ಕೊವಿಡ್ ಏರಿಕೆ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಏಪ್ರಿಲ್ 27ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ ಮೋದಿ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುತ್ತಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಕೊವಿಡ್ ಏರಿಕೆ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಏಪ್ರಿಲ್ 27ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 24, 2022 | 10:23 PM

ದೆಹಲಿ:  ದೈನಂದಿನ ಸೋಂಕುಗಳ ಹೆಚ್ಚಳದ ಮಧ್ಯೆ ದೇಶದಲ್ಲಿ ಕೊವಿಡ್ -19 (Covid 19) ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ (ಏಪ್ರಿಲ್ 27) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ಭಾನುವಾರ ವರದಿ ಮಾಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುತ್ತಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya), ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಸಚಿವಾಲಯಗಳ ಅಧಿಕಾರಿಗಳು ಸಹ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಎಎನ್‌ಐ ವರದಿ ಮಾಡಿದೆ.  ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪ್ರಸ್ತುತ ಸಾಂಕ್ರಾಮಿಕ ಪರಿಸ್ಥಿತಿ, ವ್ಯಾಕ್ಸಿನೇಷನ್ ಪ್ರಮಾಣ (ವಿಶೇಷವಾಗಿ ಬೂಸ್ಟರ್ ಡೋಸ್‌ಗಳ ನೀಡಿಕೆ) ಮತ್ತು ಕೆಲವು ರಾಜ್ಯಗಳಲ್ಲಿ ಸೋಂಕಿನ ಬಗ್ಗೆ ಪ್ರಸ್ತುತಿ ಮಾಡಲಿದ್ದಾರೆ ಎಂದು ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ. ಈ ಹಿಂದೆಯೂ ಪ್ರಧಾನ ಮಂತ್ರಿಗಳು ನೆಲದ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳೊಂದಿಗೆ ಕೊವಿಡ್ -19 ಪರಿಶೀಲನಾ ಸಭೆಗಳನ್ನು ನಡೆಸಿದ್ದಾರೆ.

ಭಾರತದ ದೈನಂದಿನ ಕೊವಿಡ್ -19 ಪ್ರಕರಣಗಳು ಕಳೆದ ಎರಡು ವಾರಗಳಿಂದ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭಯವನ್ನು ಹುಟ್ಟುಹಾಕಿದೆ. ಭಾನುವಾರ ದೇಶವು 2,593 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ದಿನನಿತ್ಯದ ಸೋಂಕುಗಳು 2,500-ಮಾರ್ಕ್‌ಗಿಂತ ಹೆಚ್ಚಿರುವುದು ಇದು ಸತತ ಎರಡನೇ ದಿನವಾಗಿದೆ.

5,22,193 ಸಾವುಗಳು, 4,25,19,479 ಡಿಸ್ಚಾರ್ಜ್ ಮತ್ತು 15,873 ಸಕ್ರಿಯ ಪ್ರಕರಣಗಳು ಸೇರಿದಂತೆ ಒಟ್ಟಾರೆ ಪ್ರಕರಣಗಳ ಸಂಖ್ಯೆ 4,30,57,545 ಕ್ಕೆ ಏರಿದೆ. ಉತ್ತರ ಪ್ರದೇಶ, ದೆಹಲಿ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ರದ್ದುಗೊಳಿಸಿದ್ದು ಇದೀಗ ಪ್ರಕರಣಗಳು ಹೆಚ್ಚುತ್ತಿದ್ದಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶ ನೀಡಲಾಗಿದೆ.  ಮಾಸ್ಕ್ ಧರಿಸದವರಿಗೆ ಈ ರಾಜ್ಯಗಳು ದಂಡ ವಿಧಿಸಿವೆ.

ಇದನ್ನೂ ಓದಿ:ಮುಂಬೈನಲ್ಲಿ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ನರೇಂದ್ರ ಮೋದಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು