ ಮತ್ತು ಕೈಗಾರಿಕೆಯನ್ನು ಆರಂಭಿಸಿದ್ದಾರೆ. ಆ ಮೂಲಕ ಇತರ ರಾಜ್ಯಗಳ ಜನರಿಗೆ ಉದ್ಯೋಗಗಳನ್ನು ನೀಡಿದ್ದಾರೆ. ಅಂತಹ ಗುಜರಾತಿಗಳನ್ನು ಅವಮಾನಿಸಲಾಗುತ್ತಿದೆ. ಇಂತಹವರಿಗೆ ಪಾಠ ಕಲಿಸಬೇಕು ಎಂದು ಭಾವಿಸಿದ್ದೀರಾ ಎಂದು ಪ್ರಶ್ನಿಸಿ ಗುಜರಾತ್‌ನ ಹೆಮ್ಮೆಗಾಗಿ ಅವರಿಗೆ ಪಾಠ ಕಲಿಸೋಣ ಎಂದಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Thu, 20 October 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ