PM Narendra Modi: ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮೇ 30ರಂದು ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. 2 ದಿನಗಳ ಕಾಲ ಅಲ್ಲಿಯೇ ಇದ್ದು ಮೇ 31ರಂದು ವಿವೇಕಾನಂದ ರಾಕ್ ಮೆಮೋರಿಯಲ್ ಹಾಲ್​ನಲ್ಲಿ ಮೋದಿ ಧ್ಯಾನ ಮಾಡಲಿದ್ದಾರೆ. ಜೂನ್ 1ರಂದು ಕನ್ಯಾಕುಮಾರಿಯಿಂದ ತೆರಳುವ ನಿರೀಕ್ಷೆಯಿದೆ.

PM Narendra Modi: ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ
ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: May 28, 2024 | 4:06 PM

ಕನ್ಯಾಕುಮಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಕನ್ಯಾಕುಮಾರಿಯಲ್ಲಿರುವ ಬಂಡೆ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಅಂದರೆ ಮೇ 31ರಂದು ವಿವೇಕಾನಂದ ರಾಕ್ ಮೆಮೋರಿಯಲ್ ಹಾಲ್​ನಲ್ಲಿ (Swami Vivekananda Rock Memorial Hall) ಮೋದಿ ಧ್ಯಾನ ಮಾಡಲಿದ್ದಾರೆ. ಮೇ 31ರ ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರು ಭಾರತ ಮಾತೆಯ ದರ್ಶನ ಪಡೆದ ಸ್ಥಳ ಕನ್ಯಾಕುಮಾರಿ (Kanniyakumari). ಈ ಬಂಡೆಯು ಸ್ವಾಮಿ ವಿವೇಕಾನಂದರ ಜೀವನದ ಮೇಲೆ ದೊಡ್ಡ ಪ್ರಭಾವ ಬೀರಿತು. ಗೌತಮ ಬುದ್ಧನ ಜೀವನದಲ್ಲಿ ಸಾರನಾಥಕ್ಕೆ ವಿಶೇಷ ಸ್ಥಾನವಿದೆ ಎಂದು ಜನರು ನಂಬುತ್ತಾರೆ. ಈ ಬಂಡೆಯು ಸ್ವಾಮಿ ವಿವೇಕಾನಂದರ ಜೀವನದಲ್ಲಿಯೂ ಸಹ ಅದೇ ಸ್ಥಾನವನ್ನು ಹೊಂದಿದೆ.

ಪಾರ್ವತಿ ದೇವಿಯು ಸಹ ಅದೇ ಸ್ಥಳದಲ್ಲಿ ಭಗವಾನ್ ಶಿವನಿಗಾಗಿ ಕಾಯುತ್ತಾ ಒಂದೇ ಕಾಲಿನಲ್ಲಿ ನಿಂತು ಧ್ಯಾನ ಮಾಡಿದ್ದಳು ಎಂಬ ನಂಬಿಕೆಯಿದೆ. ಕನ್ಯಾಕುಮಾರಿ ಭಾರತದ ದಕ್ಷಿಣದ ತುದಿಯಾಗಿದೆ. ಇದಲ್ಲದೆ, ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ. ಪ್ರಧಾನಿ ಮೋದಿಯವರು ಕನ್ಯಾಕುಮಾರಿಗೆ ಹೋಗುವ ಮೂಲಕ ರಾಷ್ಟ್ರೀಯ ಏಕತೆಯ ಸಂಕೇತವನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: ‘ನರೇಂದ್ರ ಮೋದಿ ಒಬಿಸಿ ಆದದ್ದು ಹೇಗೆ?’; ಜಾತಿ ಗಣತಿ ಪರ ಮತ್ತೆ ರಾಹುಲ್ ಗಾಂಧಿ ಬ್ಯಾಟಿಂಗ್

ಚುನಾವಣೆ ಮುಗಿದ ನಂತರವೂ ಅವರು ಕನ್ಯಾಕುಮಾರಿಗೆ ಭೇಟಿ ನೀಡುತ್ತಿರುವುದು ಪ್ರಧಾನಿಯವರ ಆಳವಾದ ಬದ್ಧತೆ ಮತ್ತು ತಮಿಳುನಾಡಿನ ಮೇಲಿನ ಪ್ರೀತಿಯನ್ನು ತೋರಿಸುತ್ತದೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಮಂತ್ರಿ ಆಧ್ಯಾತ್ಮಿಕ ಯಾತ್ರೆಗಳನ್ನು ಕೈಗೊಳ್ಳುತ್ತಾರೆ.

ನರೇಂದ್ರ ಮೋದಿಯವರು ಕಳೆದ 2 ಬಾರಿಯೂ ಚುನಾವಣೆ ಮುಗಿದ ಬಳಿಕ ಫಲಿತಾಂಶ ಬರುವುದಕ್ಕೂ ಮೊದಲು ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದರು. ಈ ಬಾರಿ ನರೇಂದ್ರ ಮೋದಿ ಅವರು ಮೇ 30ರಂದು ಕನ್ಯಾಕುಮಾರಿ ತಲುಪುತ್ತಾರೆ ಮತ್ತು ಜೂನ್ 1ರವರೆಗೆ ಅಲ್ಲಿಯೇ ಇರುತ್ತಾರೆ. 2019ರಲ್ಲಿ ಚುನಾವಣೆಯ ಬಳಿಕ ಮೋದಿ ಅವರು ಕೇದಾರನಾಥಕ್ಕೆ ಭೇಟಿ ನೀಡಿದ್ದರು. 2014ರಲ್ಲಿ ಅವರು ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಚೀನಾದೊಂದಿಗೆ ಮೋದಿ ಡಿಸ್ಕೋ ಮಾಡುತ್ತಿದ್ದಾರೆ; ಪ್ರಧಾನಿ ‘ಮುಜ್ರಾ’ ಹೇಳಿಕೆಗೆ ಅಸಾದುದ್ದೀನ್ ಓವೈಸಿ ತಿರುಗೇಟು

2019ರ ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಕೆಲವು ದಿನಗಳ ಮೊದಲು ಪ್ರಧಾನಿ ಮೋದಿ ಉತ್ತರಾಖಂಡದ ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಪ್ರಧಾನಿ ಮೋದಿ ಹಿಮಾಲಯದ 11,700 ಅಡಿ ಎತ್ತರದ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಕೇದಾರನಾಥದಿಂದ 1 ಕಿಲೋ ಮೀಟರ್ ದೂರದಲ್ಲಿರುವ ಈಗ ಪ್ರಸಿದ್ಧವಾದ ರುದ್ರ ಧ್ಯಾನದ ಗುಹೆಯಲ್ಲಿ ಅವರು ರಾತ್ರಿಯನ್ನು ಕಳೆದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ