AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ. 12ರಂದು ತಮಿಳುನಾಡಿನಲ್ಲಿ 11 ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಈ ಕಾಲೇಜುಗಳು 1,450 ಸೀಟುಗಳ ಸಾಮರ್ಥ್ಯವನ್ನು ಹೊಂದಿರುತ್ತವೆ ಎಂದು ಪ್ರಧಾನಿಯವರ ಕಚೇರಿ ಹೇಳಿದೆ. ಏತನ್ಮಧ್ಯೆ, ಚೆನ್ನೈನಲ್ಲಿರುವ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳಿನ (ಸಿಐಸಿಟಿ) ಹೊಸ ಕ್ಯಾಂಪಸ್ ಅನ್ನು ₹24 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಜ. 12ರಂದು ತಮಿಳುನಾಡಿನಲ್ಲಿ 11 ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 10, 2022 | 2:40 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನವರಿ 12, ಬುಧವಾರ ತಮಿಳುನಾಡಿನಲ್ಲಿ (Tamilnadu) 11 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ವಿಡಿಯೊ  ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಕಾರ, ಜನವರಿ 12 ರಂದು ವೈದ್ಯಕೀಯ ಕಾಲೇಜುಗಳ ಜೊತೆಗೆ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳಿನ (CICT) ಹೊಸ ಕ್ಯಾಂಪಸ್ ಕೂಡ ಚೆನ್ನೈನಲ್ಲಿ ಉದ್ಘಾಟನೆಯಾಗಲಿದೆ. ಈ ಹೊಸ ವೈದ್ಯಕೀಯ ಕಾಲೇಜುಗಳನ್ನು ಅಂದಾಜು ₹ 4,000 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದ್ದು, ಈ ಪೈಕಿ ₹ 2,145 ಕೋಟಿ ಕೇಂದ್ರ ಸರ್ಕಾರ ಮತ್ತು ಉಳಿದವುಗಳನ್ನು ತಮಿಳುನಾಡು ಸರ್ಕಾರ ಒದಗಿಸಿದೆ ಎಂದು ಪಿಎಂಒ ತಿಳಿಸಿದೆ.  ವಿರುದುನಗರ, ನಾಮಕ್ಕಲ್, ದಿ ನೀಲಗಿರಿ, ತಿರುಪ್ಪೂರ್, ತಿರುವಳ್ಳೂರು, ನಾಗಪಟ್ಟಣಂ, ದಿಂಡಿಗಲ್, ಕಲ್ಲಕುರಿಚಿ, ಅರಿಯಲೂರ್, ರಾಮನಾಥಪುರಂ ಮತ್ತು ಕೃಷ್ಣಗಿರಿ ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜುಗಳು ಸ್ಥಾಪನೆಯಾಗಲಿವೆ. ಕೈಗೆಟಕುವ ದರದಲ್ಲಿ ವೈದ್ಯಕೀಯ ಶಿಕ್ಷಣವನ್ನು ಉತ್ತೇಜಿಸಲು ಮತ್ತು ದೇಶದ ಎಲ್ಲಾ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಪ್ರಧಾನ ಮಂತ್ರಿಯವರ ನಿರಂತರ ಪ್ರಯತ್ನದ ಭಾಗವಿದು ಎಂದು ಪಿಎಂಒ ಹೇಳಿದೆ. ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಯೋಜನೆಯ ಭಾಗವಾಗಿ ಈ ಕಾಲೇಜುಗಳ ಉದ್ಘಾಟನೆ ಮಾಡಲಾಗುತ್ತಿದೆ.

ಈ ಕಾಲೇಜುಗಳು 1,450 ಸೀಟುಗಳ  ಸಾಮರ್ಥ್ಯವನ್ನು ಹೊಂದಿರುತ್ತವೆ ಎಂದು ಪ್ರಧಾನಿಯವರ ಕಚೇರಿ ಹೇಳಿದೆ. ಏತನ್ಮಧ್ಯೆ, ಚೆನ್ನೈನಲ್ಲಿರುವ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳಿನ (ಸಿಐಸಿಟಿ) ಹೊಸ ಕ್ಯಾಂಪಸ್ ಅನ್ನು ₹24 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದು ವಿಶಾಲವಾದ ಗ್ರಂಥಾಲಯ, ಇ-ಲೈಬ್ರರಿ, ಸೆಮಿನಾರ್ ಹಾಲ್‌ಗಳು ಮತ್ತು ಮಲ್ಟಿಮೀಡಿಯಾ ಹಾಲ್‌ನೊಂದಿಗೆ ಸುಸಜ್ಜಿತವಾಗಿರುತ್ತದೆ.

ಸಿಐಸಿಟಿ ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದ್ದು, ಭಾಷೆಯ ಪ್ರಾಚೀನತೆ ಮತ್ತು ಅನನ್ಯತೆಯನ್ನು ಸ್ಥಾಪಿಸಲು ಸಂಶೋಧನಾ ಚಟುವಟಿಕೆಗಳನ್ನು ಮಾಡುವ ಮೂಲಕ ಶಾಸ್ತ್ರೀಯ ತಮಿಳು ಭಾಷೆಯ ಪ್ರಚಾರಕ್ಕೆ ಕೊಡುಗೆ ನೀಡುತ್ತದೆ. ಇನ್ಸ್ಟಿಟ್ಯೂಟ್ ಲೈಬ್ರರಿಯು 45,000 ಪ್ರಾಚೀನ ತಮಿಳು ಪುಸ್ತಕಗಳ ಶ್ರೀಮಂತ ಸಂಗ್ರಹವನ್ನು ಹೊಂದಿದೆ.

ಇದು ವಿವಿಧ ಭಾರತೀಯ ಮತ್ತು 100 ವಿದೇಶಿ ಭಾಷೆಗಳಲ್ಲಿ ‘ತಿರುಕ್ಕುರಲ್’ ಅನ್ನು ಅನುವಾದಿಸಿ ಪ್ರಕಟಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: National Youth Festival 2022: ಜ. 12ಕ್ಕೆ ರಾಷ್ಟ್ರೀಯ ಯುವಜನೋತ್ಸವ; ಯುವಕರಿಂದ ಸಲಹೆ, ಐಡಿಯಾಗಳನ್ನು ಆಹ್ವಾನಿಸಿದ ಮೋದಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ